ಬೆಂಗಳೂರಿನ ಆಸ್ತಿದಾರರಿಗೆ ಆಸ್ತಿ ತೆರಿಗೆ ವಿಚಾರದಲ್ಲಿ ಬಂಪರ್ ಗುಡ್‌ನ್ಯೂಸ್‌!

ಬೆಂಗಳೂರಿನ ಆಸ್ತಿದಾರರಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್‌ನ್ಯೂಸ್‌ ಕೊಟ್ಟಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಬಿಬಿಎಂಪಿಯು ಮತ್ತೊಮ್ಮೆ ಗುಡ್‌ನ್ಯೂಸ್‌ ನೀಡಿದೆ. ಬಿಬಿಎಂಪಿಯ ಈ ಗುಡ್‌ನ್ಯೂಸ್‌ನಿಂದಾಗಿ ಬೆಂಗಳೂರಿನಲ್ಲಿ ಬರೋಬ್ಬರಿ 25 ಲಕ್ಷ ಆಸ್ತಿದಾರರಿಗೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ. ನಗರದಲ್ಲಿ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಬಿಬಿಎಂಪಿಯು ಈಗಾಗಲೇ ಶೇ 5ರಷ್ಟು ಡಿಸ್ಕೌಂಟ್ ನೀಡಿದೆ. ಇದೀಗ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟಿದೆ. ಅದೇನು ಎನ್ನುವ ವಿವರ ಇಲ್ಲಿದೆ.

ಬಿಬಿಎಂಪಿ ಆಡಳಿತ ವ್ಯಾಪ್ತಿಯಲ್ಲಿ 2025-26 ನೇ ಸಾಲಿನಲ್ಲಿ ಆಸ್ತಿದಾರರ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ. 5% ಆಸ್ತಿ ತೆರಿಗೆ ರಿಯಾಯಿತಿ ಅವಧಿಯನ್ನು 31ನೇ ಮೇ, 2025 ವರೆಗೆ ವಿಸ್ತರಣೆ ಮಾಡಿ ಆದೇಶ ಮಾಡಲಾಗಿದೆ. ಇದರಿಂದ ಆಸ್ತಿದಾರರಿಗೆ ಭರ್ಜರಿ ಲಾಭವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

Bumper Good News for Bengaluru Property Owners Property Tax 5 Discount Extended Till May 31

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 30-04-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5% ರಷ್ಟು ರಿಯಾಯಿತಿ ನೀಡಲಾಗಿರುತ್ತದೆ.

ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ಶೇ. 5 % ರಷ್ಟು ರಿಯಾಯಿತಿ ಅವಧಿಯನ್ನು ದಿನಾಂಕ: 31-05-2025 ರವರೆಗೆ ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ: 31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಆಡಳಿತಗಾರರ ನಡವಳಿಗಳಿಗೆ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿತ್ತು. ಈ ಪ್ರಸ್ತಾವನೆಗೆ ಸರ್ಕಾರದಿಂದ ಆದೇಶ ನೀಡಿ ಅಧಿಸೂಚನೆ ಹೊರಡಿಸಲಾಗಿರುತ್ತದೆ.

ಸರ್ಕಾರದ ನಗರಭಿವೃದ್ಧಿ ಇಲಾಖೆಯ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ದಿನಾಂಕ:31-05-2025 ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಆಸ್ತಿದಾರರಿಗೆ ಬಂಪರ್‌: ಇನ್ನು ಬಿಬಿಎಂಪಿಯು ಬರೋಬ್ಬರಿ 2 ತಿಂಗಳ ಅವಧಿ ಆಸ್ತಿ ತೆರಿಗೆ ಪಾವತಿಯ ಮೇಲೆ ಟ್ಯಾಕ್ಸ್‌ ರಿಯಾಯಿತಿ ನೀಡಿರುವುದರಿಂದ ಬೆಂಗಳೂರಿನ ಲಕ್ಷಾಂತರ ಲಕ್ಷಾಂತರ ಆಸ್ತಿದಾರರಿಗೆ ಲಾಭವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಇನ್ನು ಈ ಬಾರಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಆಸ್ತಿ ತೆರಿಗೆ ಸಂಗ್ರಹದಲ್ಲಿ ಹೊಸ ದಾಖಲೆ ಮಾಡಿದೆ. ಕಳೆದ ಬಾರಿಗಿಂತಲೂ ಈ ಬಾರಿ 1 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಸಂಗ್ರಹಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+