ವಾಹನ ಸವಾರರಿಗೆ ಬಂಪರ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿ ಶೇ. 50ರಷ್ಟು ಡಿಸ್ಕೌಂಟ್, ಎಷ್ಟು ದಿನ ಇರಲಿದೆ ?
Karnataka Traffic Fine Discount: ಕರ್ನಾಟಕ ಸರ್ಕಾರವು ವಾಹನ ಸವಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ಮಾತ್ರವೇ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಬರೋಬ್ಬರಿ ಶೇಕಡ 50% ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಪೊಲೀಸ್ ಇಲಾಖೆಯ ಇ - ಚಲನ್‌ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಮೇಲಿನ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ ಘೋಷಿಸಿರುವುದು ವಾಹನ ಸವಾರರಲ್ಲಿ ಸಂತೋಷವನ್ನುಂಟು ಮಾಡಿದೆ.

ಆಗಸ್ಟ್ 23ರಿಂದ ಸೆಪ್ಟೆಂಬರ್ 12ರವರೆಗೆ ಮಾತ್ರ ಶೇ. 50ರಷ್ಟು ರಿಯಾಯಿತಿ ದಂಡ ಪಾವತಿಗೆ ಅವಕಾಶ ನೀಡಲಾಗಿದೆ. ದಂಡ ಪಾವತಿ ಬಾಕಿ ಅಥವಾ ಉಳಿಸಿಕೊಂಡಿರುವ ವಾಹನ ಸವಾರರು ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ವೆಬ್‌ಸೈಟ್‌ಗಳಲ್ಲಿ ವಾಹನ ದಂಡದ ವಿವರವನ್ನು ಪಡೆದುಕೊಂಡು ದಂಡ ಪಾವತಿ ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ಜಿಲ್ಲೆಗಳಲ್ಲಿ ಸಮೀಪದ ಪೊಲೀಸ್ ಠಾಣೆಗಳಿಗೆ ಖುದ್ದು ಭೇಟಿ ನೀಡಿ ರಿಯಾಯಿತಿ ದರದಲ್ಲಿ ದಂಡ ಕಟ್ಟುವುದಕ್ಕೂ ಅವಕಾಶ ನೀಡಲಾಗಿದೆ.
ರಾಜ್ಯದಾದ್ಯಂತ ವಾಹನ ಸವಾರರು ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡ ಪಾವತಿ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಆನ್‌ಲೈನ್ ಮೂಲಕ ಪಾವತಿ ಮಾಡುವವರು ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‌ಪಿ) ಆ್ಯಪ್ ಬಿಟಿಪಿ ಅಸ್ತ್ರಂ ಮುಖಾಂತರ ಸಹ ಖುದ್ದಾಗಿ ದಂಡ ಪಾವತಿ ಮಾಡುವುದಕ್ಕೆ ಅವಕಾಶ ನೀಡಲಾಗಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ರಾಜ್ಯ ಸರ್ಕಾರವು ಗುರುವಾರ ರಿಯಾಯಿತಿ ಘೋಷಣೆ ಮಾಡಿರುವುದರಿಂದಾಗಿ ಆಗಸ್ಟ್ 21ಕ್ಕಿಂತ ಹಿಂದಿನ ದಿನಗಳಲ್ಲಿ ಸಂಚಾರ ನಿಯಮ / ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿರುವ ಪ್ರಕರಣಗಳ ಮೇಲೆ ಶೇ. 50ರಷ್ಟು ದಂಡ ರಿಯಾಯಿತಿ ಸಿಗಲಿದೆ. ಆ ಸಂದರ್ಭದಲ್ಲೂ ಲಕ್ಷಾಂತರ ಜನ ವಾಹನ ಸವಾರರು ಅರ್ಧ ದಂಡ ಪಾವತಿ ಮಾಡಿ ಲಾಭ ಮಾಡಿಕೊಂಡಿದ್ದರು. ಸರ್ಕಾರಕ್ಕೂ ಇದರಿಂದ ಕೋಟ್ಯಾಂತರ ರೂಪಾಯಿ ಲಾಭವಾಗಿತ್ತು. ಇದೀಗ ರಾಜ್ಯ ಸರ್ಕಾರವು ಮತ್ತೊಮ್ಮೆ ಡಿಸ್ಕೌಂಟ್ ಘೋಷಣೆ ಮಾಡಿದೆ.
ಇನ್ನು ಇತ್ತೀಚೆಗೆ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪೊಲೀಸ್ ಇಲಾಖೆ ಇ-ಚಲನ್‌ಗಳಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ. 50ರಷ್ಟು ದಂಡ ವಿನಾಯಿತಿ ಮತ್ತು ಸಾರಿಗೆ ಇಲಾಖೆಯಲ್ಲಿ 2018 - 19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರಿಂದ ಶೇ. 50ರಷ್ಟು ರಿಯಾಯಿತಿ ಕೊಡುವುದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದರು. ಈ ಪ್ರಸ್ತಾವನೆಗೆ ಕೆಲವೊಂದು ನಿರ್ದಿಷ್ಟ ಷರತ್ತುಗಳನ್ನು ವಿಧಿಸುವ ಮೂಲಕ ಅನುಮೋದನೆ ನೀಡಲಾಗಿದೆ.












Click it and Unblock the Notifications