ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬುರೇವಿ ಚಂಡಮಾರುತ; ಬೆಂಗಳೂರಲ್ಲಿ ಬೆಳಗ್ಗೆಯೇ ಮಳೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 03: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮುಂಜಾನೆಯೇ ಮಳೆ ಜನರಿಗೆ ಕಿರಿಕಿರಿ ಉಂಟು ಮಾಡಿದೆ. 'ಬುರೇವಿ' ಚಂಡಮಾರುತದ ಪರಿಣಾಮ ನಗರದಲ್ಲಿ ಡಿಸೆಂಬರ್ 5ರ ತನಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಗುರುವಾರ ಮುಂಜಾನೆಯೇ ನಗರದಲ್ಲಿ ತುಂತುರು ಮಳೆ ಸುರಿಯುತ್ತಿದೆ. ಬೆಳಗ್ಗೆ ವಾಕಿಂಗ್ ಹೊರಟವರು ಅದನ್ನು ರದ್ದು ಮಾಡಿ ಮನೆಯಲ್ಲಿಯೇ ಕುಳಿತರು. ಹಾಲು ತರಲು ಹೊರಟವರು ಛತ್ರಿಗಾಗಿ ಹುಡುಕುವಂತೆ ಆಯಿತು.

ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಕರ್ನಾಟಕದಲ್ಲಿ ಡಿಸೆಂಬರ್ 3ರಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Burevi Cyclone Light Showers In Bengaluru City

ನಗರದ ವಿಜಯನಗರ, ಅತ್ತಿಗುಪ್ಪೆ, ದೀಪಾಂಜಲಿ ನಗರ, ವಿದ್ಯಾಪೀಠ ಸರ್ಕಲ್, ಮೈಸೂರು ರಸ್ತೆ, ಬಸವನಗುಡಿ, ಎನ್. ಆರ್. ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬೆಳಗ್ಗೆ ತುಂತುರು ಮಳೆಯಾಗಿದೆ. ಮೋಡ ಕವಿದ ವಾತಾವರಣ ಮುಂದುವರೆದಿದೆ.

ವಾಯುಭಾರ ಕುಸಿತ; 4 ದಿನ ಕರ್ನಾಟಕದಲ್ಲಿ ಮಳೆ ವಾಯುಭಾರ ಕುಸಿತ; 4 ದಿನ ಕರ್ನಾಟಕದಲ್ಲಿ ಮಳೆ

ಶ್ರೀಲಂಕಾ ಮತ್ತು ತಮಿಳುನಾಡು ಭಾಗಕ್ಕೆ ಅಪ್ಪಳಿಸುವ 'ಬುರೇವಿ' ಚಂಡಮಾರುತ ಕರ್ನಾಟಕದ ಮೇಲೆ ಹೆಚ್ಚು ಪ್ರಭಾವ ಬೀರುವುದಿಲ್ಲ. ಆದರೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮತ್ತೆ ವಾಯುಭಾರ ಕುಸಿತ, ಮತ್ತೆ ಮಳೆ ಮತ್ತೆ ವಾಯುಭಾರ ಕುಸಿತ, ಮತ್ತೆ ಮಳೆ

ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಮಳೆಯಾಗಲಿದೆ. ಡಿಸೆಂಬರ್ 5ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಡಿಸೆಂಬರ್ 3 ಮತ್ತು 4 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

English summary
Karnataka's Bengaluru received light showers on December 3rd morning due to Burevi cyclone effect.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X