ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾದ ದೇಹ ಪತ್ತೆ

|
Google Oneindia Kannada News

ಬೆಂಗಳೂರು, ಮಾರ್ಚ್ 30: ತುರಹಳ್ಳಿ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ದೇಹ ಪತ್ತೆಯಾಗಿದೆ.

ಎರಡು ದಿನಗಳ ಹಿಂದಷ್ಟೇ ಬೆಂಕಿ ಕಾಣಿಸಿಕೊಂಡಿತ್ತು, ಈ ಬೆಂಕಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆತನ ಮೃತದೇಹದಿಂದ ಕೆಲವೇ ಕೆಲವು ದೂರದಲ್ಲಿ ಡೀಸೆಲ್ ಪತ್ತೆಯಾಗಿದ್ದು, ಇದನ್ನು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ನಿರ್ಧರಿಸಲು ಸಾಧ್ಯವಾಗಿಲ್ಲ. ವ್ಯಕ್ತಿ ಯಾರೆಂಬುದು ಇನ್ನೂ ತಿಳಿದುಬಂದಿಲ್ಲ.

ಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, ಇಬ್ಬರು ಸಜೀವ ದಹನಉತ್ತರ ಪ್ರದೇಶದ ಆಸ್ಪತ್ರೆಯೊಂದರಲ್ಲಿ ಅಗ್ನಿ ಅವಘಡ, ಇಬ್ಬರು ಸಜೀವ ದಹನ

ನಗರದ ತುರಹಳ್ಳಿ ಅರಣ್ಯದಲ್ಲಿ ಶನಿವಾರ ಸಂಜೆ ಕಾಣಿಸಿಕೊಂಡ ಬೆಂಕಿಯಿಂದ ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶ ಆಹುತಿಯಾಗಿತ್ತು. ಸಂಜೆ ಎಂಟು ಗಂಟೆ ಸಮಯದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದರು.

Burnt Body Found In Turahalli Forest

ಒಂದು ಅಗ್ನಿಶಾಮಕ ವಾಹನ. 25ಕ್ಕೂ ಹೆಚ್ಚು ಮಂದಿ ಸ್ಥಳೀಯರು ಹಾಗೂ 13 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಸುಮಾರು ಮೂರು ತಾಸು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದರು.

Recommended Video

ಎಲ್ಲೆಲ್ಲೂ GO BACK MODI ಘೋಷಣೆ! | Oneindia Kannada

ಬೇಸಿಗೆ ಸಮೀಪಿಸುತ್ತಿರುವುದರಿಂದ ಹುಲ್ಲು ಒಣಗಿ ಹೋಗಿದೆ, ಇದರಿಂದ ಬೆಂಕಿಯ ಕೆನ್ನಾಲಿಗೆ ಶೀಘ್ರ ಹರಡಿದೆ. ಆದರೆ ಅಂದು ಯಾವುದೇ ಪ್ರಾಣಿಗಳಿಗೆ ಅಥವಾ ಮನುಷ್ಯರಿಗೆ ಹಾನಿಯಾಗಿರುವ ಕುರಿತು ವರದಿಯಾಗಿರಲಿಲ್ಲ. ಆದರೆ ಬಳಿಕ ಅರಣ್ಯಾಧಿಕಾರಿಗಳು ತಪಾಸಣೆಗೆಂದು ತೆರಳಿದಾಗ ಸುಟ್ಟು ಕರಕಲು ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು.

English summary
Talaghattapura police have registered a murder case after they found a burnt body inside Turahalli forest.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X