Business Corridor: ಬೆಂಗಳೂರಿನ ಈ ಸ್ಥಳದಿಂದ ಮೈಸೂರು ರಸ್ತೆವರೆಗೆ ಬ್ಯುಸಿನೆಸ್ ಕಾರಿಡಾರ್ ನಿರ್ಮಾಣ, ವೆಚ್ಚ ಎಷ್ಟು?
ಬೆಂಗಳೂರು, ಮಾರ್ಚ್, 07: ಬೆಂಗಳೂರು ದಿನದಿಂದ ದಿನಕ್ಕೆ ಅಭಿವೃದ್ಧಿಯಾದಂತೆಲ್ಲ ರಸ್ತೆಗಳು ಕೂಡ ಹೊಸ ಲುಕ್ ಪಡೆದುಕೊಳ್ಳುತ್ತಿವೆ. ಇನ್ನು ಹೊಸೂರು ಬನ್ನೇರುಘಟ್ಟ ರಸ್ತೆ, ಕನಕಪುರ ರಸ್ತೆ ಮೂಲಕ ಮೈಸೂರು ರಸ್ತೆವರೆಗೆ ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣಕ್ಕೆ ಬಿಡಿಎ ತೀರ್ಮಾನ ಮಾಡಿದೆ. ಹಾಗಾದರೆ ಎಷ್ಟು ಕಿ.ಮೀ ಉದ್ದ ಹಾಗೂ ಇದಕ್ಕೆ ತಗಲುವ ಎಷ್ಟು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈ ರಸ್ತೆಗೆ ಟೋಲ್ ಇರುವುದಿಲ್ಲ ಎನ್ನುವುದೇ ವಿಶೇಷ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಾರಿಡಾರ್ ನಿರ್ಮಾಣ ಆಗಲಿದೆ. ಈ ರಸ್ತೆಯು 100 ಮೀಟರ್ ಅಗಲದಲ್ಲಿ 30 ಕಿ.ಮೀ ಉದ್ದ ಇರಲಿದೆ. ಕಾರಿಡಾರ್‌ನ ರಸ್ತೆಯ ಎರಡೂ ಕಡೆಯಲ್ಲಿ ತಲಾ 24 ಮೀಟರ್ ವಾಣಿಜ್ಯ ನಿವೇಶನಗಳನ್ನು ರಚನೆ ಮಾಡಲಾಗುತ್ತದೆ.

ಇನ್ನು ಈ ವಾಣಿಜ್ಯ ಪ್ರದೇಶವನ್ನು ಮಾರಾಟ ಮಾಡಿ ವ್ಯಾಪಾರ ವ್ಯವಹಾರಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಆದ್ದರಿಂದ ಈ ರಸ್ತೆಯನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಾರಿಡಾರ್ ನಿರ್ಮಾಣ ಆಗುತ್ತಿದೆ.
ಈ ಕಾರಿಡಾರ್ ಉದ್ದಕ್ಕೂ 43 ಅಂಡರ್ ಪಾಸ್, ಮೇಲ್ಸೇತುವೆ ಹಾಗ್ರೂ ಗ್ರೇಡ್ ಸೆಪರೇಟರ್‌ಗಳು ಈ ನಿರ್ಮಾಣ ಆಗಲಿವೆ. ಇವುಗಳನ್ನು ಬಿಡಿಎ ನಿರ್ವಹಣೆ ಮಾಡಲಿದೆ ಎಂದು ತಿಳಿದುಬಂದಿದೆ. ಒಟ್ಟು 1,569 ಕೋಟಿ ರೂಪಾಯಿ ಅಂದಾಜು ವೆಚ್ಚದ ಈ ಕಾರಿಡಾರ್ ಅನ್ನು ಕೇವಲ 30 ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ.
ಡಿಪಿಆರ್ ತಯಾರಿ, ಟೆಂಡರ್ ಆಹ್ವಾನ, ಕಾರ್ಯಾದೇಶ ನೀಡುವುದು ಮತ್ತು ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸಲು ಬಿಡಿಎ ಯೋಜನೆ ರೂಪಿಸಿ, ಯೋಜನಾ ನಿರ್ವಹಣೆ ಸಲಹಾ ಸೇವೆಗೆ ಟೆಂಡರ್ ಆಹ್ವಾನಿಸಿದೆ. ಬ್ಯುಸಿನೆಸ್ ಕಾರಿಡಾರ್ ರಸ್ತೆಯು ಹೊಸೂರು ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕದಿಂದ ಆರಂಭವಾಗಿ ಆನೇಕಲ್‌ನ ಅತ್ತಿಬೆಲೆ, ಜಿಗಣಿ ಕೈಗಾರಿಕೆ ಪ್ರದೇಶಗಳಿಗೂ ಸಂಪರ್ಕ ಕಲ್ಪಿಸುತ್ತದೆ.
ಬನ್ನೇರುಘಟ್ಟ ರಸ್ತೆ ಹಾಗೂ ಕನಕಪುರ ರಸ್ತೆಗೂ ಟ್ರಕ್ ಟರ್ಮಿನಲ್‌ಗಳನ್ನು ಒದಗಿಸಲಿದ್ದು, ಅಲ್ಲಿನ ಉದ್ಯಮಗಳಿಗೂ ಅನುಕೂಲ ಆಗಲಿದೆ. ಬೆಂಗಳೂರು ನಗರ ಕೇಂದ್ರ ಭಾಗದಲ್ಲಿ ಭಾರಿ ವಾಹನ ಮತ್ತು ಟ್ರಕ್‌ಗಳ ಸಂಚಾರದಿಂದ ಉಂಟಾಗುತ್ತಿದ್ದ ದಟ್ಟಣೆ ಇದರಿಂದ ನಿವಾರಣೆ ಆಗಲಿದೆ ಎಂದು ನಿರೀಕ್ಷಿಸಲಾಗಿದೆ. ಅದಕ್ಕಾಗಿ ಪ್ರತ್ಯೇಕ ಮಾರ್ಗವನ್ನೇ ರಚಿಸುವುದರ ಜೊತೆ ವಾಣಿಜ್ಯ ವ್ಯವಹಾರಗಳನ್ನೂ ಉತ್ತೇಜಿಸಲಾಗುತ್ತದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಹೊಸೂರು ರಸ್ತೆಯಿಂದ ತುಮಕೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಉದ್ದೇಶವನ್ನು ಪೆರಿಫೆರಲ್ ವರ್ತುಲ ರಸ್ತೆ (ಪಿಆರ್‌ಆರ್)-2 ಯೋಜನೆ ಹೊಂದಿದೆ. ಕೆಂಪೇಗೌಡ ಬಡಾವಣೆಯಲ್ಲಿ ಮೈಸೂರು ರಸ್ತೆಯಿಂದ ಮಾಗಡಿ ರಸ್ತೆವರೆಗೆ ನಿರ್ಮಾಣ ಆಗುತ್ತಿರುವ 10 ಕಿಲೋ ಮೀಟರ್ ಪ್ರಮುಖ ರಸ್ತೆಯು (ಎಂಎಆರ್) ಈ ಪಿಆರ್‌ಆರ್ -2ನ ಒಂದು ಭಾಗವಾಗಿದೆ.
ಹೊಸೂರು ರಸ್ತೆಯಿಂದ ಮೈಸೂರು ರಸ್ತೆವರೆಗಿನ ಬ್ಯುಸಿನೆಸ್ ಕಾರಿಡಾರ್ ಅನ್ನು ಎಂಎಆರ್‌ಗೆ ಸಂಪರ್ಕಿಸಲಾಗುತ್ತದೆ. ಈ ಎಂಎಆರ್ 9 ಕಿಲೊ ಮೀಟರ್ ಕಾಮಗಾರಿಯು ಅಂತಿಮ ಹಂತದಲ್ಲಿದೆ. ಒಂದು ಕಿಲೋ ಮೀಟರ್ ವ್ಯಾಪ್ತಿಯ ಪ್ರದೇಶದ ಪ್ರಕರಣ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅದು ಇತ್ಯರ್ಥವಾದ ಕೂಡಲೇ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ.
ನಂತರ ಮಾಗಡಿ ರಸ್ತೆಯಿಂದ ತುಮಕೂರು ರಸ್ತೆಗೆ ಬ್ಯುಸಿನೆಸ್ ಕಾರಿಡಾರ್‌ಗೆ ಸಂಪರ್ಕ ಕಲ್ಪಿಸಲು ಎರಡನೇ ಹಂತದಲ್ಲಿ ಯೋಜನೆಯನ್ನು ಕೈಗೊಳ್ಳಲಾಗುತ್ತದೆ. 100 ಮೀಟರ್ ಅಗಲದ ಕಾರಿಡಾರ್‌ನಲ್ಲಿ 3 ಮೀಟರ್ ಡಿವೈಡರ್ ಸೇರಿದಂತೆ 25 ಮೀಟರ್‌ನಲ್ಲಿ ರಸ್ತೆ ನಿರ್ಮಾಣ ಆಗುತ್ತದೆ. ತಲಾ 10 ಮೀಟರ್‌ಗಳ ಎರಡು ಸರ್ವೀಸ್ ರಸ್ತೆಯನ್ನೂ ನಿರ್ಮಾಣ ಮಾಡಲಾಗುತ್ತದೆ. ರಸ್ತೆಯ ಎರಡೂ ಬದಿಗಳಲ್ಲೂ 24 ಮೀಟರ್ ಅಗಲದಲ್ಲಿ ವಾಣಿಜ್ಯ ನಿವೇಶನಗಳನ್ನು ರಚನೆ ಮಾಡಲಾಗುತ್ತದೆ.
ಕಾರಿಡಾರ್ ನಿರ್ಮಾಣದ ಜೊತೆ ಈ ನಿವೇಶನಗಳನ್ನು ರಚಿಸಿ ಮಾರಾಟ ಮಾಡಲು ಉದ್ದೇಶಿಸಲಾಗಿದೆ. ಇದರಿಂದ ಸಂಪನ್ಮೂಲ ಸಂಗ್ರಹ ಆಗಲಿದ್ದು, ಈ ರಸ್ತೆ ನಿರ್ಮಾಣಕ್ಕೆ ಯಾವುದೇ ರೀತಿಯ ಹಣದ ಕೊರತೆ ಉಂಟಾಗುವುದಿಲ್ಲ. ತ್ವರಿತವಾಗಿ ಪೂರ್ಣಗೊಳಿಸಲು ಸಾಧ್ಯ ಆಗುತ್ತದೆ. ಆದ್ದರಿಂದ ರಸ್ತೆ ಬಳಕೆಗೆ ಶುಲ್ಕವನ್ನು ವಿಧಿಸುವ ಪ್ರಮೇಯವೇ ಉದ್ಭವಿಸುವುದಿಲ್ಲ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಹೆಬ್ಬಗೋಡಿ, ವೀರಸಂದ್ರ, ಗೊಲ್ಲಹಳ್ಳಿಯಲ್ಲಿ ಭೂ ಸ್ವಾಧೀನ ಆಗಲಿದೆ. ಜಿಗಣಿ ಹೋಬಳಿಯ ಭೂತನಹಳ್ಳಿ, ಕನ್ನಿಕನ ಅಗ್ರಹಾರ, ಮಾರಗೊಂಡನಹಳ್ಳಿ, ಹುಲಿಮಂಗಲ, ಬಿಂಗಿಪುರ, ಹುಲ್ಲಹಳ್ಳಿ, ಬಿಲ್ವಾರದಹಳ್ಳಿಯಲ್ಲಿಯೂ ಭೂಸ್ವಾಧೀನ ನಡೆಯಲಿದೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ಹೊಮ್ಮದೇವನಹಳ್ಳಿ, ಬಸವನಪುರ, ಉತ್ತರಹಳ್ಳಿ ಹೋಬಳಿಯ ಪಿಳ್ಳಗಾನಹಳ್ಳಿ, ಗುಳಕಮಲೆ, ಕಗ್ಗಲಿಪುರ, ಉತ್ತರಿ ಗೊಟ್ಟಿಗೆರೆ, ಕೆಂಗೇರಿ ಹೋಬಳಿಯ ಬಿ.ಎಂ.ಕಾವಲ್, ಅಗರ, ದೇವಗೆರೆ, ಗುಡಿಮಾವು, ಕಂಬೀಪುರ, ಚಲ್ಲಘಟ್ಟ, ಕೆ.ಕೃಷ್ಣಸಾಗರ, ಭೀಮನಕುಪ್ಪೆ, ಕೊಮ್ಮಘಟ್ಟ, ಸೂಲಿಕೆರೆ, ಕೆಂಚನಪುರದಲ್ಲಿ ಭೂಸ್ವಾಧೀನ ನಡೆಯಲಿದೆ.
ದಾಸನಪುರ ಹೋಬಳಿಯ ಮಾಚೋಹಳ್ಳಿ, ವಡ್ಡರಹಳ್ಳಿ, ಲಕ್ಷ್ಮಿಪುರ, ಕದರೇನಹಳ್ಳಿ, ಹಾರೊಕ್ಯಾತನಹಳ್ಳಿ, ದೊಂಬರಹಳ್ಳಿ, ಸಿದ್ದನಹೊಸಹಳ್ಳಿ, ಮಾದನಾಯಕನಹಳ್ಳಿ. ಯಶವಂತಪುರ ಹೋಬಳಿಯ ಕನ್ನಲ್ಲಿ, ಸೀಗೇಹಳ್ಳಿಯಲ್ಲಿ ಭೂಮಿ ಅವಶ್ಯಕತೆ ಇದ್,ದು ಭೂಸ್ವಾಧೀನ ಪ್ರಕ್ರಿಯೆ ಆರಂಭ ಆಗಲಿದೆ ಎನ್ನುವ ಮಾಹಿತಿಯನ್ನು ಒದಗಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications