ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

7.35 ಕೋಟಿ ತೆರಿಗೆ ವಂಚನೆ: ತುಮಕೂರು ಮೂಲದ ಉದ್ಯಮಿ ಬಂಧನ

|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಬರೋಬ್ಬರಿ 7.35 ಕೋಟಿ ತೆರಿಗೆ ವಂಚನೆ ಮಾಡಿದ್ದ ತುಮಕೂರು ಉದ್ಯಮಿ ಇದೀಗ ಪೊಲೀಸ್ ಅತಿಥಿಯಾಗಿದ್ದಾರೆ.

ಈ ಪ್ರಕರಣ ಸಂಬಂಧ ಇವರಿಗೆ 17 ಬಾರಿ ಇಲಾಖೆ ವತಿಯಿಂದ ಬಾಕಿ ಹಣ ಪಾವತಿಸುವಂತೆ ಮನವಿ ಮಾಡಲಾಗಿತ್ತು. ಆದರೂ ಇವರು ಈ ನೋಟಿಸ್‍ಗಳನ್ನು ನಿರ್ಲಕ್ಷಿಸಿ ತೆರಿಗೆ ಹಣ ಮರುಪಾವತಿಸದೆ ವಂಚಿಸಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

 ಬೆಂಗಳೂರು ಜನರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ ಬೆಂಗಳೂರು ಜನರ ಮೇಲೆ ಮತ್ತೊಂದು ಸೆಸ್ ಹೇರಲು ಬಿಬಿಎಂಪಿ ಸಿದ್ಧತೆ

ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಇಲಾಖೆ ವಿರುದ್ಧ ಮೇಲ್ಮನವಿ ಸಲ್ಲಿಸಿ ವಿಫಲರಾಗಿದ್ದರೂ ಕೂಡ ಈ ಉದ್ಯಮಿ 7.35 ಕೋಟಿ ರೂ.ಗಳ ತೆರಿಗೆ ಬಾಕಿ ಮತ್ತು ಬಡ್ಡಿ ಮೊತ್ತವನ್ನು ಪಾವತಿಸದೆ ನ್ಯಾಯಾಲಯದ ಆದೇಶವನ್ನು ಕಡೆಗಣಿಸಿದ್ದರು.

Businessman Jailed For Rs. 7.35 Crore Tax Default

ಮತ್ತೊಂದು ಪ್ರಕರಣದಲ್ಲಿ ತೆರಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ ಮತ್ತೊಬ್ಬ ಸುಸ್ತಿದಾರನನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಐಟಿ ಅಧಿಕಾರಿಗಳು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ತೆರಿಗೆ ವಸೂಲಿ ಅಧಿಕಾರಿಗಳು ಆರೋಪಿ ಉದ್ಯಮಿ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿಗಳನ್ನು ಸಲ್ಲಿಸಿದ್ದರು. ಇದನ್ನು ಪ್ರಶ್ನಿಸಿ ಅವರು ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ ಮನವಿ ಸಲ್ಲಿಸಿ ವಿಫಲರಾಗಿದ್ದರು.

English summary
The Income-Tax department arrested and jailed a Karnataka businessman for defaulting on paying Rs. 7.35 crore as income tax arrears and interest despite reminders, an official said today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X