ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಂಡರ್ ವರ್ಲ್ಡ ಡಾನ್ ಹೆಸರಿನಲ್ಲಿ ಉದ್ಯಮಿಗೆ ಬೆದರಿಕೆ !

|
Google Oneindia Kannada News

ಬೆಂಗಳೂರು, ಮಾರ್ಚ್ 07 : ಅಂಡರ್ ವರ್ಡ್ ಡಾನ್ ಹೆಸರು ಹೇಳಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿಗೆ ಬೆದರಿಕೆ ಹಾಕಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸಜ್ಜನ್ ರಾವ್ ಬೆದರಿಕೆಗೆ ಒಳಗಾಗಿದ್ದು, ಈ ಕುರಿತು ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಿಯಲ್ ಎಸ್ಟೇಟ್ ಉದ್ಯಮಿ ಸಜ್ಜನ್ ರಾವ್ ಇತ್ತೀಚೆಗೆ ಎಲೆಕ್ಟ್ರಾನಿಕ್ ಸಿಟಿ ಸಮೀಪ ಆಸ್ತಿ ಮಾರಾಟಕ್ಕೆ ಯತ್ನಿಸಿದ್ದರು. ಇದೇ ವಿಚಾರವಾಗಿ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ನೀನು ಎಲೆಕ್ಟ್ರಾನಿಕ್ ಸಿಟಿ ಸಮೀಪ 25 ಕೋಟಿ ರೂ. ಮೌಲ್ಯದ ಆಸ್ತಿ ಮಾರಿದ್ದೀಯ. ಆ ವಿಚಾರ ನನಗೆ ಗೊತ್ತಿದೆ. ನನಗೆ ಎರಡು ಕೋಟಿ ರೂ. ಕೊಡು, ಇಲ್ಲದಿದ್ದರೆ ನಿನ್ನನ್ನು ಹಾಗೂ ನಿನ್ನ ಕುಟುಂಬವನ್ನು ಮಗಿಸುತ್ತೇನೆ ಎಂದು ಉರ್ದು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾನೆ.

Businessman threatened in the name of Underworld Don

ಅದೇ ರೀತಿ ಎರಡು ದಿನದ ಹಿಂದೆ ಕರೆ ಮಾಡಿ ಪುನಃ ಬೆದರಿಕೆ ಒಡ್ಡಿದ್ದಾನೆ. ಸಜ್ಜನ್ ರಾವ್ ಈ ಕುರಿತು ಶೇಷಾದ್ರಿಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಲೆ ಬೆದರಿಕೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಸಜ್ಜನ್ ರಾವ್ ಬಗ್ಗೆ ಗೊತ್ತಿರುವರೇ ಈ ರೀತಿ ಮಾಡುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಎಲ್ಲಾ ಅಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ.

English summary
The real estate businessman has been threatened in the name of the underworld don and demanded for 2 Cr know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X