ಬೋರ್‌ವೆಲ್ ನಿರ್ವಹಣೆಗೆ AI ತಂತ್ರಜ್ಞಾನ ಅಳವಡಿಕೆ: BWSSB
ಬೆಂಗಳೂರು, ಮಾರ್ಚ್ 26: ಮಳೆ ಬಾರದೆ ಇದ್ದಾಗ ಅಂತರ್ಜಲ ಸಹ ಕುಸಿಯುತ್ತದೆ. ಈ ಕಾರಣದಿಂದಲೇ ಕೊಳವೆ ಬಾವಿಗಳಲ್ಲಿ ನೀರು ಬರದೇ ಬೆಂಗಳೂರಿನಲ್ಲಿ ಸಮಸ್ಯೆ ಆಗುತ್ತಿದೆ. ಇಂತಹ ಸಮಸ್ಯೆ ತಡೆಯಲು ಬೆಂಗಳೂರು ಜಲಮಂಡಳಿಯು AI ತಂತ್ರಜ್ಞಾನ ಸೇರಿದಂತೆ ಆಧುನಿಕ ತಂತ್ರಜ್ಞಾನದ ಮೊರೆ ಹೋಗಿದೆ.
ಸೋಮವಾರ ನಗರದ ಚಿನ್ನಪ್ಪ ಗಾರ್ಡನ್ ನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (AI) ಮತ್ತು ಐಓಟಿ (IOT) ತಂತ್ರಜ್ಞಾನ ಅಳವಡಿಸಲಾಗಿರುವ ಕೊಳವೆ ಬಾವಿಯ ಟ್ರಯಲ್ ರನ್ ಅನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷರು ಡಾ.ರಾಮ್ ಪ್ರಸಾದ್ ಮನೋಹರ್ ಪರಿಶೀಲಿಸಿದರು.

ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಜಲಮಂಡಳಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿದೆ ಎಂದು ಜಲ ಮಂಡಳಿ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಕೊಳವೆ ಬಾವಿ ಪದೇ ಪದೆ ರಿಪೇರಿ
ಈ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ 14 ಸಾವಿರಕ್ಕೂ ಅಧಿಕ ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದರಿಂದ ನೀರಿಲ್ಲದಿರುವುದು ಗೊತ್ತಾಗಿದೆ.
ಕೊಳೆವೆ ಬಾವಿಯಲ್ಲಿ ನೀರು ಇಲ್ಲದ್ದ ಗೊತ್ತಾಗದೆ ಮೋಟಾರ್ ಅನ್ನು ಓಡಿಸುವುದರಿಂದ ಬಹಳಷ್ಟು ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ. ಇತ್ತೀಚೆಗೆ ಕೊಳವೆಬಾವಿಗಳು ಪದೇ ಪದೆ ತಾಂತ್ರಿಕ ಸಮಸ್ಯೆಗೆ ಸಿಲುಕುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಈ AI ಮತ್ತು ಐಓಟಿ(IOT) ತಂತ್ರಜ್ಞಾನ ಅಳವಡಿಸಲಾಗಿದೆ. ಅದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂದು ಇಂದು ಪರಿಶೀಲಿಸಲಾಯಿತು ಎಂದು ಅವರು ಮಾಹಿತಿ ನೀಡಿದರು.

ತಂತ್ರಜ್ಞಾನದ ಅಳವಡಿಕೆಯ ಪ್ರಯೋಜನಗಳು
ಕೊಳವೆ ಬಾವಿಗಳಿಗೆ ಈ ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆ ಬಾವಿಗಳನ್ನು ಸಮರ್ಥವಾಗಿ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಲು ಸುಲಭವಾಗುತ್ತದೆ. ಕೊಳವೆ ಬಾವಿಗಳ ಅನಗತ್ಯ ಬಳಕೆ ತಪ್ಪಿಸಲು ಸಾಧ್ಯವಾಗುತ್ತದೆ. ಬಾವಿಯಲ್ಲಿ ನೀರಿಲ್ಲದೆ ಇರುವಂತಹ ಸಮಯದಲ್ಲಿ ಬಳಸುವುದನ್ನ ತಪ್ಪಿಸುವುದರ ಮೂಲಕ ಕೊಳವೆ ಬಾವಿಗಳು ನಿಷ್ಕ್ರಿಯ ಆಗುವುದನ್ನು ತಪ್ಪಿಸಬಹುದಾಗಿದೆ.
ಕೊಳವೆ ಬಾವಿಗಳನ್ನು ಸುಸ್ಥಿರವಾಗಿ ಹಾಗೂ ತಾಂತ್ರಿಕವಾಗಿ ಬಳಸುವುದು ಅಲ್ಲದೆ, ಪದೇಪದೇ ಮೋಟಾರ್ ಸುಟ್ಟು ಹೋಗುವಂತಹ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ಈ ಆಧುನಿಕ ತಂತ್ರಜ್ಞಾನಗಳು ತಪ್ಪಿಸುತ್ತವೆ. ಅಲ್ಲದೇ ಇವುಗಳ ನಿರ್ವಹಣೆಯ ವೆಚ್ಚವನ್ನು ಕಡಿಮೆಗೊಳಿಸಲು ತಂತ್ರಜ್ಞಾನ ಅಳವಡಿಕೆ ಸಹಕಾರಿಯಾಗಿದೆ ಎಂದು ಅಧ್ಯಕ್ಷರು ತಿಳಿಸಿದರು.
ಖಾಸಗಿ ಟ್ಯಾಂಕರ್ ವಿರುದ್ಧ ದೂರು
ನಗರದಲ್ಲಿ ಜನರಿಗೆ ಕುಡಿಯುವ ನೀರನ್ನು ಪೂರೈಸಲು ಸುನೀಲ್ ಎನ್ನುವವರಿಗೆ ಸೇರಿದ ಖಾಸಗಿ ಟ್ಯಾಂಕರ್ ಕೆಎ-52 ಸಿ-0204 ಪಡೆದುಕೊಳ್ಳಲಾಗಿತ್ತು. ವಾರ್ಡ್ ನಂ 130ರಲ್ಲಿರುವ ಸಾರ್ವಜನಿಕರಿಗೆ ವಿತರಿಸಲು ಸೂಚಿಸಲಾಗಿತ್ತು. ಆದರೇ ಸದರಿ ಖಾಸಗಿ ಟ್ಯಾಂಕರ್ ಮಾಲೀಕ ಸುನೀಲ್ ಅವರು ಶೆಟ್ಟಿಹಳ್ಳಿ ಮುಖ್ಯ ರಸ್ತೆಯ ಮಲ್ಲಸಂದ್ರ ವಾರ್ಡ್ ಸಂ 14ರಲ್ಲಿ ವಾಣಿಜ್ಯ ಉದ್ದೇಶಕ್ಕೆ ನೀರು ವಿತರಿಸಿರುವುದು ಮಾ.24ರಂದು ಕಂಡು ಬಂದಿದೆ.
ಹೀಗಾಗಿ ಆ ಖಾಸಗಿ ಟ್ಯಾಂಕರ್ ಮಾಲೀಕ ಸುನೀಲ್ ಎನ್ನುವವರ ವಿರುದ್ಧ ಜಲಮಂಡಳಿಯ ಸಹಾಯಕ ಎಂಜನಿಯರ್ ಕಾರ್ತಿಕ್ ಮಂಜು ಅವರು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications