Get Updates
Get notified of breaking news, exclusive insights, and must-see stories!

ಬೆಂಗಳೂರು: ನೂರಾರು ಮಳೆನೀರು ಇಂಗುಗುಂಡಿ ನಿರ್ಮಿಸಿ ಮಾದರಿ ಆಯ್ತು ಜಲಮಂಡಳಿ

ಬೆಂಗಳೂರು, ಮೇ 04: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಭಾರೀ ಹಾಹಾಕಾರ ಉಂಟಾಗಿತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಸಾಕಷ್ಟ ಕಡೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ ಮಾಡಿ, ಮೈಲಿಗಲ್ಲು ಸಾಧಿಸಿದೆ.

ಹೌದು, ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆ ಸಕ್ರಿಯವಾಗಿದೆ. ಮುಂಗಾರು ಮಳೆ (Monsoon Rain) ಆರಂಭವಾಗಲು ತಿಂಗಳು ಬಾಕಿ ಇರುವಾಗಲೇ ಬೆಂಗಳೂರು ಜಲಮಂಡಳಿಯು ನಗರಾದ್ಯಂತ ಒಟ್ಟು 986 ಮಳೆ ನೀರು ಇಂಗು ಗುಂಡಿಗಳನ್ನು (Rainwater Harvesting) ನಿರ್ಮಿಸುವ ಮೂಲಕ ಮಾದರಿ ಆಗಿದೆ.

BWSSB Has Build 986 Rainwater Wells for Boosting Bengaluru Groundwater

ಉದ್ಯಾನಗರಿಯಲ್ಲೇ ಅಂತರ್ಜಲ ಕುಸಿತ

ಉದ್ಯಾನ ನಗರಿ ಎಂದು ಹೆಸರಾಗಿರುವ ಬೆಂಗಳೂರಿನಲ್ಲಿ ನೀರಿನ ಅಭಾವ ಸೃಷ್ಟಿಯಾಗಿದೆ. ನಗರದಲ್ಲಿ ಲಕ್ಷಾಂತರ ಜನರು ಅಂತರ್ಜಲದ ನೀರಿನ ಮೇಲೆಯೇ ಅವಲಂಬಿತರಾಗಿದ್ದರು. ಆದರೆ ಮಳೆ ಕೊರತೆ, ಇನ್ನಿತರ ಕಾರಣಗಳಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಬತ್ತಿ ಹೋಗಿತ್ತು. ಇದು ಈ ವರ್ಷ ಇನ್ನಿಲ್ಲದ ಸಮಸ್ಯೆಯಾಗಿ ಕಾಡಿತು.

ಮಳೆ ನೀರು ಕೊಯ್ಲು ಅಳವಡಿಸಿಕೊಂಡಿರುವ ಹಲವಾರು ಕಟ್ಟಡಗಳಲ್ಲಿ ಮಳೆ ನೀರಿನ ಇಂಗುಗುಂಡಿಗಳನ್ನು ರಚಿಸದೇ ಇರುವ ಕಾರಣ ಅಂತರ್ಜಲ ಮರುಪೂರಣ ಸರಿಯಾಗಿ ಆಗುತ್ತಿಲ್ಲ. ಮರುಪೂರಣ ಆಗದೇ ಇರುವ ಕಾರಣ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಲೇ ಇದೆ.

ಮಳೆ ನೀರು ಮರುಪೂರಣ

ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಸಾಕಷ್ಟು ಸಮಸ್ಯೆ ಆಗಲಿದೆ ಎಂಬುದನ್ನು ಮನಗಂಡ ಜಲಮಂಡಿಯು ಇದನ್ನು ತಡೆಗಟ್ಟುಲುಜನರು ಮಳೆ ನೀರು ಮರುಪೂರಣಕ್ಕಾಗಿ ಇಂಗು ಗುಂಡಿಗಳನ್ನು ನಿರ್ಮಿಸಬೇಕು. ಈ ನಿಮಿತ್ತ ಜನರಲ್ಲಿ ಜಾಗೃತಿ ಮೂಡಿಸುವ ಗುರಿ ಜಲಮಂಡಳಿ ಹೊಂದಿದೆ ಎಂದು BWSSB ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದರು.

ಹೆಚ್ಚು ಇಂಗುಗುಂಡಿಗಳ ನಿರ್ಮಾಣಕ್ಕೆ ನಿರ್ದೇಶನ

ಬೆಂಗಳೂರಿನಲ್ಲಿ ಜಲಮಂಡಳಿಯ ವ್ಯಾಪ್ತಿಯಲ್ಲಿ ಎಲ್ಲೆಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆಯೋ ಅಲ್ಲೆಲ್ಲ ಮಳೆ ನೀರು ಇಂಗಲು ಸುಲಭವಾಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.

BWSSB Has Build 986 Rainwater Wells for Boosting Bengaluru Groundwater

ಇದರ ಬೆನ್ನಲ್ಲೆ ಎಚ್ಚೆತ್ತ ಅಧಿಕಾರಿಗಳು ಕೇವಲ ಒಂದೇ ತಿಂಗಳ ಸಮಯದಲ್ಲಿ ನಗರಾದ್ಯಂತ ಬರೋಬ್ಬರಿ 986 ಮಳೆ ನೀರು ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ವಲಯವಾರು ನಿರ್ಮಿಸಲಾಗುವ ಇಂಗುಗುಂಡಿಗಳ ಮೂಲಕ ಮಳೆಯ ನೀರು ಯಾವುದೇ ಕಲ್ಮಶವಿಲ್ಲದೇ ನೆಲದಡಿಗೆ ಇಳಿಯುವಂತೆ ಮಾಡಲಾಗಿದೆ.

ಅದೇ ರೀತಿ ನಗರದ ರಸ್ತೆಗಳಲ್ಲಿನ ನೀರು ಹರಿದು ಒಳಚರಂಡಿಗೆ ಸೇರ್ಪಡೆ ಆಗಿ ತೊಂದರೆ ಆಗದಂತೆ ತಡೆಯಲು ಇದು ಸಹಕಾರಿಯಾಗಲಿದೆ ಎಂದು ಜಲಮಂಡಲಿ ಅಭಿಪ್ರಾಯಪಟ್ಟಿದೆ.

ಸಮುದಾಯ ಮಳೆ ನೀರು ಕೊಯ್ಲುಗಾಗಿ 74 ಪ್ರಸ್ತಾವನೆ

ಬೆಂಗಳೂರಿನಲ್ಲಿ ಕುಸಿದಿರುವ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಸಲುವಾಗಿ ಮತ್ತು ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಜಲಮಂಡಳಿಯು ಸಮುದಾಯ ಮಳೆನೀರು ಕೋಯ್ಲು (ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌) ಯೋಜನೆ ಆರಂಭಿಸಿದೆ. ಇದಕ್ಕೆ ವ್ಯಾಪಕ ಸ್ಪಂದನೆ ವ್ಯಕ್ತವಾಗಿದೆ.

ಈ ಕಾರಣದಿಂದ ಕೆಲವು ಸಮುದಾಯಗಳು ತಾವು ಮಳೆ ನೀರು ಕೊಯ್ಲು ಅವಳಡಿಕೆ ಮಾಡಿಕೊಳ್ಳುವುದಾಗಿ ಪ್ರಸ್ತಾವನೆ ಸಲ್ಲಿಸಿವೆ. ಈ ಕುರಿತು ನಿರ್ಧರಿಸಿ ಆದಷ್ಟು ಶೀಘ್ರವೇ ಮೊದಲ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಜಲಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+