Water: ಕುಡಿಯುವ ನೀರಿನಿಂದ ಕಾರು ತೊಳೆಯುವಂತಿಲ್ಲ: ಬೆಂಗಳೂರಿಗರಿಗೆ ಜಲಮಂಡಳಿಯ 3 ಕಠಿಣ ಆದೇಶ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ಸಿಲಿಕಾನ್ ಸಿಟಿಯ ಜನರ ನೀರಿನ ಬಳಕೆ ಮೇಲೆ ಕಣ್ಣಿಟ್ಟಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರಿನ ಮಿತವ್ಯಯಕ್ಕೆ ಕರೆ ನೀಡಿದೆ. ಕುಡಿಯುವ ನೀರಿನಿಂದ ಕಾರು ತೊಳೆಯುವುದು, ಅನಗತ್ಯ ಬಳಕೆ ಕುರಿತು ಎಚ್ಚರಿಕೆ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಿರುವುದಾಗಿ ತಿಳಿಸಿರುವ ಜಲಮಂಡಳಿ ಶನಿವಾರ ಮೂರು ಮಹತ್ವದ ಆದೇಶ ನೀಡಿದೆ.

ಎಲ್‌ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿದೆ. ರಾಜ್ಯದ ಜಲಾಶಗಳಲ್ಲಿ ನೀರಿನ ಮಟ್ಟ ಕುಸಿದಿದೆ. ಬೆಂಗಳೂರಿಗೆ ನೀರೊದಗಿಸುವ ಕೃಷ್ಣ ರಾಜ ಸಾಗರ ಜಲಾಶಯದಲ್ಲೂ ನೀರಿನ ಮಟ್ಟ ಕನಿಷ್ಠ ಹಂತಕ್ಕೆ ಕುಸಿದಿದೆ. ಈ ಹಿನ್ನೆಲೆ ಈ ವರ್ಷ ಸಿಲಿಕಾನ್ ಸಿಟಿಯಲ್ಲಿ ನೀರು ಪೂರೈಕೆಯಲ್ಲಿ ಸಾಕಷ್ಟು ಸಮಸ್ಯೆ ಎದುರಾಗುವ ಸಂಭವವಿದ್ದು, ಬಿಕ್ಕಟ್ಟು ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ನೀರಿನ ಬಳಕೆ ಕುರಿತು ಮಹತ್ವದ ಸೂಚನೆ ನೀಡಿದ್ದು, ಪಾಲಿಸದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

BWSSB

ಬೆಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು, ನೀರಿನ ಸಮರ್ಪಕ ನಿರ್ವಹಣೆ ಮತ್ತು ಮಿತವ್ಯಯವನ್ನು ಉತ್ತೇಜಿಸುವ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ಡಾ. ಮಂಜುಳ ತಿಳಿಸಿದ್ದಾರೆ. ಪ್ರತಿಯೊಂದು ಹನಿ ನೀರನ್ನು ಜವಾಬ್ದಾರಿಯುತವಾಗಿ ಬಳಸುವ ಪದ್ದತಿಯನ್ನು ಬೆಳೆಸುವುದು, ಕುಡಿಯುವ ನೀರಿನ ಅನಗತ್ಯ ಬಳಕೆಯನ್ನು ತಡೆಯುವುದು ಹಾಗೂ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಬರಗಾಲ, ಮೇಕೆದಾಟು, ಕಾವೇರಿ ನೀರಿನ ಬಗ್ಗೆ ಸರ್ಕಾರಕ್ಕಿಲ್ಲ ಚಿಂತೆ! ಡಿಕೆಶಿ ತಮಿಳುನಾಡಿನ ಪರ: ವಿಪಕ್ಷ ನಾಯಕ
ಬರಗಾಲ, ಮೇಕೆದಾಟು, ಕಾವೇರಿ ನೀರಿನ ಬಗ್ಗೆ ಸರ್ಕಾರಕ್ಕಿಲ್ಲ ಚಿಂತೆ! ಡಿಕೆಶಿ ತಮಿಳುನಾಡಿನ ಪರ: ವಿಪಕ್ಷ ನಾಯಕ

ಕುಡಿಯುವ ನೀರಿನ ದುರ್ಬಳಕೆಗೆ ನಿರ್ಬಂಧ

ಕುಡಿಯುವ ನೀರಿನಿಂದ ಕಾರು, ಬೈಕ್ ಇನ್ನಿತರ ವಾಹನಗಳನ್ನು ತೊಳೆಯುವುದು, ಉದ್ಯಾನಗಳಿಗೆ ನೀರು ಹಾಯಿಸುವುದು, ರಸ್ತೆ ಹಾಗೂ ಪಾದಚಾರಿ ಮಾರ್ಗಗಳನ್ನು ಸ್ವಚ್ಛಗೊಳಿಸುವುದು, ಕಟ್ಟಡ ನಿರ್ಮಾಣ ಕಾಮಗಾರಿಗಳು ಸೇರಿದಂತೆ ಕುಡಿಯುವ ನೀರಲ್ಲದ ಉದ್ದೇಶಗಳಿಗೆ ಕುಡಿಯುವ ನೀರನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಇಂತಹ ಅಗತ್ಯಗಳಿಗೆ ಕಡ್ಡಾಯವಾಗಿ ಸಂಸ್ಕರಿತ ನೀರನ್ನೇ (Treated Water) ಬಳಸಬೇಕು ಎಂದು ಸೂಚಿಸಲಾಗಿದೆ.

ಏರೇಟರ್ ಅಳವಡಿಕೆ ಕಡ್ಡಾಯ

ಮನೆಗಳು, ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಕಟ್ಟಡಗಳು, ಸರ್ಕಾರಿ ಕಚೇರಿಗಳು, ಹೋಟೆಲ್‌ಗಳು, ಕೈಗಾರಿಕೆಗಳು ಸೇರಿದಂತೆ ನೀರು ಬಳಸುವ ಎಲ್ಲಾ ಕಟ್ಟಡಗಳಲ್ಲಿ Flow Restrictor/Aerator ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಏರೇಟರ್ ಅಳವಡಿಕೆಯಿಂದ ನೀರಿನ ಬಳಕೆಯನ್ನು ಶೇ.30 ರಿಂದ 50ರವರೆಗೆ ಕಡಿಮೆ ಮಾಡಬಹುದಾಗಿದೆ. ನೀರಿನ ಬಳಕೆಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ.

ಈಜುಕೊಳಗಳಿಗೆ ಕುಡಿಯುವ ನೀರಿನ ಬಳಕೆ ನಿಷೇಧ

ನಗರದಲ್ಲಿನ ಖಾಸಗಿ ಹಾಗೂ ಸಾರ್ವಜನಿಕ ಈಜುಕೊಳಗಳನ್ನು ಕುಡಿಯುವ ನೀರಿನಿಂದ ತುಂಬಿಸುವುದನ್ನು ನಿಷೇಧಿಸಲಾಗಿದೆ. ಈಜುಕೊಳಗಳಿಗೆ ಅಗತ್ಯವಿರುವ ನೀರನ್ನು ಸಂಸ್ಕರಿತ ನೀರು ಅಥವಾ ಇತರೆ ಪರ್ಯಾಯ ಮೂಲಗಳಿಂದಲೇ ಬಳಸುವಂತೆ ನಿರ್ದೇಶಿಸಲಾಗಿದೆ.

ನಿಯಮ ಉಲ್ಲಂಘಿಸಿದರೆ ದಂಡ ಕ್ರಮ

ಜಲಮಂಡಳಿಯ ಈ ಮೂರು ಆದೇಶಗಳನ್ನು ಉಲ್ಲಂಘಿಸುವವರ ವಿರುದ್ಧ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಅನ್ವಯ ಜಲಮಂಡಳಿ ಸರಬರಾಜು ಮಾಡುತ್ತಿರುವ ನೀರಿನ ಪ್ರಮಾಣದಲ್ಲಿ ಶೇಕಡ 50 ರವರೆಗೆ ಕಡಿತಗೊಳಿಸಿ 5,000 ರೂಪಾಯಿ ದಂಡ ವಿಧಿಸಲಾಗುವುದು. ಉಲ್ಲಂಘನೆ ಮುಂದುವರಿದಲ್ಲಿ ಪ್ರತಿದಿನ 500 ರೂ. ಹೆಚ್ಚುವರಿ ದಂಡ ವಿಧಿಸುವುದರ ಜೊತೆಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಲಮಂಡಳಿ ಅಧ್ಯಕ್ಷೆ ಹೇಳಿದ್ದಾರೆ.

ಸಂಘ-ಸಂಸ್ಥೆಗಳು ನೀರುಳಿಸಲು ಕೈ ಜೋಡಿಸಿ

ಕುಡಿಯುವ ನೀರು ಪ್ರತಿಯೊಬ್ಬರಿಗೂ ಸೇರಿದ ಅಮೂಲ್ಯ ನೈಸರ್ಗಿಕ ಸಂಪತ್ತು. ಅದರ ಸಂರಕ್ಷಣೆಗೆ ಪ್ರತಿಯೊಬ್ಬ ನಾಗರಿಕನದ್ದು. ಇಂದಿನ ಮಿತವ್ಯಯವೇ ನಾಳಿನ ನೀರಿನ ಭದ್ರತೆಗೆ ಭದ್ರ ಬುನಾದಿಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ನೀರನ್ನು ಜವಾಬ್ದಾರಿಯುತವಾಗಿ ಬಳಸಿ, ಏರೇಟರ್ ಅಳವಡಿಸಿ, ಕುಡಿಯುವ ನೀರಿನ ದುರ್ಬಳಕೆಯನ್ನು ತಪ್ಪಿಸಿ ಜಲ ಸಂರಕ್ಷಣೆಯ ಜನಾಂದೋಲನಕ್ಕೆ ಕೈಜೋಡಿಸಬೇಕು. ನಾಗರಿಕರ ಸಹಭಾಗಿತ್ವದಿಂದಲೇ ಬೆಂಗಳೂರಿನ ನೀರಿನ ಭವಿಷ್ಯವನ್ನು ಇನ್ನಷ್ಟು ಸುರಕ್ಷಿತಗೊಳಿಸಬಹುದು. ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಅವರು ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+