ನೀರಿನ ದರ ಹೆಚ್ಚಳಕ್ಕೆ ಮುಂದಾದ ಬೆಂಗಳೂರು ಜಲಮಂಡಳಿ

ಬೆಂಗಳೂರು, ಮೇ 12 : ಬೆಂಗಳೂರು ಜಲಮಂಡಳಿ ನೀರಿನ ದರ ಏರಿಕೆ ಮಾಡಲು ಪ್ರಸ್ತಾವನೆ ಸಿದ್ಧಪಡಿಸಿದೆ. ಕರ್ನಾಟಕ ಸರ್ಕಾರಕ್ಕೆ ಶೀಘ್ರದಲ್ಲಿಯೇ ದರ ಹೆಚ್ಚಳಕ್ಕೆ ಅನುಮತಿ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.

ಕಾವೇರಿ ನೀರಿನ ದರವನ್ನು ಶೇ 15ರಷ್ಟು ಏರಿಕೆ ಮಾಡಲು ಜಲಮಂಡಳಿ ಮುಂದಾಗಿದೆ. ನೀರಿನ ದರ ಏರಿಕೆ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ಪ್ರತ್ಯೇಕ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿ ವರದಿ ಆಧಾರದ ಮೇಲೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುತ್ತದೆ.

ಈಗಿರುವ ನೀರಿನ ದರದಲ್ಲಿ ಶೇ 15ರಷ್ಟು ಏರಿಕೆ ಮಾಡಲು ಜಲಮಂಡಳಿ ಮುಂದಾಗಿದೆ. 2014ರ ಬಳಿಕ ನೀರಿನ ದರವನ್ನು ಏರಿಕೆ ಮಾಡಿಲ್ಲ ಎಂದು ಜಲಮಂಡಳಿ ಹೇಳಿದ್ದು, ಇದನ್ನೇ ಮುಂದಿಟ್ಟುಕೊಂಡು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ.

BWSSB may hike water tariff by 15 percent

ಜಲಮಂಡಳಿಯಲ್ಲಿ ಸಿಬ್ಬಂದಿಯ ಕೊರತೆಯೂ ಇದೆ. 3,500 ಹುದ್ದೆಗಳ ಪೈಕಿ 1945 ಸಿಬ್ಬಂದಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಲಮಂಡಳಿ ಹೇಳಿದೆ. ಹುದ್ದೆಗಳ ಭರ್ತಿಗೂ ಅವಕಾಶ ನೀಡುವಂತೆ ಮನವಿ ಮಾಡಲಾಗುತ್ತದೆ.

ಪ್ರಸ್ತುತ ಗೃಹ ಸಂಪರ್ಕಕ್ಕೆ ಪ್ರತಿ ಸಾವಿರ ಲೀಟರ್‌ಗೆ 7 ರೂ., 8 ರಿಂದ 25 ಸಾವಿರ ಲೀಟರ್‌ಗೆ 11 ರೂ., 25 ರಿಂದ 50 ಸಾವಿರ ಲೀಟರ್‌ಗೆ 26 ರೂ., 50 ಸಾವಿರ ಮೇಲ್ಪಟ್ಟು ನೀರು ಬಳಸುವ ಕಟ್ಟಡಗಳಿಗೆ ಪ್ರತಿ ಸಾವಿರ ಲೀಟರ್‌ಗೆ 45 ರೂ., ಕೈಗಾರಿಕೆ, ಈಜುಕೊಳ, ಬಿಡಿದಿ ಕೈಗಾರಿಕಾ ಪ್ರದೇಶಗಳಿಗೆ 90 ರೂ. ದರವಿದೆ.

ಬೇಸಿಗೆಯಲ್ಲಿ ಬೋರ್‌ವೆಲ್‌ನಲ್ಲಿ ನೀರು ಕಡಿಮೆಯಾಗಿದ್ದು ಕಾವೇರಿ ನೀರಿಗೆ ಬೇಡಿಕೆ ಹೆಚ್ಚಿದೆ. ಇಂತಹ ಸಮಯದಲ್ಲಿಯೇ ನೀರಿನ ದರವನ್ನು ಏರಿಕೆ ಮಾಡಲು ಜಲಮಂಡಳಿ ಮುಂದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+