ನೀರು, ಒಳಚರಂಡಿ ಸಂಪರ್ಕಕ್ಕೆ ರಸ್ತೆ ಅಗೆಯಲು ಬಿಬಿಎಂಪಿ ಅನುಮತಿ ಕಡ್ಡಾಯ

ಬೆಂಗಳೂರು, ಅಕ್ಟೋಬರ್ 6: ನೀರು, ಒಳಚರಂಡಿ ಸಂಪರ್ಕಕ್ಕಾಗಿ ರಸ್ತೆ ಅಗೆಯಬೇಕಾದರೆ ಜಲಮಂಡಳಿಯು ಕಡ್ಡಾಯವಾಗಿ ಬಿಬಿಎಂಪಿಯಿಂದ ಅನುಮತಿ ಪಡೆಯಲೇ ಬೇಕು ಎಂದು ಹೈಕೋರ್ಟ್ ತಿಳಿಸಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರ ಸಂಬಂಧಿಸಿದಂತೆ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿದ ಸಾರ್ವಜನಿಕ ಅರ್ಜಿಯನ್ ಹೈಕೋರ್ಟ್ ವಿಚಾರಣೆ ನಡೆಸಿದೆ.

ನಗರದ ರಸ್ತೆಗಳ ನಿರ್ವಹಣೆ ಹಾಗೂ ಗುಂಡಿಗಳಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಗೆ ಎಲ್ಲಾ ರೀತಿಯ ಸಹಕಾರವನ್ನು ನೀಡಲು ಜಲಮಂಡಳಿ ತಯಾರಿದೆ. ರಸ್ತೆ ಅಗೆಯಲು ಪಾಲಿಕೆ ಅನುಮತಿ ನೀಡಿದರೆ ಮಾತ್ರ ಜಲಮಂಡಳಿ ಅನುಮೋದನೆ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

BWSSB says BBMP permission mandatory for digging roads for work

ನೀರು ಹಾಗೂ ಒಳಚರಂಡಿ ಪೈಪ್ ಲೈನ್ ಗಳನ್ನು ಬದಲಿಸುವ ಸಂದರ್ಭದಲ್ಲಿ ರಸ್ತೆ ಅಗೆಯಬೇಕಿದ್ದಲ್ಲಿ, ಪಾಲಿಕೆಯಿಂದ ಅನುಮತಿ ಪಡೆಯಲಾಗುತ್ತದೆ. ಕಾಮಗಾರಿ ಬಳಿಕ ಅಗೆದಿರುವ ರಸ್ತೆಗಳನ್ನು ಮೊದಲಿನಂತೆ ಮಾಡಲಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಜಲಮಂಡಳಿಯೇ ಭರಿಸಲಿದೆ ಎಂದು ತಿಳಿಸಲಾಗಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಯಾವ ಕಾರ್ಯವಿಧಾನ ಅನುಸರಿಸಲಾಗುತ್ತಿದೆ. ನಿಮ್ಮ ಹೃದಯ ಮುಟ್ಟಿ ಹೇಳಿ , ಗುಂಡಿಗಳನ್ನು ಮುಚ್ಚಿರುವಿರಾ ಎಂದು ಬಿಬಿಎಂಪಿ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+