ಗುಡ್‌ನ್ಯೂಸ್: ಹಗಲು ರಾತ್ರಿ ಕಾಮಗಾರಿ! ಒಂದು ದಿನ ಮೊದಲೇ ನೀರು ಪೂರೈಕೆ...Bengaluru Water Shutdown
ಬೆಂಗಳೂರು, ಸೆಪ್ಟಂಬರ್ 17: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಂಡ ಹಿನ್ನಲೆಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ಆಗಿದ್ದ ವ್ಯತ್ಯಯವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಒಂದು ದಿನ ಮುಂಚಿತವಾಗಿಯೇ ಸರಿಪಡಿಸಲಾಗಿದೆ. ಈ ಮೊದಲು ಮೂರು ದಿನ ಬೆಂಗಳೂರಿನ ವಿವಿಧ ಬಡಾವಣೆಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಲಾಗಿತ್ತು.
ನೀರು ಪೂರೈಕೆ ಬಗ್ಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ರಾಮ್ ಪ್ರಸಾತ್ ಮನೋಹರ್ ಅವರು ಗುಡ್ ನ್ಯೂಸ್ ನೀಡಿದರು. ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಇದಕ್ಕಾಗಿ ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆ ಖಚಿತಪಡಿಸಿಕೊಳ್ಳಬೇಕಿತ್ತು. ಜೊತೆಗೆ ಸುಸ್ಥಿತಿಯಲ್ಲಿವೆ ಇದಿಯೋ ಇಲ್ಲವೋ ಎಂಬುದಕ್ಕಾಗಿ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿ ಕೈಗೊಂಡಿತ್ತು.

ಈ ಕಾಮಗಾರಿ ಸಲುವಾಗಿ ಮೂರು ದಿನಗಳು ಅಂದರೆ, ಸೆಪ್ಟಂಬರ್ 15, 16 ಮತ್ತು 17 ರಂದು ಕುಡಿಯುವ ನೀರಿನಲ್ಲಿ ವ್ಯತ್ಯಯವಾಗುವ ಬಗ್ಗೆ ಜಲಮಂಡಳಿ ಈಗಾಗಲೇ ಸಾರ್ವಜನಿಕರಿಗೆ ಮಾಹಿತಿ ನೀಡಿತ್ತು. ಆದರೆ ಇದರಿಂದ ಕುಡಿಯುವ ನೀರಿನ ಸರಬರಾಜು ಇಲ್ಲದೇ ಸಾರ್ವಜನಿಕರು ತೊಂದರೆಗೀಡಾಗುವ ಸಾಧ್ಯತೆ. ಆದ್ದರಿಂದ ತ್ವರಿತ ಕಾಮಗಾರಿ ಪೂರ್ಣಗೊಳಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಹಗಲು ರಾತ್ರಿ ಪಾಳಿಗಳಲ್ಲಿ ಕಾರ್ಯ ನಿರ್ವಹಿಸಲು ಯೋಜನೆ ರೂಪಿಸಲಾಯಿತು. ಇದಕ್ಕೆ ಅಗತ್ಯವಿರುವಂತಹ ಕಾರ್ಮಿಕರನ್ನು ಬೇರೆ ರಾಜ್ಯಗಳಿಂದ ಕರೆಸಿಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚಿಸಲಾಯಿತು. ಈ ಎಲ್ಲಾ ಪ್ರಯತ್ನಗಳ ಫಲವಾಗಿ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾರ್ಯವನ್ನು ಎರಡು ದಿನಗಳಲ್ಲಿ ಮುಗಿಸಲಾಗಿದೆ. ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಬುಧವಾರ ಬೆಳಿಗ್ಗೆಯಿಂದ ನಗರದ ಎಲ್ಲಾ ಭಾಗಗಳಿಗೂ ನೀರು ಸರಬರಾಜು ಪ್ರಕ್ರಿಯೆಯನ್ನು ಪುನರಾರಂಭಿಸಲಾಯಿತು ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.












Click it and Unblock the Notifications