ಅಪಾರ್ಟ್‌ಮೆಂಟ್‌ಗಳಲ್ಲಿಎಸ್‌ಟಿಪಿ ಕಡ್ಡಾಯ ನಿಯಮ ವಾಪಸ್

ಬೆಂಗಳೂರು, ಡಿಸೆಂಬರ್ 14 : ಅಪಾರ್ಟ್‌ಮೆಂಟ್‌ಗಳು ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು (ಎಸ್‌ಟಿಪಿ) ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕೆಂಬ ನಿಯಮವನ್ನು ಜಲಮಂಡಳಿ ವಾಪಸ್ ಪಡೆದಿದೆ. ಬಿಎಎಫ್ ಈ ನಿರ್ಧಾರವನ್ನು ಸ್ವಾಗತಿಸಿದೆ.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿಯಮವನ್ನು ವಾಪಸ್ ಪಡೆಯುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬೆಂಗಳೂರು ಅಪಾರ್ಟ್‌ಮೆಂಟ್ ಸಮುಚ್ಚಯಗಳ ಒಕ್ಕೂಟದ (ಬಿಎಎಫ್) ಈ ನಿರ್ಧಾರವನ್ನು ಸ್ವಾಗತಿಸಿದ್ದು, ಹರ್ಷ ವ್ಯಕ್ತಪಡಿಸಿದೆ.

BWSSB suspends mandating STP for apartment rule

ಸಚಿವ ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮೇಯರ್ ಸಂಪತ್ ರಾಜ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಜಿ.ವಿ.ರಂಗಾರಾವ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಬೆಂಗಳೂರು ಅಪಾರ್ಟ್‌ಮೆಂಟ್ ಸಮುಚ್ಚಯಗಳ ಒಕ್ಕೂಟದ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂಬ ನಿಯಮದ ವಿರುದ್ಧ ಹೋರಾಟ ನಡೆಸಿತ್ತು. ಸರ್ಕಾರಕ್ಕೂ ಮನವಿ ಮಾಡಿತ್ತು.

50 ಫ್ಲ್ಯಾಟ್‌ಗಳಿರುವ ಅಪಾರ್ಟ್‌ಮೆಂಟ್‌ಗಳು ಎಸ್‌ಟಿಪಿ ಅಳವಡಿಸಿಕೊಳ್ಳಬೇಕು ಎಂಬ ನಿಯಮಕ್ಕೆ ಪ್ರತಿಪಕ್ಷ ಬಿಜೆಪಿಯೂ ವಿರೋಧ ವ್ಯಕ್ತಪಡಿಸಿತ್ತು. ಹೋರಾಟದ ಬಳಿಕ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಯಮವನ್ನು ವಾಪಸ್ ಪಡೆಯಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+