BWSSB: ಬೆಂಗಳೂರಿಗೆ ಸುಮಾರು 200 ಟ್ಯಾಂಕರ್ ಮೂಲಕ ನೀರು ಪೂರೈಕೆ
ಬೆಂಗಳೂರು ಸೆಪ್ಟಂಬರ್ 07: ಬೆಂಗಳೂರಿಗೆ ನೀರು ಪೂರೈಸುವ ಘಟಕ ಪೈಕಿ ಒಂದಾಗಿರುವ ತೊರೆಕಾಡನಹಳ್ಳಿ (ಟಿ.ಕೆ ಹಳ್ಳಿ) ಕುಡಿಯುವ ನೀರು ಪಂಪಿಂಗ್ ಘಟಕ ಮಳೆಯಿಂದ ಜಲಾವೃತಗೊಂಡಿತ್ತು. ಅದರಲ್ಲಿ ನೀರು ಹೊರ ತೆಗೆಯುವಲ್ಲಿ ಯಶಸ್ವಿಯಾಗುವ ಜತೆಗೆ ಟ್ಯಾಂಕರ್‌ಗಳ ಮೂಲಕ ನಗರಕ್ಕೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲಾಗುತ್ತದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಬೆಂಗಳೂರು ಜಲಮಂಡಳಿ ಮತ್ತು ಒಳಚರಂಡಿ ಮಂಡಳಿಯು, ಕಾವೇರಿ ನೀರು ಸರಬರಾಜು ಯೋಜನೆಯ ಮೂರನೇ ಹಂತ ಹಾಗೂ ನಾಲ್ಕನೆ ಹಂತೆ ಎರಡನೇ ಘಟ್ಟದಿಂದ ನೀರು ಸರಬರಾಜು ಮಾಡುವ ಯಂತ್ರಾಗಾರದಲ್ಲಿ 20 ಅಡಿಯಷ್ಟು ಮಳೆ ನೀರು ತುಂಬಿಕೊಂಡಿತ್ತು. ಹೀಗಾಗಿ ಬೆಂಗಳೂರಿಗೆ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ಮೇರೆಗೆ ಖುದ್ದು ಜಲಮಂಡಳಿ ಅಧ್ಯಕ್ಷ ಜಯರಾಮ ನೇತೃತ್ವದ ಅಧಿಕಾರಿಗಳ ತಂಡ ಮಳೆ ನೀರು ಹೊರ ತೆಗೆದ ಪರಿಣಾಮ ಯಂತ್ರಗಾರದ ಯಥಾಸ್ಥಿತಿಗೆ ಬಂದಿದೆ. ಶೀಘ್ರವೇ ಮೊದಲಿನಂತೆ ಕಾರ್ಯನಿರ್ವಹಿಸಲಿದೆ. ಅಲ್ಲಿಯವರೆಗೆ ನೀರು ಪೂರೈಕೆಯಲ್ಲಿ ವ್ಯತ್ಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲ ವರ್ಗದವರಿಗೆ ಉಚಿತವಾಗಿ ಸಮಾರು 200 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಬೆಂಗಳೂರು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಜನರಿಗೆ ಕುಡಿಯುವ ನೀರು ಒದಗಿಸುವಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳಲು ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಒಂದು ವೇಳೆ ವಲಯ, ವಾರ್ಡ್ ಪ್ರದೇಶಗಳಲ್ಲಿ ನೀರಿನ ತೊಂದರೆಯಾದರೆ ಅವರು ಜಲಮಂಡಳಿಗೆ ಸೂಕ್ತ ಮಾಹಿತಿ ನೀಡುತ್ತಾರೆ. ನಂತರ ಟ್ಯಾಂಕರ್ ಮೂಲಕ ಅಗತ್ಯವಿರುವ ಕಡೆಗೆ ನೀರು ಪೂರೈಕೆಗೆ ಕ್ರಮವಹಿಲಿದ್ದಾರೆ.
ಶೀಘ್ರವೇ ಟಿಕೆ ಹಳ್ಳಿ ಯಂತ್ರಗಾರ ಸುಸ್ಥಿತಿಗೆ ಬರಲಿದೆ
ಮಂಗಳವಾರ ಮತ್ತು ಬುಧವಾರ ಬೆಂಗಳೂರಿನಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಿತ್ತು. ಆದರೆ ಬುಧವಾರ ಬೆಳಗ್ಗೆಯಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಯಾವ ಪ್ರದೇಶದಲ್ಲೂ ಕಾವೇರಿ ನೀರು ಪೂರೈಕೆಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಅದಕ್ಕಾಗಿ ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿರುವ ಸ್ಟ್ಯಾಂಡ್ ಬೈ ಪಂಪ್‌ಗಳನ್ನು ಬಳಸಿಕೊಳ್ಳಲಾಗಿದೆ. ಆದಷ್ಟು ಶೀಘ್ರವೇ ಟಿಕೆ ಹಳ್ಳಿ ಪಂಪ್‌ಸೆಟ್‌ನಲ್ಲಿ ಯಂತ್ರಗಾರಗಳು ಸುಸ್ಥಿತಿಗೆ ಬರಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖುದ್ದು ಟಿಕೆ ಹಳ್ಳಿ ಕಾವೇರಿ ನೀರು ಪಂಪಿಂಗ್ ಘಟಕಕ್ಕೆ ಭೇಟಿ ನೀಡಿ ಅಗತ್ಯ ಸಲಹೆ ನೀಡಿದ್ದರು. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳಿ ಎಂದಿದ್ದರು. ಅದರಂತೆ ಇಂಜಿನಿಯರ್ ತಂಡ ಸ್ಥಳದಲ್ಲೇ ಬೀಡು ಬಿಟ್ಟು ನೀರು ಹೊರ ಹಾಕುವಲ್ಲಿ ಯಶಸ್ವಿಯಾಗಿದೆ. ಅಲ್ಲದೇ ಬೆಂಗಳೂರಿಗೆ ನಿತ್ಯ ಪೂರೈಕೆಯಾಗುವ 1450 ಎಂಎಲ್‌ಡಿ ನೀರು ಒದಗಿಸುವಲ್ಲಿ ಬೆಂಗಳೂರು ಜಲಮಂಡಳಿ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications