ಬೆಂಗಳೂರಿಗರೇ ಗಮನಿಸಿ: ಕೆರೆ ನೀರನ್ನು ಬಳಸದಂತೆ ಎಚ್ಚರಿಕೆ: ವೈಜ್ಞಾನಿಕ ಕಾರಣ ಕೊಟ್ಟ ಜಲಮಂಡಳಿ
ಬೆಂಗಳೂರು ಮಾರ್ಚ್ 25: ಬೆಂಗಳೂರಿನಲ್ಲಿ ಅಂತರ್ಜಲ ಹೆಚ್ಚಿಸಲು ಮತ್ತು ನಗರದ ಕೆರೆಗಳನ್ನು ಸುಸ್ಥಿತಿಯಲ್ಲಿ ಕಾಪಾಡುವ ದೃಷ್ಟಿಯಿಂದ ಕೆಂಗೇರಿ ಕೆರೆ ಸೇರಿದಂತೆ 14 ಕೆರೆಗಳಿಗೆ ಸರ್ಕಾರ ತುಂಬಿಸಲು ಕ್ರಮ ಕೈಗೊಂಡಿದೆ. ಸಂಸ್ಕೃರಿಸಿದ ನೀರನ್ನು ಹರಿಸಲಾಗುತ್ತಿದೆ. ಇದೀಗ ಈ ನೀರನ್ನು ಜನರು ಕುಡಿಯಲು, ಗೃಹ ಬಳಕೆಗೆ ಬಳಸದಂತೆ ಜಲಮಂಡಳಿ ಎಚ್ಚರಿಕೆ ನೀಡಿದೆ.
ಕೆರೆ ತುಂಬಿಸುತ್ತಿರುವ ಕುರಿತು ಮಾಹಿತಿ ನೀಡಿರುವ ಬೆಂಗಳೂರು ಜಲ ಮಂಡಳಿ ಮತ್ತು ನೀರು ಸರಬರಾಜು ಮಂಡಳಿ (BWSSB) ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ ಸಂಸ್ಕರಿಸಿ ನಗರದ ಅಂತರ್ಜಲ ವೃದ್ಧಿಯ ದೃಷ್ಟಿಯಿಂದ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಈ ನೀರನ್ನು, ರಾಷ್ಟ್ರೀಯ ಹಸಿರು ಪ್ರಾಧಿಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಕಟ್ಟುನಿಟ್ಟಿನ ಮನದಂಡಗಳ ಆಧಾರದ ಮೇಲೆ ಸಂಸ್ಕರಿಸಲಾಗುತ್ತಿದೆ.
ಈ ನೀರಿನ ಬಳಕೆಯಿಂದ ಅನಾರೋಗ್ಯ
ಈ ನೀರನ್ನು ನೇರವಾಗಿ ಉಪಯೋಗಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳು ಇವೆ. ಸಾರ್ವಜನಿಕರು ಹಿತಾಸಕ್ತಿಯ ದೃಷ್ಟಿಯಿಂದ ಈ ಸೂಚನೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕೆಂಗೇರಿ ಕೆರೆ ಸೇರಿದಂತೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿರುವ ನಗರದ ಯಾವುದೇ 14 ಕೆರೆಗಳಿಂದಲೂ ಸಹ ಇಲ್ಲಿನ ನೀರನ್ನು ಕುಡಿಯಲು ಹಾಗೂ ಗೃಹ ಬಳಕೆಗೆ ಉಪಯೋಗಿಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಕೆರೆಗಳ ಮರುಪೂರಣ ಕಾರ್ಯಕ್ಕೆ ಚಾಲನೆ
ಕೆಂಗೇರಿ ಕೆರೆಗೆ ಸಂಸ್ಕರಿಸಿದ ನೀರನ್ನು ಹರಿಸುವ ಮೂಲಕ ಕುಸಿದಿರುವ ಅಂತರ್ಜಲವನ್ನು ಮರುಪೂರಣಗೊಳಿಸಲು ಜಲಮಂಡಳಿ ಮುಂದಾಗಿದೆ. ಎರಡನೇ ಹಂತದಲ್ಲಿ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಅವ್ಯಾಹತವಾಗಿ ಅಂತರ್ಜಲ ಬಳಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಅವಶ್ಯಕತೆ ಪೂರೈಸಲು ಅಂತರ್ಜಲ ಮರುಪೂರಣ ಮಾಡಬೇಕಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಜಲಮಂಡಳಿ ಕೈಗೊಳ್ಳುತ್ತಿದೆ ಎಂದು ಅವರು ವಿವರಿಸಿದರು.
ಯಾವೆಲ್ಲ ಕೆರೆಗಳು ಮರುಪೂರಣ
ವೃಷಭಾವತಿ ವ್ಯಾಲಿಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕ, ನಾಯಂಡಹಳ್ಳಿ ಕೆರೆ, ಕೆಂಗೇರಿ ಎಸ್.ಟಿ.ಪಿ ಮಂಡಳಿ ವತಿಯಿಂದ ಸಂಸ್ಕರಿಸಿದ ನೀರನ್ನು ಕೆಂಗೇರಿ ಕೆರೆಗೆ ತುಂಬಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಂಡಳಿ ವತಿಯಿಂದ ಸಂಸ್ಕರಿಸಿ ನೀರನ್ನು ದುಬಾಸಿಪಾಳ್ಯ, ಹೊಸಕೆರಳ್ಳಿ ಹಾಗೂ ಹಲಗೇವಡೆರಹಳ್ಳಿ ಕೆರೆಗಳಿಗೆ ತುಂಬಿಸಲಾಗುವುದು ಎಂದರು.
ಹೋಳಿ ಹಬ್ಬ: ಜಲಮಂಡಳಿ ಎಚ್ಚರಿಕೆ
ಇನ್ನೂ ಜಲಮಂಡಲಿಯ ಎಚ್ಚರಿಕೆಯ ನಡುವೆಯೂ ಹೋಳಿ ಹಬ್ಬದ ಅಂಗವಾಗಿ ಕಾವೇರಿ ಹಾಗೂ ಕೊಳವೆಬಾವಿ ನೀರನ್ನು ಬಳಸಿ ರೈನ್ ಡ್ಯಾನ್ಸ್ ಆಯೋಜಿಸಿದ್ದರೆ ಅಂತಹ ಸಂಸ್ಥೆಗಳ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಜಲಮಂಡಳಿ ಅಧ್ಯಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.












Click it and Unblock the Notifications