ಸರ್ಕಾರದ ಮುಂದೆ ಹೆಸರಘಟ್ಟ ಕೆರೆ ಅಭಿವೃದ್ಧಿ ಪ್ರಸ್ತಾವನೆ
ಬೆಂಗಳೂರು, ಮೇ 09: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಬೆಂಗಳೂರಿನ ಹೆಸರುಘಟ್ಟ ಕೆರೆಯ ಸಮಗ್ರ ಅಭಿವೃದ್ಧಿ ಅಗತ್ಯ ಸಿದ್ಧತೆ ಕೈಗೊಂಡಿದೆ. ಈ ಕುರಿತ ಪ್ರಸ್ತಾವನೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲಿಸಲಿದೆ.
ಬೆಂಗಳೂರು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಯಿತು. ಈ ವೇಳೆ ಮಾತನಾಡಿ ಜಲಮಂಡಳಿ ಅಧ್ಯಕ್ಷರಾದ ಡಾ. ವಿ ರಾಮ್ ಪ್ರಸಾತ್ ಮನೋಹರ್ ಅವರು, ಹೆಸರುಘಟ್ಟ ಕೆರೆಯ ಸಮಗ್ರ ಅಭಿವೃದ್ಧಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ನಗರದ ಹೆಸರುಘಟ್ಟ ಕೆರೆಯಲ್ಲಿರುವ ನೀರಿನಿಂದ ಹೆಸರುಘಟ್ಟ ಕೆರೆಯ ಅಕ್ಕಪಕ್ಕದ ಗ್ರಾಮಗಳಿಗೆ ಬಹಳಷ್ಟು ಅನುಕೂಲವಾಗಿದೆ. ಈ ಕೆರೆಯ ನೀರಿನಿಂದ ಹಲವಾರು ಪ್ರಾಣಿ ಮತ್ತು ಪಕ್ಷಿಗಳು ಅವಲಂಬಿತವಾಗಿವೆ. ಈ ಹಿನ್ನಲೆಯಲ್ಲಿ ನೀರನ್ನ ಸರಬರಾಜು ಮಾಡುವುದು ಬೇಡ.
ಹೂಳು ತುಂಬಿದ ಕೆರೆ ಅಭಿವೃದ್ಧಿಗೆ ಮನವಿ
ಈ ಕೆರೆಗೆ ನೀರು ಬರುವಂತಹ ಪ್ರದೇಶಗಳಲ್ಲಿ ಮಾಲಿನ್ಯ ಇದ್ದು, ಅದನ್ನು ಕಡಿಮೆ ಮಾಡಬೇಕಿದೆ. ಕೆರೆಯಲ್ಲಿ ಹೂಳು ತುಂಬಿದ್ದು ನೀರಿನ ಸಂಗ್ರಹ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತಿಲ್ಲ. ಇದನ್ನ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಅರಳಾಪುರ ಮಂಜೇಗೌಡ ಮನವಿ ಮಾಡಿದರು.
1894 ರಲ್ಲಿ ಬೆಂಗಳೂರು ನಗರಕ್ಕೆ ನೀರು ಸರಬರಾಜು ಮಾಡುವ ಉದ್ದೇಶದಿಂದ ಹೆಸರುಘಟ್ಟ ಕೆರೆಯನ್ನು ನಿರ್ಮಿಸಲಾಗಿತ್ತು. ಇಲ್ಲಿನ ನೀರನ್ನು ಸೋಲದೇವನಹಳ್ಳಿ ಪಂಪಿಂಗ್ ಸ್ಟೇಷನ್ ನಿಂದ ನಗರಕ್ಕೆ ಸರಬರಾಜು ಮಾಡಲಾಗುತ್ತಿತ್ತು. ನಗರದ ದಾಸರಹಳ್ಳಿ ಪ್ರದೇಶದಲ್ಲಿ ನೀರಿನ ಅಭಾವವಿದೆ.
ಕೆರೆಗೆ ಎತ್ತಿನಹೊಳೆ ಯೋಜನೆಯಿಂದ ನೀರು
ಹೆಸರುಘಟ್ಟ ಕೆರೆಯಿಂದ ಕೇವಲ ಸಣ್ಣ ಪ್ರಮಾಣದ ನೀರನ್ನು ಅಲ್ಲಿಗೆ ಸರಬರಾಜು ಮಾಡಲು ಉದ್ದೇಶವನ್ನು ಜಲಮಂಡಳಿ ಹೊಂದಿತ್ತು. ಈಗ ಅದಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆಯ ಮೂಲಕ ಲಭ್ಯವಾಗುವ ನೀರನ್ನು ಸರಬರಾಜು ಮಾಡಲು ಸಜ್ಜುಗೊಳಿಸುವುದು ನಮ್ಮ ಗುರಿ ಎಂದರು.

ಈಗ ರೈತ ಸಂಘದ ಪದಾಧಿಕಾರಿಗಳು ನೀರು ಸರಬರಾಜು ಮಾಡುವುದು ಬೇಡ ಎನ್ನುವ ಮನವಿಯನ್ನು ಮಾಡಿದ್ದಾರೆ. ಈ ಬಗ್ಗೆ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿಅವರು ಭರವಸೆ ನೀಡಿದರು.
ಕೆರೆ ಅಭಿವೃದ್ಧಿಯಿಂದ ಭವಿಷ್ಯಕ್ಕೆ ಅನುಕೂಲ
ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಲಮಂಡಳಿ ಅಧ್ಯಕ್ಷರು, ಕೆರೆಯನ್ನು ಸಮಗ್ರ ಅಭಿವೃದ್ಧಿ ಮಾಡುವುದರಿಂದ ಹೆಸರುಘಟ್ಟದ ಸುತ್ತಮುತ್ತಲಿನ ಗ್ರಾಮಗಳಿಗೂ ಹಾಗೂ ನಗರದ ಭವಿಷ್ಯದ ಬಳಕೆಗೂ ಅನುಕೂಲವಾಗಲಿದೆ. ಇದನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಮಂಡಳಿಯ ವತಿಯಿಂದ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಮಳೆ ಬೀಳುತ್ತಿರುವುದು, ಸದ್ಯದಲ್ಲೇ ಕಾವೇರಿ 5 ನೆ ಹಂತದ ಕಾಮಗಾರಿ ಮುಕ್ತಾಯ ಗೊಂಡು ಹೆಚ್ಚಿನ ನೀರಿನ ಲಭ್ಯವಾಗುವುದು ಮತ್ತು ಲಭ್ಯವಿರುವ ನೀರಿನ ಪ್ರಮಾಣ ಗಣನೆಗೆ ತಗೆದುಕೊಳ್ಳಲಾಗುವುದು. ನೀರನ್ನು ಉಪಯೋಗ ಮಾಡುವ ಮುನ್ನ ರೈತರೊಂದಿಗೆ ಮತ್ತು ಸರ್ಕಾರದೊಂದಿಗೆ ಸಮಾಲೋಚನೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿಗಳಾದ ನಂಜುಂಡಪ್ಪ ಕಡತನಮಲೆ, ಸಂಘಟನಾ ಕಾರ್ಯದರ್ಶಿ ಆರ್ ಲೋಕೇಶ್ ಶರ್ಮಾ, ಜಲಮಂಡಳಿಯ ಪ್ರಧಾನ ಮುಖ್ಯ ಇಂಜಿನೀಯರ್ ಸುರೇಶ್ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?












Click it and Unblock the Notifications