BWSSB: ಸಂಸ್ಕರಿಸಿದ ನೀರಿನ ಬಳಕೆಗೆ ಉತ್ತೇಜನಕ್ಕಾಗಿ ಪ್ರಮುಖ ಒಪ್ಪಂದ: ಏ.2 ರಿಂದ ನೀರು ಪೂರೈಕೆ
ಬೆಂಗಳೂರು, ಮಾರ್ಚ್ 31: ಬೆಂಗಳೂರಿನಲ್ಲಿ ಕಟ್ಟಡಗಳ ನಿರ್ಮಾಣದ ಬಳೆಕಗಾಗಿ ಸಂಸ್ಕರಿಸಿದ ನೀರಿನ ಪೂರೈಕೆಯನ್ನು ಏಪ್ರಿಲ್ 2ರಿಂದ ಆರಂಭಿಸಲಿರುವ ಬೆಂಗಳೂರು ಜಲಮಮಂಡಳಿಯು ಉತ್ತೇಜನೆ ನೀಡುತ್ತಿದೆ. ಈ ನಿಟ್ಟಿನಲ್ಲಿ ನಗರದ ಅಪಾರ್ಟ್ ಮೆಂಟ್ ಫೆಡೆರೇಷನ್ ಮತ್ತು 'ಕ್ರೇಡೈ' ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ಈ ಕುರಿತು ಭಾನುವಾರ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಮಾಹಿತಿ ನೀಡಿದರು. ಬೆಂಗಳೂರು ಅಪಾರ್ಟ್ ಮೆಂಟ್ ಫೆಡೆರೇಷನ್ ಹಾಗೂ ಕ್ರೇಡೈ ಜೊತೆಗೆ ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಅಪಾರ್ಟ್ ಮೆಂಟ್ ಗಳ STP ಗಳಿಂದ ಶುದ್ಧೀಕರಣ ಗೊಳಿಸಲಾಗಿರುವ ಶೇಕಡಾ 50 ರಷ್ಟು ನೀರನ್ನು ಮಾರಾಟ ಮಾಡಲು ಮಾರ್ಚ್ 11 ರಂದು ಅನುಮತಿ ನೀಡಲಾಗಿದೆ.

ಜಲಮಂಡಳಿ ತ್ಯಾಜ್ಯ ನೀರು ಶುದ್ಧಿಕರಣ ಘಟಕದಲ್ಲೂ ಸಂಸ್ಕರಿಸಿದ ನೀರು ಲಭ್ಯವಿದೆ. ಈ ನೀರನ್ನು ಬಳಕೆದಾರರಿಗೆ ಸಮರ್ಪಕವಾಗಿ ಪೂರೈಸುವ ಉದ್ದೇಶದಿಂದ ಈ ಸಹಭಾಗಿತ್ವಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ನೀರು ಪೂರೈಕೆಗೆ ಪ್ರತ್ಯೇಕ ಪೈಪ್ ಲೈನ್
ಖಾಸಗಿ (ಅಪಾರ್ಟ್ ಮೆಂಟ್) ಹಾಗೂ ಜಲಮಂಡಳಿ ತ್ಯಾಜ್ಯ ನೀರು ಶುದ್ಧಿಕರಣ ಘಟಕದಿಂದ 500 ಮೀಟರ್ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ದೊಡ್ಡ ಕಟ್ಟಡಗಳ ಬಳಕೆಗೆ ಪ್ರತ್ಯೇಕವಾದ ಪೈಪ್ ಲೈನ್ ಅಳವಡಿಸಲಾಗುವುದು. ಈ ವ್ಯವಸ್ಥೆ ಮೂಲಕ ಸಂಸ್ಕೃರಿಸಿದ ನೀರನ್ನು ಸರಬರಾಜು ಮಾಡಲಾಗುವುದು. ಅಗತ್ಯಕ್ಕೆ ತಕ್ಕಂತೆ ಮಾತ್ರ ಸರಬರಾಜು ಮಾಡಲಾಗುವುದು ಎಂದರು.
ಬೋರ್‌ವೆಲ್ ಮೇಲೆ ಒತ್ತಡ ಇಳಿಕೆ
ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ಬಹುತೇಕ ಕೊಳವೆಬಾವಿ ಗಳು ಮತ್ತು ಟ್ಯಾಂಕರ್ ಗಳನ್ನು ಅವಲಂಬಿಸಲಾಗುತ್ತದೆ. ಇದರಿಂದ ಅಂತರ್ಜಲದ ಮೇಲೆ ಬಹಳಷ್ಟು ಒತ್ತಡ ಹೆಚ್ಚಾಗಿದೆ. ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವುದರಿಂದ ಇದನ್ನು ಗಣನೀಯವಾಗಿ ಕಡಿಮೆ ಮಾಡಬಹುದಾಗಿದೆ.
ಅಪಾರ್ಟ್ಮೆಂಟ್ ಗಳ ಸಂಸ್ಕರಿಸಿದ ನೀರನ್ನು ಮಾರಾಟ ಮಾಡಲು ಈಗಾಗಲೇ ಅನುಮತಿಸಲಾಗಿದೆ. ಇದೆ ರೀತಿ ಕಟ್ಟಡ ನಿರ್ಮಾಣಕ್ಕೆ ಸಂಸ್ಕರಿಸಿದ ನೀರನ್ನು ಮಾತ್ರ ಬಳಕೆ ಮಾಡಬೇಕು ಎಂದು ಆದೇಶಿಸಲಾಗಿದೆ. ಉತ್ಪಾದಕರು ಹಾಗೂ ಗ್ರಾಹಕರನ್ನು ಒಂದೇ ವೇದಿಕೆಯ ಅಡಿಯಲ್ಲಿ ತರುವುದು ನಮ್ಮ ಉದ್ದೇಶವಾಗಿದೆ. ಅಪಾರ್ಟ್ ಮೆಂಟ್ ಗಳು ತಮ್ಮ ಹೆಚ್ಚುವರಿ ನೀರನ್ನು ಸುಲಭವಾಗಿ ಮಾರಾಟ ಮಾಡಲು ಗ್ರಾಹಕರನ್ನು ಒದಗಿಸುವ ವೇದಿಕೆ ಆಗಿ ಇದು ಕಾರ್ಯವಹಿಸಲಿದೆ ಎಂದು ಅವರು ವಿವರಿಸಿದರು.

ಜಲಮಂಡಳಿಗೆ ಮತ್ತೊಂದು ಅದಾಯ ಮೂಲ
ಬೆಂಗಳೂರು ಜಲಮಂಡಳಿಯು ಹಾಲಿ 62 ಲಕ್ಷ ಲೀಟರ್ ಸಂಸ್ಕರಿಸಿದ ನೀರಿಗೆ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಂಸ್ಕರಿಸಿದ ನೀರನ್ನು ಮಾರಾಟ ಮಾಡುವ ಮೂಲಕ ಜಲಮಂಡಳಿ ಗೆ ಆದಾಯವೂ ಹೆಚ್ಚಾಗಲಿದೆ. ಮಂಗಳವಾರ ದಿಂದ ಸರಬರಾಜು ಪ್ರಾರಂಭಿಸಲಾಗುವುದು. ಈ ಒಪ್ಪಂದದಿಂದ ಬೆಂಗಳೂರು ಜಲಂಡಳಿಗೆ ಮತ್ತೊಂದು ಹೊಸ ಆದಾಯ ಮೂಲ ಹುಟ್ಟಿಕೊಂಡಂತಾಗಿದೆ.
ಮೊದಲ ಹಂತದ ನೀರು ಪೂರೈಕೆ ಮಾಹಿತಿ
ಜಲಮಂಡಲಿಯು ಮೊದಲ ಹಂತದಲ್ಲಿ ಖಾಸಗಿ ಮತ್ತು ಜಲಮಂಡಳಿ ಎಸ್ ಟಿ ಪಿ ಗಳ 5 ಕಿಲೋಮೀಟರ್ ವ್ಯಾಪ್ತಿಯಲ್ಲಿ ಪ್ರತ್ಯೇಕ ಪೈಪ್ ಲೈನ್ ಅಥವಾ ಟ್ಯಾಂಕರ್ ಗಳ ಮೂಲಕ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಚಿಂತನೆ ನಡೆಸಿದೆ. ಈ ನೀರಿನ ವೆಚ್ಚವನ್ನು ಗ್ರಾಹಕರೇ ಭರಿಸಲಿದ್ದಾರೆ.
ಗ್ರಾಹಕರು ಬೆಂಗಳೂರು "ಪರಿಸರ ಜಲಸ್ನೇಹಿ" ಅಪ್ ಮೂಲಕ ಸಂಸ್ಕರಿಸಿದ ನೀರನ್ನು ಬುಕ್ಕಿಂಗ್ ಮಾಡಿ ಪಡೆಯಬಹುದು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications