ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪಚುನಾವಣೆ ಟಿಕೆಟ್ ಅಂತಿಮಕ್ಕೆ ರಾಜ್ಯಕ್ಕೆ ಕೈ ನಾಯಕರು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26: ಉಪಚುನಾವಣೆ ಟಿಕೆಟ್ ಅಂತಿಮಗೊಳಿಸಲು ಕಾಂಗ್ರೆಸ್ ಹರಸಾಹಸ ಪಡುತ್ತಿದ್ದು ಇಂದು ಹೈಕಮಾಂಡ್‌ನ ಕೆಲವು ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಇನ್ನೂ ಕೆಲವು ಪ್ರಮುಖ ನಾಯಕರು ಅವರೊಂದಿಗೆ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಟಿಕೆಟ್ ಬೇಡವೆಂದ ಕಾಂಗ್ರೆಸ್ ನಾಯಕಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಟಿಕೆಟ್ ಬೇಡವೆಂದ ಕಾಂಗ್ರೆಸ್ ನಾಯಕ

ನಿನ್ನೆಯಷ್ಟೆ ಶಾಸಕಾಂಗ ಪಕ್ಷದ ಅಧ್ಯಕ್ಷ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು 11 ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

By Election Congress Ticket: Leaders Came To Bengaluru

ಉಪಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದು ಕಾಂಗ್ರೆಸ್‌ಗೆ ಅನಿವಾರ್ಯವಾಗಿದ್ದು, ಹಾಗಾಗಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲೆಂದು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ.

ಕೆಲವು ಕ್ಷೇತ್ರಗಳಲ್ಲಿ ಒಂದಕ್ಕಿಂತಲೂ ಹೆಚ್ಚು ಆಕಾಂಕ್ಷಿಗಳಿದ್ದು, ಇಲ್ಲಿ ರಾಜಿ-ಸಂಧಾನದ ಮೂಲಕ ಒಮ್ಮತದ ಅಭ್ಯರ್ಥಿಯನ್ನು ಆರಿಸುವ ಪ್ರಯತ್ನವನ್ನು ಕಾಂಗ್ರೆಸ್ ಮುಖಂಡರು ಮಾಡುತ್ತಿದ್ದಾರೆ.

ಕ್ಷೇತ್ರ ಪರಿಚಯ: ಕಾಂಗ್ರೆಸ್ ಭದ್ರಕೋಟೆ ಶಿವಾಜಿನಗರ ಸಮಸ್ಯೆಗಳ ಆಗರಕ್ಷೇತ್ರ ಪರಿಚಯ: ಕಾಂಗ್ರೆಸ್ ಭದ್ರಕೋಟೆ ಶಿವಾಜಿನಗರ ಸಮಸ್ಯೆಗಳ ಆಗರ

ಶಿವಾಜಿನಗರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹಗಳು ಎದ್ದಿದ್ದು, ಶಿವಾಜಿನಗರದಲ್ಲಿ ರಿಜ್ವಾನ್ ಅರ್ಷದ್‌ಗೆ ಟಿಕೆಟ್ ನೀಡಬಾರದು ಎಂದು ಕಾಂಗ್ರೆಸ್ ನಾಯಕರು ಕೆಲವರು ಗಲಾಟೆ ಮಾಡಿದ್ದಾರೆ.

English summary
High command's some leaders came to Bengaluru today to discuss by election ticket distribution.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X