• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಂದು ಬಿಬಿಎಂಪಿಯ ಎರಡು ವಾರ್ಡ್‌ಗಳಿಗೆ ಉಪ ಚುನಾವಣೆ

|

ಬೆಂಗಳೂರು, ಮೇ 29: ಬಿಬಿಎಂಪಿಯ ಎರಡು ವಾರ್ಡ್‌ಗಳಿಗೆ ಇಂದು(ಮೇ 29)ಉಪ ಚುನಾವಣೆ ನಡೆಯಲಿದೆ.

ಸಗಾಯ್‌ರಾಯಪುರ ವಾರ್ಡ್‌ನಲ್ಲಿ 14 ಅಭ್ಯರ್ಥಿಗಳು ಮತ್ತು ಕಾವೇರಿಪುರ ವಾರ್ಡ್‌ನಿಂದ ಐವರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಾಮಪತ್ರ ವಾಪಸ್‌ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಅದರಂತೆ ಸಗಾಯಪುರ ವಾರ್ಡ್‌ನಲ್ಲಿ ಈ ಮೊದಲು 16 ಜನರು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಇಬ್ಬರು ಪಕ್ಷೇತರರು ನಾಮಪತ್ರ ವಾಪಸ್‌ ಪಡೆದು 14 ಜನ ಅಂತಿಮ ಕಣದಲ್ಲಿ ಉಳಿದಿದ್ದಾರೆ.

ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ ಬಿಬಿಎಂಪಿ ಉಪ ಚುನಾವಣೆ : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣಕ್ಕೆ

ಸಗಾಯರಾಯಪುರ ವಾರ್ಡ್‌ನ ಕಾಂಗ್ರೆಸ್‌ ಬೆಂಬಲಿತ ಪಕ್ಷೇತರ ಸದಸ್ಯ ಏಳುಮಲೈ ಹಾಗೂ ಕಾವೇರಿಪುರ ವಾರ್ಡ್‌ನ ಜೆಡಿಎಸ್‌ ಸದಸ್ಯೆ ರಮೀಳಾ ಉಮಾಶಂಕರ್‌ ಅವರ ನಿಧನದಿಂದ ತೆರವಾಗಿದ್ದ ಸ್ಥಾನಗಳಿಗೆ ಇಂದು ಉಪಚುನಾವಣೆ ನಡೆಯಲಿದೆ.

ಕಾವೇರಿಪುರ ವಾರ್ಡ್‌ನಲ್ಲಿ ನಾಮಪತ್ರ ಸಲ್ಲಿಸಿದ್ದ 10 ಜನರ ಪೈಕಿ ಐವರು ನಾಮಪತ್ರ ವಾಪಸ್‌ ಪಡೆದಿದ್ದರಿಂದ ಐವರು ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ. ಕಾವೇರಿಪುರ ವಾರ್ಡ್‌ನಲ್ಲಿ ಬಿಜೆಪಿಯಿಂದ ಅಧಿಕೃತ ಬಿ ಫಾರಂ ಪಡೆದು ಸಿ. ಪಲ್ಲವಿ ಕಣಕ್ಕಿಳಿದಿದ್ದಾರೆ.

ಕಾವೇರಿ ಪುರ ವಾರ್ಡ್‌ನಲ್ಲಿ ಬಿಜೆಪಿಗೆ, ಸಗಾಯರಾಯಪುರ ವಾರ್ಡ್‌ನಲ್ಲಿ ಮೈತ್ರಿ ಅಭ್ಯರ್ಥಿಗೆ ಬಂಡಾಯದ ಬಂಡಾಯದ ಬಿಸಿ ಎದುರಾಗಿದೆ. ಸಗಾಯರಾಯಪುರ ವಾರ್ಡ್‌ನಿಂದ ಕಾಂಗ್ರೆಸ್‌ ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಏಳುಮಲೈ ಸಹೋದರಿ ಪಳನಿಯಮ್ಮ ಅವರು ಸ್ಪರ್ಧಿಸಿದ್ದಾರೆ.

ಆದರೆ, ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧೆ ಮಡಿ ಪರಾಭವಗೊಂಡಿದ್ದ ಮಾರಿಮುತ್ತು ಜೆಡಿಎಸ್‌ನಿಂದ ಮತ್ತೆ ಟಿಕೆಟ್‌ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಎ.ಜೀಯೇರೀಮ್‌ ಅಂತಿಮ ಕಣದಲ್ಲಿದ್ದಾರೆ.

English summary
As many as 63 Urban Local bodies will go for elections Today. Candidates finalized for Sagayapuram and Kaveripura ward BBMP by elections 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X