ಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರದಲ್ಲಿ 56 ಅಭ್ಯರ್ಥಿಗಳು

ಬೆಂಗಳೂರು, ನವೆಂಬರ್ 22 : ಉಪ ಚುನಾವಣಾ ಕಣ ಅಂತಿಮಗೊಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 4 ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದ್ದು, ಒಟ್ಟು 56 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 5ರಂದು ಮತದಾನ ನಡೆಯಲಿದೆ.

ಉಪ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ನವೆಂಬರ್ 21 ಕೊನೆಯ ದಿನವಾಗಿತ್ತು. ಬೆಂಗಳೂರು ನಗರದಲ್ಲಿ ಒಟ್ಟು 56 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಹೆಚ್ಚು ಎಂದರೆ 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕೆ. ಆರ್. ಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ ಮತ್ತು ಯಶವಂತಪುರ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯುತ್ತಿದೆ. ನಾಲ್ಕು ಕ್ಷೇತ್ರಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ ಸೇರುತ್ತವೆ.

By Elections 56 Candidates in Bengaluru 4 Seats Fray

ಶಿವಾಜಿನಗರದಲ್ಲಿ 19, ಮಹಾಲಕ್ಷ್ಮೀ ಲೇಔಟ್‌ನಲ್ಲಿ 12, ಯಶವಂತಪುರದಲ್ಲಿ 12 ಮತ್ತು ಕೆ. ಆರ್. ಪುರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಡಿಸೆಂಬರ್ 5ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 9ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಒಟ್ಟು 165 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶಿವಾಜಿನಗರದಲ್ಲಿ ಗರಿಷ್ಠ ಅಂದರೆ 19, ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಕಡಿಮೆ ಎಂದರೆ 12 ಮಂದಿ ಕಣದಲ್ಲಿದ್ದಾರೆ.

ನವೆಂಬರ್ 18ರ ತನಕ 205 ಪುರುಷ, 13 ಮಹಿಳೆಯರು ನಾಮಪತ್ರ ಸಲ್ಲಿಸಿದ್ದರು. 53 ಮಂದಿ ನಾಮಪತ್ರ ವಾಪಸ್ ಪಡೆದಿದ್ದಾರೆ. 9 ಮಹಿಳೆಯರು, 156 ಪುರುಷ ಸೇರಿ 165 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+