ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಾಜಿನಗರ ಚುನಾವಣೆ; ಬಿಜೆಪಿ ಟಿಕೆಟ್‌ಗೆ ಹೊಸ ಹೆಸರು

|
Google Oneindia Kannada News

ಬೆಂಗಳೂರು, ನವೆಂಬರ್ 14 : ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಆರಂಭವಾಗಿದೆ. ಮಾಜಿ ಸಚಿವ, ಅನರ್ಹ ಶಾಸಕ ರೋಷನ್ ಬೇಗ್ ಬಿಜೆಪಿ ಸೇರಲು ಹೈಕಮಾಂಡ್ ಇನ್ನೂ ಒಪ್ಪಿಗೆ ಕೊಟ್ಟಿಲ್ಲ.

ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು. ಯಡಿಯೂರಪ್ಪ ವಾಕಿಂಗ್ ಮುಗಿಸಿಕೊಂಡು ಬಂದವರೇ ಶಿವಾಜಿನಗರ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದರು.

ಶಿವಾಜಿನಗರದ ರೋಷನ್ ಬೇಗ್ ಏಕೆ ಬಿಜೆಪಿ ಸೇರುತ್ತಿಲ್ಲ?ಶಿವಾಜಿನಗರದ ರೋಷನ್ ಬೇಗ್ ಏಕೆ ಬಿಜೆಪಿ ಸೇರುತ್ತಿಲ್ಲ?

By Elections Katta Subramanya Naidu Meets BS Yediyurappa

ಕಟ್ಟಾ ಸುಬ್ರಮಣ್ಯ ನಾಯ್ಡು ಹೆಸರು ಸಹ ಶಿವಾಜಿ ನಗರದ ಬಿಜೆಪಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿದೆ. ಆದ್ದರಿಂದ, ಬೆಳಗ್ಗೆ ಉಭಯ ನಾಯಕರು ಭೇಟಿಯಾಗಿದ್ದು, ಕುತೂಹಲವನ್ನು ಹುಟ್ಟು ಹಾಕಿದೆ. ಯಾರಿಗೆ ಟಿಕೆಟ್ ಎಂಬುವು ಸಂಜೆಯ ವೇಳೆಗೆ ಅಂತಿಮವಾಗಲಿದೆ.

ಉಪ ಚುನಾವಣೆ; ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿ ಹೆಸರು!ಉಪ ಚುನಾವಣೆ; ಬಿಜೆಪಿ ಸಂಭಾವ್ಯ ಪಟ್ಟಿಯಲ್ಲಿ ಅಚ್ಚರಿ ಹೆಸರು!

ಶಿವಾಜಿನಗರ ಕ್ಷೇತ್ರದ ಅನರ್ಹ ಶಾಸಕ ರೋಷನ್ ಬೇಗ್ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿಲ್ಲ. ಆದ್ದರಿಂದ, ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣೆ ಟಿಕೆಟ್ ಯಾರಿಗೆ? ಎಂಬ ಪ್ರಶ್ನೆ ಎದುರಾಗಿದೆ.

ಕ್ಷೇತ್ರ ಪರಿಚಯ: ಕಾಂಗ್ರೆಸ್ ಭದ್ರಕೋಟೆ ಶಿವಾಜಿನಗರ ಸಮಸ್ಯೆಗಳ ಆಗರಕ್ಷೇತ್ರ ಪರಿಚಯ: ಕಾಂಗ್ರೆಸ್ ಭದ್ರಕೋಟೆ ಶಿವಾಜಿನಗರ ಸಮಸ್ಯೆಗಳ ಆಗರ

ಕಟ್ಟಾ ಸುಬ್ರಮಣ್ಯ ನಾಯ್ಡು ಅಥವ ಸರವಣಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿದೆ. ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಸಲಾಗಿದೆ. ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಟಿಕೆಟ್ ನೀಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.

English summary
Former minister Katta Subramanya Naidu met Chief Minister B.S. Yediyurappa. Katta Subramanya aspirant for the by election ticket from Shivaji Nagar assembly seat.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X