ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಪ ಚುನಾವಣೆ; ಬೆಂಗಳೂರಿನ 4 ಕ್ಷೇತ್ರಗಳಲ್ಲಿ ನೀತಿ ಸಂಹಿತೆ ಜಾರಿ

|
Google Oneindia Kannada News

ಬೆಂಗಳೂರು, ನವೆಂಬರ್ 12 : ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಪ್ರಕಟಿಸಿದೆ. ನವೆಂಬರ್ 11ರಿಂದಲೇ ಬಿಬಿಎಂಪಿ ವ್ಯಾಪ್ತಿಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.

"ಬೆಂಗಳೂರು ನಗರದ ವ್ಯಾಪ್ತಿಗೆ ಒಳಪಡುವ 4 ಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ" ಎಂದು ಚುನಾವಣಾಧಿಕಾರಿ, ಬಿಬಿಎಂಪಿ ಆಯುಕ್ತ ಬಿ. ಎಚ್. ಅನಿಲ್ ಕುಮಾರ್ ಹೇಳಿದ್ದಾರೆ. ಡಿಸೆಂಬರ್ 5ರಂದು ಉಪ ಚುನಾವಣೆ ನಡೆಯಲಿದೆ.

ಕಾಗವಾಡ ಚುನಾವಣೆ; ಸಿದ್ದರಾಮಯ್ಯ ತಂತ್ರಕ್ಕೆ ಬಿಜೆಪಿ ಕಂಗಾಲು ಕಾಗವಾಡ ಚುನಾವಣೆ; ಸಿದ್ದರಾಮಯ್ಯ ತಂತ್ರಕ್ಕೆ ಬಿಜೆಪಿ ಕಂಗಾಲು

"ಕೆ. ಆರ್. ಪುರ, ಮಹಾಲಕ್ಷ್ಮೀ ಲೇಔಟ್, ಯಶವಂತಪುರ ಮತ್ತು ಶಿವಾಜಿನಗರ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಡಿಸೆಂಬರ್ 5ರಂದು ನಡೆಯಲಿರುವ ಉಪ ಚುನಾವಣಗೆ ಸಿದ್ಧತೆ ಪೂರ್ಣಗೊಂಡಿದೆ" ಎಂದು ಅನಿಲ್ ಕುಮಾರ್ ಹೇಳಿದರು.

ಬಿಎಂಟಿಸಿ ಅಧ್ಯಕ್ಷರಾದ ನಂದೀಶ್ ರೆಡ್ಡಿ; ಕೆ. ಆರ್. ಪುರ ಬಂಡಾಯ? ಬಿಎಂಟಿಸಿ ಅಧ್ಯಕ್ಷರಾದ ನಂದೀಶ್ ರೆಡ್ಡಿ; ಕೆ. ಆರ್. ಪುರ ಬಂಡಾಯ?

ಉಪ ಚುನಾವಣೆಯಲ್ಲಿ ಇವಿಎಂ ಜೊತೆ ವಿವಿಪ್ಯಾಟ್ ಯಂತ್ರವನ್ನು ಬಳಕೆ ಮಾಡಲಾಗುತ್ತಿದೆ. ಆಯಾ ವಿಧಾನಸಭಾ ವ್ಯಾಪ್ತಿಯಲ್ಲಿ ಇವಿಎಂ ಶೇಖರಣೆ ಮಾಡಲಾಗಿದೆ. ಉಪ ಚುನಾವಣೆ ಅಕ್ರಮದ ಕುರಿತು ದೂರು ನೀಡಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

ಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರುಕೆ. ಗೋಪಾಲಯ್ಯ ವಿರುದ್ಧ ಬಿಜೆಪಿ ಹೈಕಮಾಂಡ್‌ಗೆ ದೂರು

ಉಪ ಚುನಾವಣೆ ಸಿದ್ಧತೆ

ಉಪ ಚುನಾವಣೆ ಸಿದ್ಧತೆ

"ಬೆಂಗಳೂರು ನಗರದ 4 ಕ್ಷೇತ್ರಗಳ ಉಪ ಚುನಾವಣೆಗೆ 5988 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಉಪ ಚುನಾವಣೆ ಕುರಿತು ದೂರು ನೀಡಲು 080-22975561, 884118033 ನಿಯಂತ್ರಣ ಕೊಠಡಿಯನ್ನು ಸ್ಥಾಪನೆ ಮಾಡಲಾಗಿದೆ" ಎಂದು ಅನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.

ನವೆಂಬರ್ 18 ಕೊನೆ ದಿನ

ನವೆಂಬರ್ 18 ಕೊನೆ ದಿನ

ನವೆಂಬರ್ 18ರ ತನಕ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನವೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನವೆಂಬರ್ 21 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಡಿಸೆಂಬರ್ 5ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಡಿಸೆಂಬರ್ 9ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಎಷ್ಟು ಮತಗಟ್ಟೆಗಳು?

ಎಷ್ಟು ಮತಗಟ್ಟೆಗಳು?

ನವೆಂಬರ್ 11ರಂದು ಮೊದಲ ದಿನ ನಾಲ್ಕು ಕ್ಷೇತ್ರಗಳಲ್ಲಿ ಸೇರಿ ಒಟ್ಟು 6 ನಾಮಪತ್ರ ಸಲ್ಲಿಕೆಯಾಗಿದೆ. ಕೆ.ಆರ್. ಪುರ ಕ್ಷೇತ್ರದಲ್ಲಿ 4,81, 132 ಮತದಾರರು ಇದ್ದು, 437 ಮತಟ್ಟೆ, ಯಶವಂತಪುರ ಕ್ಷೇತ್ರದಲ್ಲಿ 4,75,759 ಮತದಾರರು ಇದ್ದು, 461 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

ಒಟ್ಟು ಮತದಾರರು

ಒಟ್ಟು ಮತದಾರರು

ಶಿವಾಜಿ ನಗರ ಕ್ಷೇತ್ರದಲ್ಲಿ 1,91,618 ಮತದಾರರು ಇದ್ದಾರೆ. 193 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ 2,83,885 ಮತದಾರರು ಇದ್ದು, 270 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

English summary
From November 11, 2019 model code of conduct come to effect in 4 assembly seat of Bengaluru city BBMP limits. By election will be held on December 5.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X