• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸುಧಾಕರ್ ಕುಟುಂಬಕ್ಕಾಗಿ ಪ್ರಾರ್ಥನೆ ಸಲ್ಲಿಸಿದ ಬಿವೈ ವಿಜಯೇಂದ್ರ

|

ಬೆಂಗಳೂರು, ಜೂನ್ 24: ವೈದ್ಯಕೀಯ ಸಚಿವ ಡಾ ಸುಧಾಕರ್ ಕುಟುಂಬಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಪ್ರಾರ್ಥನೆ ಸಲ್ಲಿಸಿದ್ದಾರೆ. ಆದಷ್ಟು ಬೇಗ ಗುಣಮುಖರಾಗಲಿ ಎಂದು ಕೇಳಿಕೊಂಡಿದ್ದಾರೆ.

   ತಂದೆ, ಪತ್ನಿ, ಮಗುವಿಗೆ ಕೊರೊನ ತಗುಲಿರುವ ಬಗ್ಗೆ ಮಾತನಾಡಿದ ಸಚಿವ ಸುಧಾಕರ್ | DR Sudhakar talksabout his family

   ಸಚಿವ ಸುಧಾಕರ್ ಕುಟುಂಬಕ್ಕೆ ಕೂಡ ಕೊರೊನಾ ಸೋಂಕು ಹರಡಿದೆ. ಹೀಗಾಗಿ, ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಬಿವೈ ವಿಜಯೇಂದ್ರ ಪ್ರಾರ್ಥನೆ ಸಲ್ಲಿಸಿದ್ದಾರೆ.

   ಸಚಿವ ಡಾ.ಕೆ.ಸುಧಾಕರ್ ಪತ್ನಿ ಹಾಗೂ ಪುತ್ರಿಗೂ ಕೊರೊನಾವೈರಸ್ ಪಾಸಿಟಿವ್

   ''ವೈದ್ಯಕೀಯ ಶಿಕ್ಷಣ ಸಚಿವ ಶ್ರೀ ಸುಧಾಕರ್‌ರವರೇ, ತಮ್ಮ ತಂದೆ, ತಮ್ಮ ಶ್ರೀಮತಿ ಹಾಗು ಮಗಳಿಗೆ ಕೊರೊನಾ ಸೋಂಕು ಧೃಡಪಟ್ಟಿರುವುದು ತಿಳಿದು ತೀವ್ರ ಆತಂಕವಾಗಿದೆ.'' ಎಂದು ಟ್ವಿಟ್ಟರ್‌ನಲ್ಲಿ ಬಿವೈ ವಿಜಯೇಂದ್ರ ಬರೆದುಕೊಂಡಿದ್ದಾರೆ.

   ''ಇದು ನಿಜಕ್ಕೂ ಪರೀಕ್ಷೆಯ ಸಮಯ. ತಾವು ಇದರಲ್ಲಿ ನಿಶ್ಚಿತವಾಗಿ ಗೆದ್ದು ಬರುತ್ತೀರಿ ಎನ್ನುವ ವಿಶ್ವಾಸವಿದೆ. ಅವರೆಲ್ಲರೂ ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.'' ಎಂದು ಬಿವೈ ವಿಜಯೇಂದ್ರ ಟ್ವಿಟ್ಟರ್ ಖಾತೆಯ ಮೂಲಕ ತಿಳಿಸಿದ್ದಾರೆ.

   ಸುಧಾಕರ್ ಕುಟುಂಬಕ್ಕೆ ಕೊರೊನಾ ಹಬ್ಬಿದ್ದು, ನಿನ್ನೆ ಈ ವಿಷಯವನ್ನು ತಿಳಿಸಿದ್ದರು. ''ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.'' ಎಂದು ಸುಧಾಕರ್ ಸ್ಪಷ್ಟನೆ ನೀಡಿದ್ದರು.

   English summary
   BY Vijayendra wishes for minister DR Sudhakar family speedy recovery from coronavirus. Sudhakar wife And daughter have Coronavirus positive, admitted to hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X