ಅ.18ರಿಂದ ಬೈಯಪ್ಪನಳ್ಳಿ-ವೈಟ್‌ಫೀಲ್ಡ್‌ ಸಬ್ ಅರ್ಬನ್ ರೈಲು ಸಂಚಾರ

ಬೆಂಗಳೂರು, ಅ.14 : ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ನಡುವೆ ಸಬ್ ಅರ್ಬನ್ ರೈಲು ಸಂಚಾರ ಆರಂಭಿಸಲು ಒಪ್ಪಿಗೆ ಸಿಕ್ಕಿದೆ. ಅ.18ರಿಂದ ರೈಲು ಸಂಚಾರ ಆರಂಭವಾಗಲಿದೆ.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಸಬ್ ಅರ್ಬನ್ ರೈಲು ಸಂಚಾರ ಆರಂಭಿಸಬೇಕು ಎಂದು ರೈಲ್ವೆ ಸಚಿವರಿಗೆ ಪತ್ರ ಬರೆದಿದ್ದರು. ಲೋಕಸಭೆ ಅಧಿವೇಶನದಲ್ಲಿಯೂ ಈ ಕುರಿತು ವಿಚಾರ ಪ್ರಸ್ತಾಪಿಸಿದ್ದರು.

Byappanahalli-Whitefield suburban train service from August 18

ನಮ್ಮ ಮೆಟ್ರೋ -2ನೇ ಹಂತದ ರೀಚ್ -1 ವಿಸ್ತರಣಾ ಕಾಮಗಾರಿ ಹಿನ್ನಲೆಯಲ್ಲಿ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಆದ್ದರಿಂದ, ಕೈಗಾರಿಕೆಗಳ ಮಾಲೀಕರು, ಸಭೆ ನಡೆಸಿ ಸಬ್ ಅರ್ಬನ್ ರೈಲು ಸಂಚಾರ ಆರಂಭಿಸಲು ಮನವಿ ಮಾಡಿದ್ದರು.

ರೈಲ್ವೆ ಇಲಾಖೆ ಸಬ್ ಅರ್ಬನ್ ರೈಲು ಸಂಚಾರ ಆರಂಭಿಸಲು ಒಪ್ಪಿಗೆ ನೀಡಿದೆ. ಅ.18ರಿಂದ ಮಾರ್ಗದಲ್ಲಿ ಮೂರು ಮೆಮು ರೈಲುಗಳು ಸಂಚಾರ ನಡೆಸಲಿವೆ. ರೈಲ್ವೆ ಇಲಾಖೆ ಶೀಘ್ರದಲ್ಲಿಯೇ ರೈಲುಗಳ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಸಿದ್ದರಾಮಯ್ಯ ಪತ್ರ : ಕೇಂದ್ರ ಸರ್ಕಾರ ಬೆಂಗಳೂರು ನಗರದಲ್ಲಿ ಸಬ್ ಅರ್ಬನ್ ರೈಲು ಆರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈನಲ್ಲಿ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರ ಬರೆದಿದ್ದು, ಯೋಜನೆಯ ನೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನೀತಿಯಿಂದ ರಾಜ್ಯಕ್ಕೆ ಹೊರೆಯಾಗಲಿದೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+