Breaking: ಬೀಗರಾದ ಸಚಿವ ಬೈರತಿ ಸುರೇಶ್, ಬಿಜೆಪಿ ಶಾಸಕ ವಿಶ್ವನಾಥ್
ಬೆಂಗಳೂರು, ಆಗಸ್ಟ್ 28: ಕರ್ನಾಟಕದ ರಾಜಕಾರಣದಲ್ಲಿ ಬೇರೆ-ಬೇರೆ ಪಕ್ಷದಲ್ಲಿರುವ ಇಬ್ಬರು ನಾಯಕರು ಬೀಗರಾಗಿದ್ದಾರೆ. ಬುಧವಾರ ಬೆಂಗಳೂರು ನಗರದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದ್ದು, 2025ರ ಫೆಬ್ರವರಿಯಲ್ಲಿ ವಿವಾಹ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ಹಲವಾರು ನಾಯಕರು ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಹೊಸ ಜೋಡಿಗೆ ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಬಿಜೆಪಿ ನಾಯಕ, ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಆರ್. ವಿಶ್ವನಾಥ್ ಬೀಗರಾಗುತ್ತಿದ್ದಾರೆ. ಈ ಮೂಲಕ ಬೇರೆ ಬೇರೆ ಪಕ್ಷದ ಇಬ್ಬರು ನಾಯಕರು ಸಂಬಂಧಿಕರಾಗುತ್ತಿದ್ದಾರೆ. ಇದೊಂದು ಲವ್ ಕಮ್ ಅರೇಂಜ್ ಮ್ಯಾರೇಜ್.

ಬುಧವಾರ ಎಸ್. ಆರ್. ವಿಶ್ವನಾಥ್ ಅವರ ಪುತ್ರಿ ಅಪೂರ್ವ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ಪುತ್ರ ಸಂಜಯ್ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯಿತು. ಹಲವಾರು ರಾಜಕೀಯ ನಾಯಕರು, ಗಣ್ಯರು ನಿಶ್ಚಿತಾರ್ಥದಲ್ಲಿ ಭಾಗಿಯಾಗಿ, ಹೊಸ ಜೋಡಿಗೆ ಶುಭ ಹಾರೈಸಿದರು.
ಕೆಲವು ದಿನಗಳ ಹಿಂದೆ ಯಲಹಂಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಸ್. ಆರ್. ವಿಶ್ವನಾಥ್ ಆತ್ಮೀಯರು, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮತ್ತು ನಾನು ಸಂಬಂಧಿಕರಾಗುತ್ತಿದ್ದೇವೆ. ನನ್ನ ಪುತ್ರಿ ಭೈರತಿ ಸುರೇಶ್ ಪುತ್ರನ ಜೊತೆ ವಿವಾಹವಾಗುತ್ತಿದ್ದಾರೆ ಎಂದು ಘೋಷಣೆ ಮಾಡಿದ್ದರು.
ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನಲ್ಲಿ ಬುಧವಾರ ನಡೆದಿದ್ದು, ಅರಮನೆ ಮೈದಾನದಲ್ಲಿ 2025ರ ಫೆಬ್ರವರಿಯಲ್ಲಿ ವಿವಾಹ ನಡೆಯಲಿದೆ. ವಿವಾಹದ ದಿನಾಂಕವನ್ನು ಸಹ ಈಗಾಗಲೇ ಎಸ್. ಆರ್. ವಿಶ್ವನಾಥ್ ಘೋಷಣೆ ಮಾಡಿದ್ದಾರೆ.
ರಾಜ್ಯಪಾಲರನ್ನು ಭೇಟಿಯಾದ ಡಿ. ಕೆ. ಶಿವಕುಮಾರ್: ಶಾಸಕ ಆರ್. ವಿಶ್ವನಾಥ್ ಪುತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪುತ್ರನ ನಿಶ್ಚಿತಾರ್ಥದಲ್ಲಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಭೇಟಿಯಾದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆಳವಣಿಗೆ ಬಳಿಕ ಮೊದಲ ಬಾರಿಗೆ ಈ ಭೇಟಿ ನಡೆದಿದೆ.
ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪತ್ನಿ ಉಷಾ ಜೊತೆ ನಿಶ್ಚಿತಾರ್ಥದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಜೊತೆಗೆ ಕುಳಿತು ಊಟ ಸವಿದರು.
ಕುರುಬ ಸಮಯದಾಯದ ಪ್ರಭಾವಿ ನಾಯಕ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು. 2024ರ ಚುನಾವಣೆ ಫಲಿತಾಂಶ ಘೋಷಣೆ ಬಳಿಕ, ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ದೆಹಲಿಯಲ್ಲಿ ಘೋಷಣೆ ಮಾಡಲಾಯಿತು.
ಬಳಿಕ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಅವರನ್ನು ತಮ್ಮ ಕಾರಿನಲ್ಲಿ ತಾವೇ ಕಾರು ಚಲಾಯಿಸಿಕೊಂಡು ಭೈರತಿ ಸುರೇಶ್ ಕರೆದುಕೊಂಡು ಬಂದಿದ್ದರು. ಎಂಎಲ್‌ಸಿ ಆಗುವ ಮೂಲಕ ರಾಜಕೀಯಕ್ಕೆ ಬಂದ ಅವರು 2018, 2023ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.












Click it and Unblock the Notifications