• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎಎ ಪರ ಮೆರವಣಿಗೆಯಲ್ಲಿ ಭಾಗವಹಿಸಿದವನಿಗೆ ಚಾಕು ಇರಿತ

|

ಬೆಂಗಳೂರು, ಡಿಸೆಂಬರ್ 22: ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ವರುಣ್ (31) ಎಂಬಾತನ ಮೇಲೆ ಚಾಕು ಇರಿದು ಕೊಲೆಗೆ ಯತ್ನಿಸಲಾಗಿದೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಇಂದು ಬೆಂಗಳೂರಿನ ಟೌನ್ ಹಾಲ್ ಎದುರು ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಮೆರವಣಿಗೆಯಲ್ಲಿ ಭಾಗವಹಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದಾಗ ಜೆ.ಸಿ ರೋಡ್ ನಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳಿಂದ ಕೊಲೆ ಯತ್ನ ಮಾಡಲಾಗಿದೆ.

ಖಾದರ್ ವಿರುದ್ದ ಪ್ರಕರಣ ದಾಖಲು, ರಾಜಕೀಯ ಮಾಡಲ್ಲ: ಸಿಎಂ

ನಡು ರಸ್ತೆಯಲ್ಲಿಯೇ ಏಕಾಏಕಿ ಚಾಕುವಿನಿಂದ ಚುಚ್ಚಿದ್ದಾರೆ. ಈ ಸಂದರ್ಭದಲ್ಲಿ ಸಹಾಯಕ್ಕೆ ಬಂದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಬೆಂಗಳೂರಲ್ಲಿ ಪೌರತ್ವದ ಪರವಾಗಿ ಮೆರವಣಿಗೆ

ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ತೇಜಸ್ವಿ ಸೂರ್ಯ ಅವರು, ಹಲ್ಲೆಗೊಳಗಾದ ವರುಣ್ ಅವರ ಆರೋಗ್ಯ ವಿಚಾರಿಸಿ, ಕೊಲೆಗೆ ಯತ್ನಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದರು.

English summary
Varun, 31, is Stabbing Knife Trying to murder after marching in support of the Citizenship Amendment Act. Murder has been attempted by two unknown persons.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X