ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಟಿಯು ಪರೀಕ್ಷೆ ಮುಂದೂಡಿಕೆ, ಹಲವೆಡೆ ಶಾಲೆ-ಕಾಲೇಜಿಗೆ ರಜೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 19: ಪೌರತ್ವ ಕಾಯ್ದೆ ವಿರುದ್ಧ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿರುವ ಕಾರಣ, ನಾಳೆ (ಡಿಸೆಂಬರ್ 20) ನಡೆಯಬೇಕಿದ್ದ ವಿಟಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಡಿಸೆಂಬರ್ 20 ರಂದು ವಿಟಿಯು ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಆದರೆ ಕೆಲವು ಜಿಲ್ಲೆಗಳಲ್ಲಿ ಪ್ರತಿಭಟನೆ ಕಾರಣದಿಂದ ನಿಷೇಧಾಜ್ಞೆ ಜಾರಿಯಾಗಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಟಿಯು ಹೇಳಿದೆ.

ಸುತ್ತೋಲೆ ಹೊರಡಿಸಿರುವ ವಿಟಿಯು ವಿಟಿಯು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಶೀಘ್ರದಲ್ಲಿಯೇ ಹೊಸ ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಹೇಳಿದೆ.

CAA Protest: VTU Exams Postponed

ಎಲ್ಲ ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲರು ಪರೀಕ್ಷೆ ಮುಂದೂಡಿರುವ ವಿಷಯವನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಕ್ರಮವನ್ನು ಕೈಗೊಳ್ಳಬೇಕು, ಸುತ್ತೋಲೆಯನ್ನು ನೊಟೀಸ್‌ ಗೆ ಹಾಕಬೇಕೆಂದು ವಿಟಿಯು ಸೂಚಿಸಿದೆ.

ಮಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿಯಲ್ಲಿ ಸಹ ಕೆಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂಟರ್ನೆಟ್‌ ಸೇವೆಯನ್ನು ಮುಂದಿನ ನಲವತ್ತೆಂಟು ಗಂಟೆಗಳ ವರೆಗೆ ಸ್ಥಗಿತಗೊಳಿಸಲಾಗಿದೆ.

English summary
Due to protest against citizenship amendment act VTU exams which are scheduled December 20th has been postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X