ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ: ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಡಿಸೆಂಬರ್ 10: ಧರ್ಮದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವುದು ಸಂವಿಧಾನ ವಿರೋಧಿ ನಡೆ. ಈ ಮಸೂದೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ತಿಕ್ಕುವ ದುರುದ್ದೇಶ ಇದೆಯೇ ಹೊರತು ವಲಸೆ ಸಮಸ್ಯೆಯನ್ನು ಪರಿಹರಿಸುವ ಸದುದ್ದೇಶ ಖಂಡಿತ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ, 2019 ಲೋಕಸಭೆಯಲ್ಲಿ ಸೋಮವಾರ ಮಂಡನೆಯಾಗಿ, ಅಂಗೀಕಾರವಾಗಿದೆ. ಗೃಹಸಚಿವ ಅಮಿತ್ ಶಾ, ಚಳಿಗಾಲದ ಅಧಿವೇಶನದ ವೇಳೆ ಪೌರತ್ವ ತಿದ್ದುಪಡಿ ಮಸೂದೆ (ಕ್ಯಾಬ್) ಮಂಡಿಸಿದರು. ಇದಕ್ಕೆ ವಿರೋಧಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ ಅನುಮೋದನೆ ದೊರಕಿತು ಈ ಕುರಿತು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಚಿನ ವಿರುದ್ಧ ಜಾತ್ಯತೀತ ರಾಷ್ಟ್ರ ಸಂಘಟಿತವಾಗಬೇಕು

ಬಿಜೆಪಿ ಸಂಚಿನ ವಿರುದ್ಧ ಜಾತ್ಯತೀತ ರಾಷ್ಟ್ರ ಸಂಘಟಿತವಾಗಬೇಕು

ದ್ವಿರಾಷ್ಟ್ರ ಸಿದ್ದಾಂತವನ್ನು ಪ್ರತಿಪಾದಿಸಿದ್ದ ಬಿಜೆಪಿಯ ಮೂಲಪುರುಷರ ಆಶಯವನ್ನು ಕೇಂದ್ರ ಸರ್ಕಾರ ಈಡೇರಿಸಲು ಹೊರಟಿರುವುದು ಸ್ಪಷ್ಟ. ದೇಶ ಒಡೆಯಲು ಹೊರಟಿರುವ ಬಿಜೆಪಿ ಸಂಚಿನ ವಿರುದ್ದ ಜಾತ್ಯತೀತ ಭಾರತ ಸಂಘಟಿತವಾಗಬೇಕು.

ಭಾರತದ ಮುಸ್ಲಿಮರು ಭಯಪಡಬೇಕಿಲ್ಲ: ಅಮಿತ್ ಶಾ ಭರವಸೆಭಾರತದ ಮುಸ್ಲಿಮರು ಭಯಪಡಬೇಕಿಲ್ಲ: ಅಮಿತ್ ಶಾ ಭರವಸೆ

ಹೆಚ್ಚುತ್ತಿರುವ ನಿರುದ್ಯೋಗ, ಏರುತ್ತಿರುವ ಸಾಮಗ್ರಿಗಳ ಬೆಲೆ

ಹೆಚ್ಚುತ್ತಿರುವ ನಿರುದ್ಯೋಗ, ಏರುತ್ತಿರುವ ಸಾಮಗ್ರಿಗಳ ಬೆಲೆ

ಹೆಚ್ಚುತ್ತಿರುವ ನಿರುದ್ಯೋಗ, ಮುಚ್ಚುತ್ತಿರುವ ಕೈಗಾರಿಕೆಗಳು, ಏರುತ್ತಿರುವ ಸಾಮಗ್ರಿಗಳ ಬೆಲೆ, ಕುಸಿಯುತ್ತಿರುವ ಜಿಡಿಪಿ, ದಿವಾಳಿಯಾಗುತ್ತಿರುವ ಬ್ಯಾಂಕುಗಳ ಸ್ಥಿತಿಯಿಂದ ಜನ‌ಮನ ಬೇರೆಡೆ ಸೆಳೆಯಲು ಬಿಜೆಪಿ ಪೌರತ್ವ ಮಸೂದೆಯ ಅಸ್ತ್ರ ಬಳಸಲು ಹೊರಟಿದೆ.

ವಿರೋಧ ಪಕ್ಷಗಳಿಂದ ಆತಂಕ ಸೃಷ್ಟಿ

ವಿರೋಧ ಪಕ್ಷಗಳಿಂದ ಆತಂಕ ಸೃಷ್ಟಿ

ಈ ಮಸೂದೆಗೂ ಭಾರತೀಯ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಕಾರಣಗಳಿಗೆ ಭಾರತಕ್ಕೆ ನಿರಾಶ್ರಿತರಾಗಿ ಬಂದ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡುವ ಉದ್ದೇಶವನ್ನಷ್ಟೇ ಇದು ಹೊಂದಿದೆ' ಎಂದು ಅಮಿತ್ ಶಾ ಹೇಳಿದರು.

ಧರ್ಮದ ಆಧಾರದಲ್ಲಿ ದೇಶ ಒಡೆಯಲು ಹೊರಟ ಬಿಜೆಪಿ

ಅವಸರದಿಂದ ಮಧ್ಯರಾತ್ರಿ ಲೋಕಸಭೆ ಅಂಗೀಕರಿಸಿದ 'ಪೌರತ್ವ (ತಿದ್ದುಪಡಿ) ಮಸೂದೆ' ಸಂವಿಧಾನದ ಮೂಲ‌ ಆಶಯಗಳಾದ ಸಮಾನತೆ ಮತ್ತು ಜಾತ್ಯತೀತತೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಈ ಮಸೂದೆ ಧರ್ಮದ ಆಧಾರದಲ್ಲಿ ದೇಶ ಒಡೆಯುವ ಬಿಜೆಪಿಯ ಗುಪ್ತ ಅಜೆಂಡಾದ ಭಾಗವಾಗಿದೆ.

English summary
Former Chief Minister Siddaramaiah Tweeted That CAB Is A Diversionary Tactics Of BJP To Shift The Attention Of Innocent Indians From Falling GDP,Increased Unemployment,Soaring prices,Closing Industries.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X