Breaking:ಲೋಕಾಯುಕ್ತ ತಿದ್ದುಪಡಿ ಕಾಯ್ದೆಗೆ ಸಚಿವ ಸಂಪುಟ ಅಸ್ತು
ಬೆಂಗಳೂರು ಸೆಪ್ಟಂಬರ್ 14: ಕರ್ನಾಟಕ ಸರ್ಕಾರವು ಹೊಸದಾಗಿ ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ ರದ್ದುಪಡಿಸಿದ ಹೈಕೋರ್ಟ್ ಆದೇಶದ ಬೆನ್ನಲ್ಲೆ ಲೋಕಾಯುಕ್ತಕ್ಕೆ ಬಲ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಲೋಕಾಯುಕ್ತ ಸಂಸ್ಥೆ ಬಲಪಡಿಸಲು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ಆಗಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾಗಿ ನೀಡಲು ಮತ್ತು ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೂ ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯ ಸರ್ಕಾರ ಹೈಕೋಟ್ ಆದೇಶ ಪ್ರಟಕವಾದ ನಂತರ ತೀರ್ಪು ಪಾಲಿಸುವ ನಿಟ್ಟಿನಲ್ಲಿ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರ ರದ್ದುಪಡಿಸಿದೆ. ಇದರ ಬೆನ್ನಲ್ಲೆ ಲೋಕಾಯುಕ್ತ ಪೊಲೀಸರಿಗೆ ಅಧಿಕಾರ ನೀಡಿದೆ. ಎಸಿಬಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕುರಿತು ಬಾಕಿ ಇದ್ದ ತನಿಖೆಗಳ ಪ್ರಕರಣಗಳನ್ನು ಲೋಕಾಯುಕ್ತ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.

ಕೆಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ
ಇದರ ಜತೆಗೆ ಬುಧವಾರ ಸಭಾಪತಿ ಚುನಾವಣೆ ನಡೆಸಲು ತೀರ್ಮಾನಿಸಿರುವ ಸರ್ಕಾರ, ವಿಧಾನ ಪರಿಷತ್‌ನಲ್ಲಿ ಸಭಾಪತಿ ಚುನಾವಣೆ ನಡೆಸುವ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದು ಶಿಪಾರಸು ಮಾಡಲಿದೆ.

ಇನ್ನು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆಗೆ 250 ಕೋಟಿ ರೂ. ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜಲ ಜಿವನ್ ಮಿಷನ್ ಅಡಿ ವಿವಿಧ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರಿನ ಒದಗಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೇ ರಾಜ್ಯ ಪ್ರವಾಸೋದ್ಯಮ ನೀತಿ 2020-25 ಕ್ಕೆ ಕೆಲವು ತಿದ್ದುಪಡಿ ತಂದು ಅದರ ಜಾರಿಗೆ ಅಂತಿಮ ಒಪ್ಪಿಗೆ ಸೂಚಿಸಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications