ಸಂಪುಟ ವಿಸ್ತರಣೆ ಆಗುತ್ತಾ? ಪರಮೇಶ್ವರ್, ಸಿದ್ದರಾಮಯ್ಯ ಜು.18ಕ್ಕೆ ದೆಹಲಿಗೆ
ಬೆಂಗಳೂರು, ಜು.15: ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ವಿಚಾರ ಸಂಬಂಧಿಸಿ ಜುಲೈ 18 ರಂದು ನಾನು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಸುಬ್ರಮಣಿ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದ ಬಗ್ಗೆ ಸಂಸದರ ಸಭೆ ಇದೆ. ಅದೆ ವೇಳೆ ನಾವು ಹೈಕಮಾಂಡ್ ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡುತ್ತೇವೆ. ಹಾಗೆ ನಿಗಮ ಮಂಡಳಿ ನೇಮಕದ ಬಗ್ಗೆಯೂ ಚರ್ಚೆ ಮಾಡಲಿದ್ದೇವೆ.

ಆ ನಂತರ ಎಲ್ಲವನ್ನೂ ಭರ್ತಿ ಮಾಡುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು. ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸಾಮೂಹಿಕ ನಾಯಕತ್ವದಡಿ ಚುನಾವಣೆ ಎದುರಿಸುತ್ತೇವೆ.ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಎಲ್ಲರೂ ಇದ್ದಾರೆ. ಸಿದ್ದರಾಮಯ್ಯನವರೇ ನಮ್ಮ ನಾಯಕರು, ಎಲ್ಲರೂ ಒಟ್ಟಾಗಿಯೇ ಚುನಾವಣೆ ಎದುರಿಸುತ್ತೇವೆ. ಇದರಲ್ಲಿ ಅವರು,ಇವರು ಎಂಬ ಗೊಂದಲ ಬೇಡ ಎಂದರು.












Click it and Unblock the Notifications