ದಾವೋಸ್ ಗೆ ಹೋಗುವ ಮುನ್ನವೇ ಸಂಪುಟ ವಿಸ್ತರಣೆ: ಯಡಿಯೂರಪ್ಪ
ಬೆಂಗಳೂರು, ಜನವರಿ 13: ವಿದೇಶ ಪ್ರವಾಸಕ್ಕೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದಾಗಿ ಯಡಿಯೂರಪ್ಪ ಹೇಳಿದ್ದಾರೆ.
ಸಿಂಗಪೂರ್‌ನ ದಾವೋಸ್ ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳುವ ಮುನ್ನವೇ ಸಂಪುಟ ವಿಸ್ತರಣೆ ಮಾಡುವುದಾಗಿ ಯಡಿಯೂರಪ್ಪ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ದಾವೋಸ್ ನಲ್ಲಿ ಜನವರಿ 21 ರಿಂದ 24 ರ ವರೆಗೆ ವಿಶ್ವ ಆರ್ಥಿಕ ಶೃಂಗಸಭೆ ನಡೆಯಲಿದೆ. ಈ ಶೃಂಗಸಭೆಗೆ ಎಲ್ಲ ಬಿಜೆಪಿ ಮುಖ್ಯಮಂತ್ರಿಗಳು ಕಡ್ಡಾಯವಾಗಿ ಹಾಜರಿರಬೇಕು ಎಂಬುದು ಮೋದಿ ಸೂಚನೆ ಆಗಿರುವ ಕಾರಣ ಯಡಿಯೂರಪ್ಪ ಹೋಗುತ್ತಿದ್ದಾರೆ. ಯಡಿಯೂರಪ್ಪ ಈ ಶೃಂಗಸಭೆಗೆ ಒಲ್ಲದ ಮನಸ್ಸಿನಿಂದ ಹೋಗುತ್ತದ್ದಾರೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ಮೇಲೆ ಒತ್ತಡ ಹೆಚ್ಚಾಗಿದ್ದು, ಸಂಪುಟ ವಿಸ್ತರಣೆ ತಡವಾಗುತ್ತಿರುವ ಬಗ್ಗೆ 'ಮಾಜಿ ಅನರ್ಹ' ಶಾಸಕರು ಮುನಿಸಿಕೊಂಡಿದ್ದಾರೆ. ಕೂಡಲೇ ಸಂಪುಟ ವಿಸ್ತರಣೆ ಮಾಡಿ ತಮಗೆ ಸಚಿವ ಸ್ಥಾನ ನೀಡಬೇಕು ಎಂಬುದು ಅವರ ಒತ್ತಾಯವಾಗಿದೆ.
ಮತ್ತೊಂದೆಡೆ ಮೂಲ ಬಿಜೆಪಿಗರೂ ಸಹ ತಮಗೆ ಸಚಿವ ಸ್ಥಾನ ಬೇಕೆಂದು ಪಟ್ಟು ಹಿಡಿದಿದ್ದು, ಹೈಕಮಾಂಡ್ ಮೊರೆ ಹೋಗಿದ್ದರು. ಇಬ್ಬರ ನಡುವೆ ಸಿಲುಕಿ ಯಡಿಯೂರಪ್ಪ ಹೈರಾಣಾಗಿದ್ದಾರೆ.
ಅಮಿತ್ ಶಾ ಅವರು ಜನವರಿ 18 ರಂದು ರಾಜ್ಯಕ್ಕೆ ಬರುತ್ತಿದ್ದು, ಅಂದೇ ಅವರೊಂದಿಗೆ ಮಾತನಾಡಿ ಸಚಿವ ಸ್ಥಾನ ಯಾರಿಗೆ ಕೊಡಬೇಕು-ಯಾರಿಗೆ ಬೇಡ ಎಂಬುದನ್ನು ಇತ್ಯರ್ಥ ಮಾಡಲಿದ್ದಾರೆ.












Click it and Unblock the Notifications