Bengaluru Second Airport: ಸಚಿವ ಸಂಪುಟ ಸಭೆಯಲ್ಲಿ ಎರಡನೇ ವಿಮಾನ ನಿಲ್ದಾಣದ ಸ್ಥಳ ಫೈನಲ್‌?

ಬೆಂಗಳೂರು, ಮಾರ್ಚ್‌ 28: ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ವೇಗ ಸಿಕ್ಕಿದೆ. ಹೊಸ ವಿಮಾನ ನಿಲ್ದಾಣಕ್ಕೆ ಸರ್ಕಾರ ಈಗಾಗಲೇ ಮೂರು ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನಲ್ಲೇ ಎರಡು ಸ್ಥಳ ಫೈನಲ್ ಆಗಿವೆ. ಇಲ್ಲಿನ ಚೂಡಹಳ್ಳಿ ಸಮೀಪ ಮತ್ತು ಸೋಮನಹಳ್ಳಿ ಬಳಿಯ ಪ್ರದೇಶ ಹಾಗೂ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ನೆಲಮಂಗಲ ಹತ್ತಿರ ನಿರ್ಮಿಸಬಹುದೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಎಲ್ಲಿ ನಿರ್ಮಾಣವಾಗಬೇಕು ಎಂಬ ಬಗ್ಗೆ ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಚರ್ಚೆಗಳು ನಡೆಯುತ್ತಿದೆ. ಅಲ್ಲದೇ ತುಮಕೂರು ಭಾಗದಲ್ಲಿ ಹೊಸ ವಿಮಾನ ನಿಲ್ದಾಣವಾಗಬೇಕು ಎಂದು ಹಲವು ಕಾಂಗ್ರೆಸ್‌ ನಾಯಕರು ಪಟ್ಟು ಹಿಡಿದಿದ್ದು, ಹಲವು ರಾಜಕೀಯ ನಾಯಕರ ನಡುವೆ ವಿಮಾನ ನಿಲ್ದಾಣ ನಿರ್ಮಾಣ ಸ್ಥಳದ ಕುರಿತು ತೀವ್ರ ಪೈಪೋಟಿ ನಡೆಯುತ್ತಿದ್ದು, ಈ ಕುರಿತು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ ಎಂದು ಹೇಳಲಾಗಿದ್ದು, ಇನ್ನೂ ಸ್ಥಳ ಅಂತಿಮವಾಗಿಲ್ಲ ಎಂದು ತಿಳಿದು ಬಂದಿದೆ.

Cabinet meeting discusses location of second airport

ಇನ್ನೂ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ 2024-25ನೇ ಸಾಲಿನ ಅಧ್ಯಕ್ಷರ ವಿವೇಚನಾ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್-156 ನರಿಬೋಳದಿಂದ ಗಂವ್ಹಾರ ವಯಾ ಬಿರಾಳ ಬಿ ಕಿ.ಮೀ 15.00 ರಿಂದ 36.00 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.23.60 ಕೋಟಿಗಳ ಅಂದಾಜಿಗೆ ಮತ್ತು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್ 171 ಕೆಲ್ಲೂರು ಬಿ ದಿಂದ ಜವಳಗಾ ಕ್ರಾಸ್ ವರೆಗೆ (ವಯಾ ನೆಲೋಗಿ, ಸೊನ್ನ, ಮುತ್ತುಖೋಡ, ಕರಭೋಸಗಾ) ಕಿ.ಮೀ 165 ರಿಂದ 193.55 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.24.10 ಕೋಟಿಗಳ ಅಂದಾಜಿನ ಎರಡು ಕಾಮಗಾರಿಗಳ ಒಟ್ಟಾರೆ ರೂ.47.70 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಕೊಡಗು ಜಿಲ್ಲೆ, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಶಾಲನಗರ ತಾಲ್ಲೂಕು ಮಸಗೋಡು - ಯಲಕನೂರು-ಕಣಿವೆ ರಸ್ತೆ ಸರಪಳಿ 2.00 ರಿಂದ 10.00 ಕಿ.ಮೀ ಹಾಗೂ 11.00 ರಿಂದ 12.10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ತಿಳಿಸಿದರು.

ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ "ಪ್ರಜಾಸೌಧ" ಕಟ್ಡಡ ಕಾಮಗಾರಿಗೆ ಈಗಾಗಲೇ ರೂ.9.75 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಒಳಗೊಂಡAತೆ, ಸದರಿ ಕಟ್ಟಡಕ್ಕೆ ಅವಶ್ಯವಿರುವ 2ನೇ ಹಂತದ ಕಾಮಗಾರಿಯ ರೂ.5.00 ಕೋಟಿಗಳ ಅಂದಾಜು ಮೊತ್ತ ಸೇರಿದಂತೆ ಒಟ್ಟಾರೆ ರೂ.14.75 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಹಾಗೂ ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಇವರ ವಿರುದ್ಧ ಶಿಸ್ತು ವ್ಯವಹರಣೆ ಹೂಡಲು ಹಾಗೂ ಜಿಲ್ಲಾ ಆಡಳಿತಕ್ಕೆ ಎಚ್ಚರಿಕೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ 3 ಎಕರೆ ಜಮೀನಿನಲ್ಲಿ ಹೊಸ ತಾಲ್ಲೂಕು "ಪ್ರಜಾಸೌಧ" ನಿರ್ಮಿಸಲು ಪ್ರಸ್ತಾಪಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನಲ್ಲಿ "ಪ್ರಜಾಸೌಧ" ಆನೇಕಲ್ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡಕ್ಕೆ ಅವಶ್ಯವಿರುವ ಎಲ್ಲಾ ಕಾಮಗಾರಿಗಳು (Fully Furnished ) ಒಳಗೊಂಡಂತೆ ಟೈಪ್-ಸಿ ಮಾದರಿಯಲ್ಲಿ ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ಆಡಳಿತ ಕೇಂದ್ರ "ಪ್ರಜಾಸೌಧ ಕಟ್ಟಡವನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನಲ್ಲಿ ತಾಲ್ಲೂಕು "ಪ್ರಜಾಸೌಧ" ಕಟ್ಟಡಕ್ಕೆ ಅವಶ್ಯವಿರುವ ಎಲ್ಲಾ ಕಾಮಗಾರಿಗಳು ನಿರ್ಮಾಣ ಕಾಮಗಾರಿಯನ್ನು ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+