ಸಚಿವ ಸಂಪುಟ ಸಭೆಯಲ್ಲೂ ಉತ್ತರ ಕರ್ನಾಟಕ ವಿಷಯ ಚರ್ಚೆ
ಬೆಂಗಳೂರು, ಆಗಸ್ಟ್ 02: ಮೈತ್ರಿ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಿತು. ಸಭೆಯಲ್ಲಿ ಬಹುತೇಕ ಎಲ್ಲ ಸಚಿವರು ಭಾಗವಹಿಸಿದ್ದರು.
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಈ ಸಭೆಯಲ್ಲಿ ಹಲವು ಇಲಾಖೆಗಳ ಬಗ್ಗೆ ಮಹತ್ವಪೂರ್ಣ ಚರ್ಚೆಗಳು ನಡೆದವು. ಜೊತೆಗೆ ಇತ್ತೀಚೆಗೆ ರಾಜ್ಯದ ಬೆಳವಣಿಗೆಗಳ ಬಗ್ಗೆಯೂ ಚರ್ಚೆಯಾಯಿತು.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ಕುಮಾರಸ್ವಾಮಿ ಅವರ ಹೇಳಿಕೆಗಳಿಂದಲೇ ಈ ವಿಷಯ ಉಲ್ಬಣವಾಯಿತು ಎಂದು ಕೆಲವು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪದ್ಮಪ್ರಶಸ್ತಿಗೆ ರಾಜ್ಯದಿಂದ ಯಾರ ಹೆಸರು ಶಿಫಾರಸ್ಸು ಮಾಡಬೇಕು ಎಂಬ ವಿಷಯ ಹಾಗೂ ಸ್ವಾತಂತ್ರ್ಯ ದಿನೋತ್ಸವ ಆಚರಣೆ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ.
ಸಭೆಯಲ್ಲಿ ರೈತ ಸಾಲಮನ್ನಾ ವಿಷಯ, ರೈತರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಜೊತೆಗೆ ಇನ್ನೂ ಹಲವು ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆದಿದೆ.












Click it and Unblock the Notifications