ದಾವೋಸ್ ಶೃಂಗಸಭೆಗೆ ಸಿದ್ದರಾಮಯ್ಯ ಗೈರು: ವಿಶೇಷ ಅಧಿವೇಶನ ಬಗ್ಗೆ ಆರ್.ಅಶೋಕ್ ತಕರಾರು
ಬೆಂಗಳೂರು: ಕೇಂದ್ರ ಸರ್ಕಾರ 'ಮನರೇಗಾ' ಯೋಜನೆ ಹೆಸರನ್ನು 'ವಿಬಿ ಜಿ ರಾಮ್ ಜಿ' ಬದಲಿಸಿತು. ಈ ಬಗ್ಗೆ ಚರ್ಚಿಸಲು ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಜನವರಿ 22 ರಿಂದ 31 ರವರೆಗೆ ಅಧಿವೇಶನ ನಡೆಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ನಿರ್ಧರಿಸಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿದರು.
ಬುಧವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಗೆ ಬದಲು ಡ್ರಗ್ ಮಾಫಿಯಾ, ಕೋಗಿಲು ಕ್ರಾಸ್‌ನ ಅಕ್ರಮ ನಿವಾಸಿಗಳು, ಕಾಸರಗೋಡಿನಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದವುಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ತಕರಾರಿದ್ದರೆ ಕೇಂದ್ರ ಸರ್ಕಾರದ ಬಳಿ ಹೋಗಿ ಚರ್ಚೆ ಮಾಡಬೇಕು ಎಂದು ಹೇಳಿದರು.

ದಾವೋಸ್ ಶೃಂಗಸಭೆಗೆ ಸಿದ್ದರಾಮಯ್ಯ ಗೈರು
ದಾವೋಸ್‌ನಲ್ಲಿ ವಿಶ್ವ ಶೃಂಗಸಭೆಗೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು ಹೋಗಿದ್ದರು. ಆದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಗೆ ಹೋಗದೆ ಸೋಮಾರಿತನ ತೋರಿದ್ದಾರೆ. ನೀತಿ ಆಯೋಗ, ಜಿಎಸ್‌ಟಿ ಸಭೆಗೆ ಚಕ್ಕರ್ ಹಾಕಿದ್ದಾರೆ. ಆರ್ಥಿಕತೆಯಲ್ಲಿ ಮೂರನೇ ಸ್ಥಾನದಲ್ಲಿರುವ ಜರ್ಮಿನಿಯ ಚಾನ್ಸಲರ್ ಬಂದಾಗ ಅವರನ್ನು ಬರಮಾಡಿಕೊಳ್ಳಲು ಹೋಗಿಲ್ಲ. ಈ ಮೂಲಕ ರಾಜ್ಯಕ್ಕೆ ಬರಬೇಕಾಗಿದ್ದ ಉದ್ಯಮಗಳು ತಪ್ಪಿಹೋಗಿದೆ. ಈ ಮಧ್ಯೆ ಅವರು ಕುರ್ಚಿ ಉಳಿಸಿಕೊಳ್ಳಲು ರಾಹುಲ್ ಗಾಂಧಿ ಬಳಿ ಹೋಗಿದ್ದಾರೆ ಎಂದು ಟೀಕಿಸಿದರು.
ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದು ಹಾಕಿದ್ದಾರೆ ಎಂಬ ಕಾರಣಕ್ಕೆ ವಿಶೇಷ ಅಧಿವೇಶನ ನಡೆಸಲಾಗುತ್ತಿದೆ. ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಕರೆ ಕೊಟ್ಟಿದ್ದರೂ ಅದನ್ನು ಯಾರೂ ಪಾಲಿಸಲಿಲ್ಲ. ಗೋವುಗಳ ಬಗ್ಗೆ ಅವರಿಗೆ ಭಕ್ತಿ ಭಾವನೆ ಇತ್ತು. ಗೋ ಹತ್ಯೆ ಕಾಯ್ದೆಯನ್ನು ನಾವು ತಂದಾಗ ಕಾಂಗ್ರೆಸ್ ವಿರೋಧ ಮಾಡಿತ್ತು. ಗಾಂಧೀಜಿ ಭಗವದ್ಗೀತೆ ಬಗ್ಗೆ ಹೇಳಿದ್ದರೆ, ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರಿಸಲು ಕಾಂಗ್ರೆಸ್ ವಿರೋಧ ಮಾಡಿದೆ.
ಗಾಂಧೀಜಿ ಪಾನ ನಿಷೇಧಕ್ಕಾಗಿ ಹೋರಾಡಿದ್ದರೆ, ಕಾಂಗ್ರೆಸ್ ಸರ್ಕಾರ ರಸ್ತೆ ರಸ್ತೆಯಲ್ಲೂ ಮದ್ಯದಂಗಡಿಗಳನ್ನು ಆರಂಭಿಸಲು ಅವಕಾಶ ನೀಡಿದೆ. 2 ಕೋಟಿ ರೂ. ನೀಡಿದವರಿಗೆ ಬಾರ್ ಲೈಸೆನ್ಸ್ ನೀಡುತ್ತಾರೆ. ಗಾಂಧೀಜಿಯ ಯಾವುದೇ ಆಶಯ ಪಾಲಿಸದ ಇವರು ಈಗ ಗಾಂಧೀಜಿ ಬಗ್ಗೆ ಮಾತನಾಡುತ್ತಾರೆ. ವಿಕಸಿತ ಭಾರತ ಎಂಬ ಹೆಸರಿನ ಬಗ್ಗೆ ಏಕೆ ಕೋಪ? ಎಂದು ಪ್ರಶ್ನಿಸಿದರು.
ರಾಜ್ಯದ ಸಿಎಂ ಸಿದ್ದರಾಮಯ್ಯ ಈಗ ಪಾಪರ್ ಸಿದ್ದರಾಮಯ್ಯ ಆಗಿದ್ದಾರೆ. ಎಲ್ಲ ಮುಖ್ಯಮಂತ್ರಿಗಳನ್ನು ಸೇರಿಸಿದರೆ ಅದಕ್ಕೂ ಹೆಚ್ಚು 4 ಲಕ್ಷ ಕೋಟಿ ರೂ.ಗೂ ಅಧಿಕ ಸಾಲ ಮಾಡಿದ್ದಾರೆ. ಇಷ್ಟೆಲ್ಲ ಸಮಸ್ಯೆ ಇರುವಾಗ ಅಧಿವೇಶನ ಮಾಡಿ ಜನರ ಹಣ ಪೋಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಯೋಜನೆಗೆ ಮೋದಿ ಹೆಸರು, ಕುಟುಂಬದವರ ಹೆಸರು ನೀಡಿಲ್ಲ
ಕಾಂಗ್ರೆಸ್ ರಾಜ್ಯಕ್ಕೆ ಜಾಲಿ ಮುಳ್ಳು ಇದ್ದಂತೆ. ಯೋಜನೆಯಲ್ಲಿ ಸುಧಾರಣೆ ಮಾಡಬೇಕೆಂದರೆ ಸಲಹೆ ನೀಡಲಿ. ಇಲ್ಲಿ ನರೇಂದ್ರ ಮೋದಿ ಅಥವಾ ವಾಜಪೇಯಿ ಎಂಬ ಹೆಸರು ನೀಡಿಲ್ಲ. ಇಂದಿರಾಗಾಂಧಿ, ರಾಜೀವ್ ಗಾಂಧಿ ಸೇರಿದಂತೆ ಅವರ ಕುಟುಂಬದ ಹೆಸರಿನಲ್ಲಿ 240 ಸಂಸ್ಥೆ, ಯೋಜನೆಗಳಿವೆ. ಬಿಜೆಪಿ ಇಷ್ಟು ವರ್ಷ ಆಡಳಿತ ನಡೆಸಿದ್ದರೂ ಈ ರೀತಿ ಕುಟುಂಬದವರ ಹೆಸರು ನೀಡಿಲ್ಲ. ಕೇಂದ್ರ ಸರ್ಕಾರ 17,000 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರ 10,000 ಕೋಟಿ ರೂ. ನೀಡಬೇಕಿದೆ. ಕೇಂದ್ರದ ಪಾಲಿನಲ್ಲಿ ಕಡಿತವಾಗಿಲ್ಲ. ಆದರೆ ಇನ್ನಷ್ಟು ಹೆಚ್ಚು ಅನುದಾನ ನೀಡುವಂತೆ ಬದಲಾವಣೆ ತರಲಾಗಿದೆ. 125 ದಿನಗಳಿಗೆ ಏರಿಕೆ, ಬಯೋಮೆಟ್ರಿಕ್, ಕೃಷಿ ಕಾರ್ಯಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಯೋಜನೆಯ ವೆಚ್ಚವನ್ನು ಶೇ.6 ರಿಂದ ಶೇ.9 ಕ್ಕೆ ಹೆಚ್ಚಿಸಲಾಗಿದೆ ಎಂದರು.
ಸರ್ಕಾರದ ಒತ್ತಡದಿಂದಾಗಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಫ್ಲೆಕ್ಸ್ ತೆಗೆದು ಹಾಕಿದ್ದಕ್ಕೆ, ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಕರೆ ಮಾಡಿ ಬೆಂಕಿ ಹಾಕುತ್ತೇನೆಂದು ಪ್ರಾಣ ಬೆದರಿಕೆ ಹಾಕಿದ್ದಾನೆ. ಆತ ಅಶ್ಲೀಲವಾಗಿ ನಿಂದಿಸಿದ್ದಾನೆ. ಹೆಣ್ಣುಮಗಳ ಬಗ್ಗೆ ನೀಚವಾಗಿ ಮಾತನಾಡಿದ್ದಕ್ಕೆ ಆತನನ್ನು ಯಾರೂ ಖಂಡಿಸಿಲ್ಲ ಎಂದರು.
ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಬಾಂಗ್ಲಾದೇಶೀಯರು ಇದ್ದಾರೆ ಎಂದು ಪತ್ತೆಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಮಾತ್ರ ಕಣ್ಣು ಕಾಣುತ್ತಿಲ್ಲ. ಅವರನ್ನು ಗಡೀಪಾರು ಮಾಡುವ ಬದಲು ಕರುಣೆ ತೋರುತ್ತಿದ್ದಾರೆ. ಇದಕ್ಕಾಗಿ ಟಾಸ್ಕ್ ಫೋರ್ಸ್ ರಚಿಸಿ ಅವರನ್ನು ಗಡಿಪಾರು ಮಾಡಬೇಕು. ಈ ಕುರಿತು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications