ಗಾಂಧಿನಗರದಲ್ಲಿ ದಿನೇಶ್ ಗುಂಡೂರಾವ್ ಪರ ಮಾರ್ವಾಡಿಗಳ ಪ್ರಚಾರ: 25 ವರ್ಷಗಳ ಬಳಿಕ ಕಾಂಗ್ರೆಸ್ ಪರ ರಸ್ತೆಗಿಳಿದ ವ್ಯಾಪಾರಿಗಳು
ಬೆಂಗಳೂರು, ಏಪ್ರಿಲ್ 28: ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರ ಪರ ಮಾರ್ವಾಡಿ ಸಮುದಾಯದ ಜನರು ಪ್ರಚಾರ ಕೈಗೊಂಡಿದ್ದಾರೆ.
ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ದಿನೇಶ್ ಗುಂಡುರಾವ್ ಅವರು ನಾನು ಕಳೆದ 25 ವರ್ಷಗಳ ಶಾಸಕನಾಗಿದ್ದಾಗ ಮೊದಲ ಬಾರಿಗೆ ನನ್ನ ಕ್ಷೇತ್ರದ ಮಾರ್ವಾಡಿ ಸಮುದಾಯ ನನ್ನ ಮತ್ತು ಕಾಂಗ್ರೆಸ್ ಬೆಂಬಲಕ್ಕೆ ಬೀದಿಗಿಳಿದಿದೆ. ಉತ್ತರ ಭಾರತದ ಸಮುದಾಯಗಳ ಮತಗಳು ನಮ್ಮತ್ತ ವಾಲುತ್ತಿವೆ. ಚಿಕ್ಕಪೇಟೆಯಲ್ಲಿ ಡಿಜಿಆರ್ ಮಾರ್ವಾಡಿ ಬ್ರಿಗೇಡ್ ವತಿಯಿಂದ ಬೃಹತ್ ಮೆರವಣಿಗೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಭಾರತದಿಂದ ಹಲವಾರು ನಾಯಕರು ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಬಂದಿದ್ದಾರೆ ಎನ್ನಲಾಗುತ್ತಿದೆ. ಆಯಾ ಜನಾಂಗ ನಾಯಕರಿಂದ ಬಿಜೆಪಿ ನಾಯಕರು ಮತಗಳನ್ನು ಸೆಳೆಯಲು ಪ್ರಚಾರ ಮಾಡುತ್ತಿದ್ದಾರೆ. ಸಮಾನ್ಯವಾಗಿ ಉತ್ತರ ಭಾರತದಿಂದ ಬೆಂಗಳೂರಿಗೆ ಬಂದಿರುವ ಸಮುದಾಯಗಳು ಬಿಜೆಪಿಯನ್ನು ಬೆಂಬಲಿಸುತ್ತವೆ ಎನ್ನಲಾಗುತ್ತಿತ್ತು. ಆದರೆ ಈಗ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿರುವುದು ಕಾಂಗ್ರೆಸ್ ಗೆಲುವಿನ ಸೂಚಕವೇ ಎಂದು ಭಾವಿಸುವಂತಿದೆ.
For the first time in my last 25 years of being MLA the Marwadi community of my constituency came out in the streets in support of me and @INCIndia.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 28, 2023
The vote of North Indian communities is shifting towards us.
A massive procession organised by DGR Marwari Brigade in Chikpete. pic.twitter.com/Luu7iQxC4F
ಬೆಂಗಳೂರಿನ ಹೃದಯಭಾಗದಲ್ಲಿರುವ ಕ್ಷೇತ್ರ ಗಾಂಧಿನಗರ. ಇಲ್ಲಿ ಮೊದಲಿನಿಂದಲೂ ಕಾಂಗ್ರೆಸ್ ಪರ ಇಲೆ ಇದ್ದು ದಿನೇಶ್ ಗುಂಡುರಾವ್ ಅವರು ಪ್ರಬಲ ನಾಯಕರಾಗಿದ್ದಾರೆ. ಇಲ್ಲಿ ಕನ್ನಡಿಗರಿಗಿಂತ ಅನ್ಯ ಭಾಷೆ ಜನರೇ ಅಧಿಕವಾಗಿದ್ದಾರೆ. ಉದಾಹರಣೆಗೆ ತಮಿಳರು, ಮಾರ್ವಾಡಿಗಳು. ಹೀಗಾಗಿ ಅವರ ಮನಗೆಲ್ಲಲು ದಿನೇಶ್ ಗುಂಡುರಾವ್ ಇಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿ ಕಾಂಗ್ರೆಸ್‌ನಿಂದ ದಿನೇಶ್ ಗುಂಡುರಾವ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಅದಲ್ಲದೆ ಬಿಜೆಪಿಯಿಂದ ಸಪ್ತಗಿರಿಗೌಡ, ನಾರಾಯಣಸ್ವಾಮಿ ಕಣಕ್ಕಿಳಿದಿದ್ದಾರೆ. ಇದಲ್ಲದೆ ದಿನೇಶ್ ಗುಂಡುರಾವ್ ಅವರಿಗೆ ಸ್ಪರ್ಧಿಯಾಘಿ ಬಂಡಾಯ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾರ್ವಾಡಿ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ.

ಬೆಂಗಳೂರು ನಗರದ ಹೃದಯ ಭಾಗದ ಗಾಂಧಿ ನಗರ ಕ್ಷೇತ್ರ ವಾಣಿಜ್ಯ, ಸಿನಿಮಾ ಚಟುವಟಿಕೆಗಳ ಮೂಲಕ ಪ್ರಸಿದ್ಧಿ. ನಗರದ ಕೆ. ಎಸ್. ಆರ್. ರೈಲು ನಿಲ್ದಾಣ, ಕೆಎಸ್ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ನಿಲ್ದಾಣಗಳು ಈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೇ ಇವೆ. 2008, 2013 ಮತ್ತು 2018ರಲ್ಲಿ ಸತತವಾಗಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಮಾಡಿದ್ದಾರೆ.
2008ರಲ್ಲಿ 41,188, 2013ರ ಚುನಾವಣೆಯಲ್ಲಿ 54,968 ಮತ್ತು 2018ರ ಚುನಾವಣೆಯಲ್ಲಿ 47,354 ಮತಗಳನ್ನು ಪಡೆದು ಅವರು ಜಯಗಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಸಹ ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ದಿನೇಶ್ ಗುಂಡೂರಾವ್‌ಗೆ ಟಿಕೆಟ್ ನೀಡಿದೆ. ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಕೃಷ್ಣಯ್ಯ ಶೆಟ್ಟಿಗೆ ಅವರು ಪ್ರಬಲ ಎದುರಾಳಿಯಾಗಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications