ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದ 224 ಕ್ಷೇತ್ರಗಳಿಗೂ ಒಂದೇ ಬಾರಿ ಚುನಾವಣೆ ಸಾಧ್ಯತೆ

By Manjunatha
|
Google Oneindia Kannada News

ಬೆಂಗಳೂರು, ಜನವರಿ 12: ರಾಜ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜ್ಯ ಎಲ್ಲಾ ಕ್ಷೇತ್ರಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸುವ ಸಾಮರ್ಥ್ಯ ಆಯೋಗಕ್ಕೆ ಇದೆ ಎಂದು ಹೇಳಿದ್ದು, ರಾಜ್ಯದ 224 ಕ್ಷೇತ್ರಗಳಿಗೂ ಒಂದೇ ಬಾರಿ ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ನಗರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಂದೇ ಹಂತದಲ್ಲಿ ಚುನಾವಣೆ ನಡೆದರೂ ಯಾವುದೇ ಸಮಸ್ಯೆ ಆಗದಂತೆ ನಿರ್ವಹಿಸುವ ಸಾಮರ್ಥ್ಯ ಇದೆ, ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದ್ದು, ಶೀಘ್ರವಾಗಿ ನಿರ್ಧಾರ ಹೊರಬೀಳುತ್ತದೆ ಎಂದಿದ್ದಾರೆ.

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಕೊನೆ ದಿನಾಂಕವನ್ನು ಜನವರಿ 22 ರವರೆಗೆ ವಿಸ್ತರಿಸಿರುವುದಾಗಿ ಇದೇ ಸಂದರ್ಭದಲ್ಲಿ ಹೇಳಿದ ಅವರು, ಮತದಾನ ಇವಿಎಂ ಯಂತ್ರದ ಮೂಲಕವೇ ಆಗಲಿದೆ ಎಂದು ಸ್ಪಷ್ಟಪಡಿಸಿದರು.

can conduct election in one stage: Election officer Sanjeev Kumar

ರಾಜ್ಯದ ಒಟ್ಟು 56 ಬೂತ್‌ಗಳಿದ್ದು, ಪ್ರತಿ ಬೂತ್‌ಗೆ 4 ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಡಿಸಿ, ಆರ್‌ಓ, ಎಆರ್ಓ ಅಧಿಕಾರಿಗಳು ಜಿಲ್ಲಾಮಟ್ಟದ ಬೂತ್‌ಗಳಿಗೆ ತೆರಳಿ ಚುನಾವಣಾ ಕಾರ್ಯ ನಿರ್ವಹಿಸುತ್ತಾರೆ ಎಂದು ಅವರು ಹೇಳಿದರು.

English summary
Election chief officer Sanjeev Kumar said 'we have strength to conduct election all 224 constituency at single stage. But the dissension is left to central election commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X