ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೆರೆ ಪರಿಹಾರದ ಹಣವನ್ನು ಪಾಕಿಸ್ತಾನದ ಬಳಿ ಕೇಳಬೇಕೇ?: ಎಚ್ಡಿಕೆ ಪ್ರಶ್ನೆ

|
Google Oneindia Kannada News

ಬೆಂಗಳೂರು, ಜನವರಿ 3: ಪೌರತ್ವ ತಿದ್ದುಪಡಿ ಕಾಯ್ದೆ ವಿಷಯದಲ್ಲಿ ಪದೇ ಪದೇ ಪಾಕಿಸ್ತಾನದ ಜಪ ಮಾಡುವ ಮೋದಿ ಅವರೇ ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ಪ್ರಧಾನಿಯೋ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೋದಿ ಕರ್ನಾಟಕಕ್ಕೆ ಬಂದಾಗಿನಿಂದ ಪ್ರಶ್ನೆಗಳ ಸುರಿಮಳೆ ಗೈದಿರುವ ಕುಮಾರಸ್ವಾಮಿ ಶುಕ್ರವಾರ ಕೂಡ ತಮ್ಮ ಸರಣಿ ಟ್ವೀಟ್ ಮುಂದುವರೆಸಿದ್ದಾರೆ.

ಕೇಂದ್ರದ ಚಂದಮಾಮನನ್ನು ತೋರಿಸಿ'ಅನರ್ಹ ಸರ್ಕಾರ' ರಚಿಸಿದ್ದಾರೆ:ಎಚ್‌ಡಿಕೆಕೇಂದ್ರದ ಚಂದಮಾಮನನ್ನು ತೋರಿಸಿ'ಅನರ್ಹ ಸರ್ಕಾರ' ರಚಿಸಿದ್ದಾರೆ:ಎಚ್‌ಡಿಕೆ

ಮಾಡಿರುವ ಪಾಕಿಸ್ತಾನದ ವಲಸಿಗರು, ನಿರಾಶ್ರಿತರು ನಿಮಗೆ ವೋಟು ಕೊಟ್ಟರೋ? ಭಾರತದ ಪ್ರಜೆಗಳು ವೋಟು ಕೊಟ್ಟರೋ? ಭಾರತೀಯ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ, ಪಾಕಿಸ್ತಾನದ ಸಂವಿಧಾನದಿಂದ ಪ್ರಧಾನಿ ಹುದ್ದೆ ಸಿಕ್ಕಿತೋ? ಎಂದು ಪ್ರಶ್ನಿಸಿದ್ದಾರೆ.

 ರಾಜ್ಯಗಳ ಅಭಿವೃದ್ಧಿಗೆ ಆಧ್ಯತೆ ನೀಡಿ

ರಾಜ್ಯಗಳ ಅಭಿವೃದ್ಧಿಗೆ ಆಧ್ಯತೆ ನೀಡಿ

ಭಾರತೀಯರ ವೋಟು ಪಡೆದು ಸಂವಿಧಾನದ ಪ್ರಕಾರ ಪ್ರಧಾನಿಯಾದ ನಿಮಗೆ ಇಲ್ಲಿನ ರಾಜ್ಯಗಳ ಅಭಿವೃದ್ಧಿ ಆದ್ಯತೆಯೋ ಪಾಕಿಸ್ತಾನದವರಿಗೆ ಪೌರತ್ವ ನೀಡುವುದು ಆದ್ಯತೆಯೋ? ಒಕ್ಕೂಟ ವ್ಯವಸ್ಥೆಯ ಭಾಗವಾಗಿರುವ ಕರ್ನಾಟಕಕ್ಕೆ ಕೊಡಬೇಕಾದ ಅನುದಾನ ಕೊಡಲಾಗದಿದ್ದರೂ ಪಾಕಿಸ್ತಾನದ ಮೇಲೆ ನಿಮಗೆ ಪ್ರೀತಿ ಉಕ್ಕುತ್ತಿರುವುದೇಕೆ? ಅಲ್ಲಿನವರ ಮೇಲೆ ಯಾಕಿಷ್ಟು ಮಮಕಾರ? ಎಂದು ಖಾರವಾಗಿಯೇ ನುಡಿದಿದ್ದಾರೆ.

 25 ಸಂಸದರನ್ನು ಕೊಟ್ಟ ಕರ್ನಾಟಕವನ್ನೇ ಕೇಳೋರಿಲ್ಲ

25 ಸಂಸದರನ್ನು ಕೊಟ್ಟ ಕರ್ನಾಟಕವನ್ನೇ ಕೇಳೋರಿಲ್ಲ

25 ಸಂಸದರನ್ನು ಕೊಟ್ಟ ಕರ್ನಾಟಕದಲ್ಲಿ ಉಂಟಾದ ನೆರೆಯಿಂದ 35 ಸಾವಿರ ಕೋಟಿ ನಷ್ಟವಾದರೂ ಕೊಟ್ಟಿದ್ದು ಚಿಕ್ಕಾಸು,ನರೇಗಾ ಬಾಕಿ ಕೊಟ್ಟಿಲ್ಲ,ತೆರಿಗೆಯಲ್ಲಿ ರಾಜ್ಯದ ಪಾಲು ಕೊಟ್ಟಿಲ್ಲ,ಬರ ಪರಿಹಾರವಿಲ್ಲ.ಇವುಗಳ ಬಗ್ಗೆ ಮಾತನಾಡಲಾಗದ ನೀವು ಮಾತಾಡುವುದು ಪಾಕಿಸ್ತಾನದ ಬಗ್ಗೆ. ಮೊದಲು ಪಾಕಿಸ್ತಾನದ ಜಪ ನಿಲ್ಲಿಸಿ ಕರ್ನಾಟಕಕ್ಕೆ ಬರಬೇಕಾದ ಹಣ ಕೊಡಿ.

 ನೆರೆ ಪರಿಹಾರವನ್ನು ಪಾಕಿಸ್ತಾನದ ಬಳಿ ಕೇಳಬೇಕೇ?

ನೆರೆ ಪರಿಹಾರವನ್ನು ಪಾಕಿಸ್ತಾನದ ಬಳಿ ಕೇಳಬೇಕೇ?

ಕೇಂದ್ರ ಕಟ್ಟಿಸಿಕೊಂಡ ತೆರಿಗೆಯ ಕರ್ನಾಟಕದ ಪಾಲನ್ನು ಹಾಗೂ ನೆರೆ ಪರಿಹಾರದ ಹಣವನ್ನು ಯಡಿಯೂರಪ್ಪ ಪಾಕಿಸ್ತಾನವನ್ನು ಕೇಳಬೇಕೋ ಅಥವಾ ಭಾರತೀಯ ಮತದಾರರಿಂದ ಆಯ್ಕೆಯಾದ ನಿಮ್ಮನ್ನು ಕೇಳಬೇಕೋ?

 ವಿದ್ಯಾರ್ಥಿಗಳ ಮುಂದೆ ಪಾಕಿಸ್ತಾನದ ಜಪವೇಕೆ?

ವಿದ್ಯಾರ್ಥಿಗಳ ಮುಂದೆ ಪಾಕಿಸ್ತಾನದ ಜಪವೇಕೆ?

ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ನಮಿಸಿ, ವಿದ್ಯಾರ್ಥಿಗಳ ಎದುರು ಭಾಷಣ ಮಾಡಿದ ನೀವು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಏನಾದರೂ ಸಲಹೆ ಕೊಟ್ಟಿರಾ? ಇಲ್ಲ... ಅದು ಬಿಟ್ಟು ಪಾಕಿಸ್ತಾನದ ಜಪ ಮಾಡುತ್ತೀರಿ. ಇದು ನಿಮ್ಮ ರಾಜಕೀಯ, ಅಧಿಕಾರದ ಆಸೆಯನ್ನು ಸಾಬೀತು ಮಾಡುತ್ತದೆ.

English summary
Former Chief Minister HD Kumaraswamy Asks PM Narendra Modi That Can We Beg Pakistan For Flood Relief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X