ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಎಸ್‌ಸಿ ಪ್ರತಿಭಟನೆ : ಸಿಎಂ ಮನೆ ಮುಂದೆ ಹೈಡ್ರಾಮ

|
Google Oneindia Kannada News

ಬೆಂಗಳೂರು, ಆ.9 : ಮುಖ್ಯಮಂತ್ರಿ ಗೃಹ ಕಚೇರಿ ಮುಂಭಾಗದಲ್ಲಿ ಕೆಪಿಎಸ್ ಸಿ ಪರ ವಿರೋಧ ಪ್ರತಿಭಟನೆಯಿಂದಾಗಿ ಹೈಡ್ರಾಮ ನಡೆಯುತ್ತಿದೆ. ಕೆಪಿಎಸ್ಸಿ ಕರ್ಮಕಾಂಡ ಬಯಲು ಮಾಡಿದ ಡಾ.ಮೈತ್ರಿ ನೇಮಕಾತಿ ಆದೇಶ ರದ್ದುಪಡಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಲು ಆಗಮಿಸಿದ್ದಾರೆ. ಇದರ ನಡುವೆ ನೊಂದ ಅಭ್ಯರ್ಥಿಗಳು ಅಲ್ಲಿಗೆ ಆಗಮಿಸಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಡಾ.ಮೈತ್ರಿ ಅವರು 4 ಗಂಟೆ ಸುಮಾರಿಗೆ ಗೃಹ ಕಚೇರಿ ಕೃಷ್ಣಾ ಬಳಿಗೆ ಬಂದಿದ್ದಾರೆ. ಇದೇ ಸಮಯಕ್ಕೆ ನೊಂದ ಅಭ್ಯರ್ಥಿಗಳು ಅಲ್ಲಿಗೆ ಆಗಮಿಸಿದ್ದು ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮುಖ್ಯಮಂತ್ರಿಗಳ ಭೇಟಿಗೆ ನೊಂದ ಅಭ್ಯರ್ಥಿಗಳಿಗೆ ಅವಕಾಶ ನೀಡದಿರುವುದಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಮನೆಗೆ ನುಗ್ಗಲು ಯತ್ನಿಸಿದ ಸುಷ್ಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹಿಂದಿನ ಸುದ್ದಿ : ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 2011ರಲ್ಲಿ ನಡೆದ ಸಂದರ್ಶನ ಪ್ರಕ್ರಿಯೆಯಲ್ಲಿ ಆಯ್ಕೆಗೊಂಡಿದ್ದ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳನ್ನು ರದ್ದು ಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ನೊಂದ ಅಭ್ಯರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹದ ಮಾಹಿತಿಗಳು ಇಲ್ಲಿವೆ.

ಸಮಯ 12 ಗಂಟೆ : ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ ಗಳ ನೇಮಕಾತಿ ರದ್ದುಗೊಳಿಸಿದ ಸರ್ಕಾರದ ಕ್ರಮ ಸರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಸರ್ಕಾರದ ನಿರ್ಧಾರ ವಿರೋಧಿಸುತ್ತಿದ್ದಾರೆ. ಹಾಗಾದರೆ ಅವರು ಭ್ರಷ್ಟಾಚಾರದ ಪರವಾಗಿ ಇದ್ದಾರೆಯೇ? ಎಂದು ಶನಿವಾರ ಸಿಎಂ ಪ್ರಶ್ನಿಸಿದ್ದಾರೆ.

siddamaiah

ಅಡ್ವೊಕೇಟ್ ಜನರಲ್ ಸಲಹೆ ಪಡೆದು, ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹಿಸಿದ ನಂತರ ಸರ್ಕಾರ ನೇಮಕಾತಿ ಆದೇಶ ರದ್ದುಮಾಡುವ ನಿರ್ಧಾರವನ್ನು ಕೈಗೊಂಡಿದೆ. ಭ್ರಷ್ಟಾಚಾರ ಸಾಬೀತಾದ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಭ್ರಷ್ಟಾಚಾರ ಸಾಬೀತಾದರೂ ಸುಮ್ಮನಿರಬೇಕಿತ್ತೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಸಮಯ 11 ಗಂಟೆ : ಬೆಂಗಳೂರು ಫ್ರೀಡಂ ಪಾರ್ಕ್‌ ಕಳೆದ 20 ದಿನಗಳಿಂದ ಅಭ್ಯರ್ಥಿಗಳು ನೇಮಕಾತಿ ಆದೇಶ ರದ್ದುಗೊಳಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಶನಿವಾರ ಧರಣಿ ನಡೆಯುವ ಸ್ಥಳದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದ ದೇವರಾಜ್‌ ಅವರಿಗೆ ಸ್ಥಳದಲ್ಲಿಯೇ ಪ್ರಾಥಮಿಕ ಚಿಕಿತ್ಸೆಯನ್ನು ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಕೆ.ಸಿ. ಜನರಲ್‌ ಆಸ್ಪತ್ರೆಗೆ ದಾಖಲುಮಾಡಲಾಗಿದೆ. [ನೊಂದ ಅಭ್ಯರ್ಥಿಗಳ ಬೆಂಬಲಕ್ಕೆ ಎಚ್ಡಿಕೆ]

KPSC

ಶುಕ್ರವಾರ ಸಂಜೆ ಸುರಿದ ಮಳೆಯನ್ನು ಲೆಕ್ಕಿಸದೆ ಅಭ್ಯರ್ಥಿಗಳು ಪ್ರತಿಭಟನೆ ಮುಂದುವರೆಸಿದ್ದು, ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿರುವ ನಿರ್ಧಾರವನ್ನು ವಾಪಸ್‌ ಪಡೆಯಬೇಕು ಹಾಗೂ ಸ್ಥಳಕ್ಕೆ ಮುಖ್ಯಮಂತ್ರಿ ಖುದ್ದು ಭೇಟಿ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. [ಕೆಪಿಎಸ್ಸಿ ನೇಮಕಾತಿ ರದ್ದು]

English summary
The Karnataka government's decision to cancel the 2011 KPSC notification over appointment of gazetted probationary officers (KAS) officers has received a mixed response. All the 362 affected candidates who were holding an open-ended protest at Freedom Park. here is latest updates.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X