• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಆರ್‌ಆರ್‌ನಗರ: ಮುನಿರತ್ನಗೆ ಶಾಕ್ ಕೊಟ್ಟ ಬಿಜೆಪಿ ಕೋರ್ ಕಮಿಟಿ ಸಭೆ ತೀರ್ಮಾನ!

|

ಬೆಂಗಳೂರು, ಸೆ. 01: ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಬೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ.

ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆ.ಜಿ. ಹಳ್ಳಿಗಳಲ್ಲಿ ನಡೆದ ಗಲಭೆ ಕುರಿತು ಸರ್ಕಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆ; ಮೌನ ಮುರಿದ ಹನುಮಂತರಾಯಪ್ಪ

ಈ ಮಧ್ಯೆ ಬಹಳಷ್ಟು ಕುತೂಹಲ ಮೂಡಿಸಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕುರಿತು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮುನಿರತ್ನ ಅವರಿಗೆ ಬಿಜೆಪಿ ಶಾಕ್ ಕೊಟ್ಟಂತಾಗಿದೆ.

ಕಗ್ಗಂಟಾದ ಆರ್‌ಆರ್‌ ನಗರ ಚುನಾವಣೆ

ಕಗ್ಗಂಟಾದ ಆರ್‌ಆರ್‌ ನಗರ ಚುನಾವಣೆ

ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಟಿಕೇಟ್ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ. ಮಾಜಿ ಶಾಸಕ ಮುನಿರತ್ನ ಅವರಿಗೆ ಕೊಟ್ಟ ಮಾತಿನಂತೆ ‌ಟಿಕೇಟ್ ಕೊಡಬೇಕು ಎಂದ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಆಗ್ರಹಿಸಿದ್ದಾರೆ.

ಸರ್ಕಾರ ರಚಿಸಲು ಬಹುಮತಕ್ಕೆ ಮುನಿರತ್ನ ಅವರ ಬೆಂಬಲ ಪಡೆದಿದ್ದೇವೆ. ಅವರಿಗೆ ಟಿಕೇಟ್ ಕೊಡಲೇಬೇಕು, ಬೇರೆ ದಾರಿಯೇ ಇಲ್ಲ ಎಂದು ಯಡಿಯೂರಪ್ಪ ಮಾತನಾಡಿದ್ದಾರೆ. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜುಗೌಡ ಅವರಿಗೆ ನಿಗಮ‌-ಮಂಡಳಿ ಕೊಟ್ಟರೂ ಬೇಡ ಎಂದಿದ್ದಾರೆ. ಈಗ ಏನು ಮಾಡುವುದು ಎಂದು ಚರ್ಚಿಸಿದ್ದಾರೆ. ಇದೇ ಸಭೆಯಲ್ಲಿ ಮುನಿರತ್ನ ಅವರಿಗೆ ಶಾಕ್ ಆಗುವಂತಹ ನಿರ್ಣಯವನ್ನು ಕೋರ್ ಕಮಿಟಿ ಸಬೆಯಲ್ಲಿ ತೆಗೆದುಕೊಳ್ಳಲಾಗಿದೆ. ಏನದು?

ಮುನಿರತ್ನರಿಗೆ ಶಾಕ್ ಕೊಟ್ಟ ಸಭೆ

ಮುನಿರತ್ನರಿಗೆ ಶಾಕ್ ಕೊಟ್ಟ ಸಭೆ

ಆರ್‌ಆರ್ ನಗರ ಟಿಕೆಟ್ ಯಾರಿಗೆ ಕೊಡಬೇಕು ಎಂಬುದು ಕಗ್ಗಂಟಾಗಿದೆ. ಹೀಗಾಗಿ ಇಬ್ಬರೂ ಆಕಾಂಕ್ಷಿಗಳ ಹೆಸರುಗಳನ್ನು ಹೈಕಮಾಂಡ್‌ಗೆ ಕಳುಹಿಸಲು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ತುಳಸಿ ಮುನಿರಾಜುಗೌಡ ಹಾಗೂ ಮಾಜಿ ಶಾಸಕ ಮುನಿರತ್ನ ಇಬ್ಬರ ಹೆಸರುಗಳನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲು ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಉಪಚುನಾವಣೆ: ಡಿ.ಕೆ.ಶಿವಕುಮಾರ್ ಹೇಳಿದ ಅಚ್ಚರಿಯ ಅಭ್ಯರ್ಥಿ ಇವರೇನಾ?

ಮುನಿರತ್ನ ಮತ್ತೆ ಅತಂತ್ರ?

ಮುನಿರತ್ನ ಮತ್ತೆ ಅತಂತ್ರ?

ಕೋರ್ ಕಮಿಟಿ ಸಭೆಯ ಈ ನಿರ್ಧಾರದಿಂದ ಸಹಜವಾಗಿಯೇ ಮಾಜಿ ಶಾಸಕ ಮುನಿರತ್ನ ಅವರ ಭವಿಷ್ಯ ಮತ್ತೊಮ್ಮೆ ಅತಂತ್ರವಾಗಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಿಜೆಪಿ ಸೇರುವ ಮೂಲಕ ಮೊದಲೇ ಅತಂತ್ರರಾಗಿರುವ ಮುನಿರತ್ನ ಅವರಿಗೆ ರಾಜ್ಯ ಕೋರ್ ಕಮಿಟಿಯ ಈ ನಿರ್ಧಾರ ಮತ್ತಷ್ಟು ಕಂಗೆಡುವಂತೆ ಮಾಡಿದೆ.

ಎರಡು ಹೆಸರುಗಳನ್ನು ಬಿಜೆಪಿ ಕೇಂದ್ರ ಚುನಾವಣೆ ಸಮಿತಿಗೆ ಕಳುಹಿಸಿದರೂ ಅಂತಿಮವಾಗಿ ನಿರ್ಧಾರ ಮಾಡುವವರು ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು. ಹೀಗಾಗಿ ಯಾರೂ ಕೂಡ ಮುನಿರತ್ನ ಅವರಿಗೆ ಟಿಕೆಟ್ ಕೊಡಿಸಲು ಪ್ರಭಾವ ಬೀರುವುದು ಸಾಧ್ಯವಾಗುವುದಿಲ್ಲ ಎಂಬುದು ಸಿಎಂ ಯಡಿಯೂರಪ್ಪ ಅವರನ್ನೂ ಚಿಂತೆಗೀಡು ಮಾಡಿದೆ ಎನ್ನಲಾಗಿದೆ.

ಶಿರಾ ಹಾಗೂ ಬೆಳಗಾವಿ

ಶಿರಾ ಹಾಗೂ ಬೆಳಗಾವಿ

ಆರ್ಆರ್ ನಗರದ ಜೊತೆಗೆ ಶಿರಾ ಕ್ಷೇತ್ರದ ಚುನಾವಣೆಗೂ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಶಿರಾ ಕ್ಷೇತ್ರಕ್ಕೆ ಮೂರು ಆಕಾಂಕ್ಷಿಗಳ ಹೆಸರುಗಳನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಎಸ್.ಆರ್. ಗೌಡ, ಬಿ.ಕೆ. ಮಂಜುನಾಥ್ ಮತ್ತು ರಾಜೇಶ್ ಗೌಡ ಹೆಸರು ರವಾನೆ ಮಾಡಲು ನಿರ್ಧಾರ ಮಾಡಲಾಗಿದೆ.

ಶಿರಾ, ಆರ್‌ಆರ್‌ ನಗರ ಉಪ ಚುನಾವಣೆಗೆ ದಿನಾಂಕ ಪ್ರಕಟ!

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಪರಿಸ್ಥಿತಿ ಮತ್ತು ಸಂಭಾವ್ಯ ಅಭ್ಯರ್ಥಿಗಳ ವಿಚಾರವಾಗಿ ವರದಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರಿಗೆ ಸಭೆಯಲ್ಲಿ ಸೂಚನೆ ಕೊಡಲಾಗಿದೆ. ಜೊತೆಗೆ ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣೆಗೆ ಕೂಡಾ ಕೋರ್ ಕಮಿಟಿ ಸಭೆಯಲ್ಲಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ.

ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ

ಸತ್ಯಶೋಧನಾ ಸಮಿತಿ ವರದಿ ಸಲ್ಲಿಕೆ

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಸತ್ಯಶೋಧನಾ ಸಮಿತಿ ವರದಿಯನ್ನು ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪಕ್ಷದ ವತಿಯಿಂದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವರದಿ ಸಲ್ಲಿಸಿದ್ದಾರೆ. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವ ಸಂಬಂಧ ರಾಜ್ಯ ಸರ್ಕಾರ ಕ್ರಮ ವಹಿಸಬೇಕು ಎಂದು ಇದೇ ಸಂದರ್ಭದಲ್ಲಿ ಕಟೀಲ್ ಸರ್ಕಾರಕ್ಕೆ ಸೂಚಿಸಿದ್ದಾರೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಸಚಿವ ಸಿ.ಟಿ, ರವಿ ಅವರಿಗೆ ಕೋರ್ ಕಮಿಟಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಗಿದೆ. ಹಾಗೆ ಇತ್ತೀಚೆಗೆ ನಿಧನರಾದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

   ಉಪಚುನಾವಣೆ , Rajarajeshwari ಕ್ಷೇತ್ರದ್ದೆ TENSION!! | Oneindia Kannada

   English summary
   Candidates for the RR Nagar and Sira assembly by elections have been finalized at the state BJP core committee meeting held at malleshwaram state bjp office in bengaluru. Former MLA Muniratna is worried that the Core Committee has sent two names to the RR Nagar constituency to the BJP Central Election Committee.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X