ರಸ್ತೆ ಅಪಘಾತ, ಮಲ್ಯ ಆಸ್ಪತ್ರೆಯಿಂದ ವಿಷ್ಣು ಪರಾರಿ!
ಬೆಂಗಳೂರು, ಸೆಪ್ಟೆಂಬರ್ 29 : ಡಿ.ಕೆ.ಆದಿಕೇಶವಲು ನಾಯ್ಡು ಅವರ ಮೊಮ್ಮಗ ವಿಷ್ಣು ಮಲ್ಯ ಆಸ್ಪತ್ರೆಯಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಸೌತ್ ಎಂಡ್ ಸರ್ಕಲ್ ಬಳಿ ನಡೆದ ಅಪಘಾತದಲ್ಲಿ ವಿಷ್ಣು ಆರೋಪಿಯಾಗಿದ್ದು, ಪೊಲೀಸರ ವಶದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಸೆ.28ರ ತಡರಾತ್ರಿ ನಡೆದ ರಸ್ತೆ ಅಪಘಾತದ ಬಳಿಕ ಪರಾರಿಯಾಗಲು ಯತ್ನಿಸಿದ್ದ ವಿಷ್ಣು (27)ವನ್ನು ಸ್ಥಳೀಯರು ಹಿಡಿದು, ಪೊಲೀಸರಿಗೆ ಒಪ್ಪಿಸಿದ್ದರು. ಅಪಘಾತದಲ್ಲಿ ಗಾಯಗೊಂಡಿದ್ದ ವಿಷ್ಣುವನ್ನು ಜಯನಗರ ಸಂಚಾರಿ ಠಾಣೆ ಪೊಲೀಸರು ಮಲ್ಯ ಆಸ್ಪತ್ರೆಗೆ ದಾಖಲು ಮಾಡಿದ್ದರು.

ವಿಷ್ಣುವನ್ನು ಆಸ್ಪತ್ರೆಗೆ ದಾಖಲು ಮಾಡಿದ ಬಳಿಕ, ಒಬ್ಬ ಪೇದೆಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿತ್ತು. ಆದರೆ, ಶುಕ್ರವಾರ ಮುಂಜಾನೆ 6.15ಕ್ಕೆ ವಿಷ್ಣು ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ವಿಷ್ಣು ತುರ್ತು ದ್ವಾರದ ಮೂಲಕ ಹೊರಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
'ಇಂದು ಬೆಳಗ್ಗೆ ನೋಡಿದಾಗ ವಿಷ್ಣು ಪರಾರಿಯಾಗಿರುವುದು ತಿಳಿದುಬಂದಿದೆ. ಆಸ್ಪತ್ರೆಗೂ ಇದಕ್ಕೂ ಸಂಬಂಧವಿಲ್ಲ. ಚಿಕಿತ್ಸೆ ಕೊಡುವುದು ಮಾತ್ರ ನಮ್ಮ ಕೆಲಸ. ಆಸ್ಪತ್ರೆ ಸಿಬ್ಬಂದಿಗಳು ವಿಷ್ಣು ಪರಾರಿಯಾಗಲು ಸಹಕಾರ ನೀಡಿಲ್ಲ' ಎಂದು ಮಲ್ಯ ಆಸ್ಪತ್ರೆಯ ವೈದ್ಯರಾದ ಡಾ.ಮಲ್ಲಿಕಾರ್ಜುನ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.












Click it and Unblock the Notifications