ಅಪಘಾತ: ಫ್ಲೈಓವರ್ನಿಂದ ಕೆಳಗೆ ಬಿದ್ದು ಬೈಕ್ ಸವಾರ ಸಾವು
ಬೆಂಗಳೂರು, ಫೆಬ್ರವರಿ 14: ಇನ್ನೋವಾ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲದ ಬಳಿ ನಡೆದಿದೆ.
ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲ್ಸೇತುವೆಯಿಂದ 40 ಅಡಿ ಕೆಳಗೆ ಬಿದ್ದಿದ್ದಾರೆ.ಬೈಕಿನಲ್ಲಿ ಹಿಂಬದಿ ಕುಳಿತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತ ಬೆಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.
ಬೆಂಗಳೂರಿನಿಂದ ತುಮಕೂರು ಕಡೆ ಬರುವ ವೇಳೆ ವೇಗವಾಗಿ ಬಂದ ಇನ್ನೋವಾ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕಿನಲ್ಲಿದ್ದ ಆಂಧ್ರ ಮೂಲದ 25 ವರ್ಷದ ಸಂಜಯ್ ಕುಮಾರ್ ಫ್ಲೈಓವರ್ ರಸ್ತೆಯಿಂದ 40 ಅಡಿ ಕೆಳಗೆ ಬಿದ್ದ ವೇಳೆ ತಲೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ನರಳಾಡಿ ಸಾವನ್ನಪ್ಪಿದ್ದಾನೆ.

ಅಪಘಾತದ ವೇಳೆ ಜನರು ಧಾವಿಸುವ ದೃಶ್ಯ ಕೂಡ ಸೆರೆಯಾಗಿದೆ. ಸದ್ಯ ಇನ್ನೋವಾ ಕಾರು ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.












Click it and Unblock the Notifications