ಪ್ರತ್ಯೇಕ ರಾಜ್ಯ ಬೇಕು ಎಂದ ಶಾಸಕ ಶ್ರೀರಾಮುಲು ವಿರುದ್ಧ ಕೇಸ್
ಬೆಂಗಳೂರು, ಆಗಸ್ಟ್ 02: ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಆ ಭಾಗದ ಜನರಿಗೆ ಅನ್ಯಾಯವಾದರೆ ರಾಜೀನಾಮೆ ನೀಡಲು ಸಿದ್ಧ, ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಲು ಸಿದ್ಧ ಎಂದ್ ಮೊಳಕಾಲ್ಮೂರು ಶಾಸಕ ಬಿ ಶ್ರೀರಾಮುಲು ಅವರು ನೀಡಿದ್ದ ಹೇಳಿಕೆ ವಿರುದ್ಧ ದೂರು ದಾಖಲಾಗಿದೆ.
ತೆಲಂಗಾಣ ಮಾದರಿ ಹೋರಾಟ ಮಾಡುತ್ತೇವೆ. ಹಣ, ಜಾತಿಗೋಸ್ಕರ ಸಿಎಂ ಕುಮಾರಸ್ವಾಮಿ ಅವರು ತಮ್ಮನ್ನು ಮಾರಿಕೊಂಡಿದ್ದಾರೆ. ಉತ್ತರ ಕರ್ನಾಟಕ್ಕೆ ಅನ್ಯಾಯವಾದರೆ ಕ್ರಾಂತಿಯಾಗುತ್ತದೆ ಎಂದಿದ್ದರು.
"ಮತ ನೀಡಲಿಲ್ಲವೆಂಬ ಕಾರಣಕ್ಕೆ ಉತ್ತರ ಕರ್ನಾಟಕವನ್ನು ಅವಹೇಳನ ಮಾಡುತ್ತಿರುವ ಮುಖ್ಯಮಂತ್ರಿಗಳು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ" ಎಂದು ಬಿಜೆಪಿ ಮುಖಂಡ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಹೇಳಿದ್ದಾರೆ.

ಪ್ರತ್ಯೇಕ ರಾಜ್ಯ ಸ್ಥಾನಮಾನ ನೀಡುವ ಕುರಿತು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಿ.ಶ್ರೀರಾಮುಲು ವಿರುದ್ಧ ಕನ್ನಡ ಅನುಷ್ಠಾನ ಮಂಡಳಿಯ ಸದಸ್ಯರು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜುಲೈ 27ರಂದು ಬಳ್ಳಾರಿಯ ವೇದಿಕೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶ್ರೀರಾಮುಲು, ಉತ್ತರ ಕರ್ನಾ ಟಕ ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣದ ಮಾದರಿಯಲ್ಲಿ ಹೋರಾಟ ಮಾಡಬೇಕು ಆರಂಭಿಸಬೇಕು. ಇದಕ್ಕಾಗಿ ಆಗಸ್ಟ್ 2ರಂದು ಪ್ರತ್ಯೇಕ ಉತ್ತರ ಕರ್ನಾಟಕ ಬಂದ್ಗೆ ಕೂಡಾ ಕರೆ ನೀಡಿದ್ದರು.
ಬಿ.ಶ್ರೀರಾಮುಲು ಅವರು ಅಧಿಕಾರಯುತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಈ ರೀತಿ ಮಾತನಾಡಿರೋದು ತಪ್ಪು ಎಂದು ಕರ್ನಾಟಕ ರಾಜ್ಯ ಪುನರ್ ವಿಂಗಡಣೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿದ್ದಾರೆ.
ಅಖಂಡ ಕರ್ನಾಟಕದ ಏಕತೆಗೆ ಧಕ್ಕೆ ತರುವ ಹೇಳಿಕೆ ನೀಡಿದ ಶ್ರೀರಾಮುಲು ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘಟಕ ಪ್ರಸಾದ್ ಎಂಬುವರು ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications