ಬೆಂಗಳೂರು: ಹಿಟ್ ಆಂಡ್ ರನ್ ಕ್ಯಾಶಿಯರ್ ಸಾವು

ಪುಟ್ಟಸ್ವಾಮಿಗೌಡ (43) ಮೃತಪಟ್ಟ ದುರ್ದೈವಿ. ಜೂ.4 ಬುಧವಾರ ರಾತ್ರಿ ಹೊಂಡಾ ಆಕ್ಟೀವಾದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಶೇಷಾದ್ರಿಪುರಂನ ಕೃಷ್ಣ ಪ್ಲೋರ್ಮಿಲ್ ಜಂಕ್ಷನ್ ಬಳಿ ಅತಿ ವೇಗದಿಂದ ಬಂದ ವಾಹನವೊಂದು ಪುಟ್ಟಸ್ವಾಮಿಗೌಡರವರಿದ್ದ ಆಕ್ಟೀವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ಕೆಳಗೆ ಬಿದ್ದಿದ್ದ ಇವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಈ ಅಪಘಾತಕ್ಕೆ ಅಪರಿಚಿತ ವಾಹನದ ಚಾಲಕನ ಅತಿವೇಗವೇ ಕಾರಣ ಎಂದು ಹೇಳಲಾಗುತ್ತಿದ್ದು, ಸಂಬಂಧಿ ಶ್ರೀನಿವಾಸ್ ಎಂಬವರು ಹೈಗ್ರೌಂಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ರೂಂ ಬಾಡಿಗೆ ಕೇಳುವ ನೆಪದಲ್ಲಿ ಕಳ್ಳತನ: ರೂಂ ಬಾಡಿಗೆಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಅಪರಿಚಿತರು ಮಾಲೀಕನಿಗೆ ಚಾಕು ತೋರಿಸಿ 21 ಸಾವಿರ ರೂ ಹಣ ಮತ್ತು ಮೊಬೈಲ್ ಫೋನ್ ಕದ್ದಿರುವ ಘಟನೆ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಶೋಕನಗರದ ಪುಷ್ಪಕರಿಂಗ್ ಸರ್ವಿಸ್ ಅಪಾರ್ಟ್ಮೆಂಟ್ ಅನಂದ್ಕುಮಾರ್ ಎಂಬವರ ಮನೆಗೆ ಬುಧವಾರ ರಾತ್ರಿ ಹತ್ತು ಗಂಟೆಯ ವೇಳೆ 7 ಜನ ಅಪರಿಚಿತರು ರೂಂ ಬಾಡಿಗೆಗೆ ಕೇಳುವ ನೆಪದಲ್ಲಿ ಬಂದಿದ್ದಾರೆ. ಮನೆಗೆ ಬಾಗಿಲನ್ನು ತೆರೆಯುತ್ತಿದ್ದಂತೆ ಚಾಕು ತೋರಿಸಿ ಅವರಲ್ಲಿದ್ದ ಹಣ ಮತ್ತು ನೋಕಿಯಾ ಮೊಬೈಲ್ನ್ನು ಕದ್ದು ಪರಾರಿಯಾಗಿದ್ದಾರೆ. ಅಶೋಕನಗರ ಪೊಲೀಸ್ ಠಾಣೆಯಲ್ಲಿ ಅನಂದ್ಕುಮಾರ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications