Cauvery dispute: ಬೆಂಗಳೂರಿನಲ್ಲಿ ಪ್ರತಿಭಟನೆ ವೇಳೆ ಬಿ.ಎಸ್.ವೈ, ಬಸವರಾಜ ಬೊಮ್ಮಾಯಿ ಪೊಲೀಸರ ವಶಕ್ಕೆ
ಬೆಂಗಳೂರು, ಸೆಪ್ಟೆಂಬರ್, 23: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಹಾಗೆಯೇ ಇಂದು ಕೂಡ ಬೆಂಗಳೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಸಲಾಗಿತ್ತು. ಈ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದ ಗೌಡ, ಸಂಸದರಾದ ಪಿ.ಸಿ.ಮೋಹನ್, ರಾಜ್ಯದ ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಬಿಜೆಪಿಯ 3 ಮಹಾನಗರ ಜಿಲ್ಲೆಗಳ ಅಧ್ಯಕ್ಷರು, ನಗರಪಾಲಿಕೆ ಮಾಜಿ ಸದಸ್ಯರು ಭಾಗವಹಿಸಿದ್ದರು.

ಈ ಬಗ್ಗೆ ಮಾತನಾಡಿದ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರು, ಕಾವೇರಿ ನೀರಿನ ವಿಚಾರವೂ ಸೇರಿ ವಿವಿಧ ರಂಗಗಳಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸುವಂತೆ ಅವರು ಆಗ್ರಹಿಸಲಾಯಿತು ಎಂದರು.
ಕಾವೇರಿ ಜಲಾನಯನ ಪ್ರದೇಶದ ಜನರು ನೀರಿಗಾಗಿ ಗುಳೆ ಹೋಗುವ ಸ್ಥಿತಿ ಬರಲಿದೆ. ಕರ್ನಾಟಕ ಮತ್ತು ಕನ್ನಡಿಗರ ಹಿತ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಪಿ.ಸಿ.ಮೋಹನ್ ವಾಗ್ದಾಳಿ ನಡೆಸಿರು. ಇನ್ನು ತಮಿಳುನಾಡಿನಲ್ಲಿ ಉತ್ತಮ ಮಳೆ ಆಗಿದ್ದರೂ, ಇಲ್ಲಿ ನೀರಿಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಬಿಜೆಪಿ ನಾಯಕರ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ವಶಕ್ಕೆ ಪಡೆದರು ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications