ಬೆಂಗಳೂರಿನಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ
ಬೆಂಗಳೂರು, ಸೆಪ್ಟೆಂಬರ್ 12 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಕಾವೇರಿ ಹೋರಾಟದ ಕಿಚ್ಚು ತೀವ್ರಗೊಂಡಿದೆ. ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ಅವರು ಈ ಕುರಿತು ಸೋಮವಾರ ಸಂಜೆ ಆದೇಶ ಹೊರಡಿಸಿದರು. ತಕ್ಷಣದಿಂದ ಜಾರಿಗೆ ಬರುವಂತೆ 17 ಗಂಟೆಗಳ ಅವಧಿಗೆ ಸಿಆರ್‌ಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಚಿತ್ರಗಳು : ಹಿಂಸಾಚಾರಕ್ಕೆ ತಿರುಗಿದ ಕಾವೇರಿ ಪ್ರತಿಭಟನೆ]

ಬೆಂಗಳೂರಿನ ಮೈಸೂರು ರಸ್ತೆ, ಸುಂಕದಕಟ್ಟೆ, ನಾಯಂಡಹಳ್ಳಿ, ವಿಜಯನಗರ, ಹಂಪಿ ನಗರ, ಮಾಗಡಿ ರಸ್ತೆ, ಪೀಣ್ಯ ಮುಂತಾದ ಸ್ಥಳಗಳಲ್ಲಿ ತಮಿಳುನಾಡಿಗೆ ಸೇರಿದ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.[ಬೆಂಗಳೂರಿನಲ್ಲಿರುವ ತಮಿಳರ ಪ್ರದೇಶಕ್ಕೆ ಬಿಗಿ ಭದ್ರತೆ]
15 ಸಾವಿರ ಪೊಲೀಸ್, 3 ಸಾವಿರ ಗೃಹ ರಕ್ಷಕ ದಳ, 270 ಚೀತಾ ವಾಹನಗಳನ್ನು ಬೆಂಗಳೂರಿನಲ್ಲಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆಯಲ್ಲಿ ತೊಡಗಿದ್ದ 200ಕ್ಕೂ ಅಧಿಕ ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.












Click it and Unblock the Notifications