Cauvery Issue: ನಾಳೆ ಅ.10ಕ್ಕೆ ವಿವಿಧೆಡೆ 'ರಾಷ್ಟ್ರೀಯ ಹೆದ್ದಾರಿ'ಗಳು ಬಂದ್ ಆಗಲಿವೆ: ವಾಟಾಳ್ ನಾಗರಾಜ್ ಘೋಷಣೆ

ಸರ್ಕಾರದ ನಡೆಗೆ ತೀವ್ರ ಆಕ್ಷೇಪ ಮುಂದುವರಿದಿದೆ. ಈಗಾಗಲೇ ಬೆಂಗಳೂರು ಮತ್ತು ಕರ್ನಾಟಕ ಜನತೆ ಎರಡು ಬಂದ್‌ಗಳನ್ನು ಎದುರಿಸಿದ್ದಾರೆ. ಇದೀ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಗಳವಾರ ಅಕ್ಟೋಬರ್ 10ರಂದು ಬೆಳಗ್ಗೆ ಹೊಸಕೋಟೆ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು. ಅದಷ್ಟೇ ಅಲ್ಲದೇ ಮದ್ರಾಸ್ ರಸ್ತೆ, ತಮಿಳುನಾಡು ಹೆದ್ದಾರಿ ಬಂದ್ ಮಾಡುವ ಮೂಲಕ ಪ್ರತಿಭಟನೆ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ಅವರು ಮಾಹಿತಿ ನೀಡಿದ್ದಾರೆ.

cauvery-issue-vatal-nagaraj

ಇತ್ತೀಚೆಗೆ ಅತ್ತಿಬೆಲೆ ಬಳಿ ಪಟಾಕಿ ಮಳಿಗೆ-ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದೆ. ಈ ವೇಳೆ ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ. ಈ ದುರಂತ ಹಿನ್ನೆಲೆಯಲ್ಲಿ ಅತ್ತಿಬೆಲೆ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ಬದಲು ಹೊಸಕೋಟೆ ಬಳಿ ಕಾವೇರಿ ನೀರಿಗಾಗಿ ಚಳವಳಿ ಮಾಡಲಿದ್ದೇವೆ ಎಂದರು.

ಸರ್ಕಾರದ ವಿರುದ್ಧ ಆಕ್ರೋಶ: ಮುಂದುವರಿದ ಪ್ರತಿಭಟನೆ

ರಾಜ್ಯದಲ್ಲಿ ಮಳೆ ಇಲ್ಲದೇ ಜನರ ಬರಗಾಲ ಎದುರಿಸಿದ್ದಾರೆ. ರೈತರು ಸಂಕಷ್ಟ ಎದುರಿಸುವಂತಾಗಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನಿರೀಕ್ಷೆಯಂತೆ ಮಳೆ ಆಗಿಲ್ಲ. ಹೀಗಾಗಿ ಜಲಾಶಯದಲ್ಲಿ ನೀರು ಸಂಗ್ರಹದ ಪ್ರಮಾಣ ತೀರಾ ಕಡಿಮೆ ಇದೆ. ಹೀಗಿದ್ದರೂ ಸಹಿತ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಸಾವಿರಾರು ಕ್ಯೂಸೆಕ್ಸ್ ನೀರು ಹರಿಸುವಂತೆ ನಿರ್ದೇಶನ ನೀಡುತ್ತಿದೆ.

cauvery-issue-vatal-nagaraj

ಕರ್ನಾಟಕ ಸರ್ಕಾರ ಎಲ್ಲ ಆದೇಶಗಳನ್ನು ಪಾಲಿಸುವ ಮೂಲಕ ರಾಜ್ಯದ ರೈತರಿಗೆ ಅನ್ಯಾಯ ಮಾಡಿದೆ. ಈ ಹಿಂದೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ್ ಶಾಂತ್ ಕುಮಾರ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಒಂದಾಗಿ ಬೆಂಗಳೂರು ಬಂದ್ ಮಾಡಿದ್ದವು.

ನಂತರ ಕಳೆದ ಸೆಪ್ಟಂಬರ್ 29ರಂದು ಶುಕ್ರವಾರ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್, ಕರವೇ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದವು. ಹೀಗಿದ್ದರೂ ಸಹಿತ ಕಾವೇರಿ ನೀರು ಹರಿದು ಹೋಗುತ್ತಿದೆ. ಇದರ ವಿರುದ್ಧ ರಾಷ್ಟ್ರೀಯ ಹೆದ್ದಾರಿ ತಡೆದು ಮತ್ತೆ ಪ್ರತಿಭಟನೆಗೆ ಕನ್ನಡಪರ ಸಂಘಟನೆಗಳು ಸಜ್ಜಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+