ಕಾವೇರಿ ನೀರು ಹಂಚಿಕೆ: ದೆಹಲಿಯಲ್ಲಿ ಸಭೆ ಕರೆದ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 15: ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿನ ಕುರಿತು ರಾಜ್ಯದ ಸಂಸತ್ ಸದಸ್ಯರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.16 ರಂದು ದೆಹಲಿಯಲ್ಲಿ ಹಮ್ಮಿಕೊಂಡಿದ್ದಾರೆ.
ಫೆ.16ರಂದು ಸುಪ್ರೀಂಕೋರ್ಟ್ ಕಾವೇರಿ ನೀರು ಹಂಚಿಕೆ ಕುರಿತಂತೆ ಮಹತ್ವದ ತೀರ್ಪು ನೀಡಿತ್ತು. 16 ರಿಂದ ಮೂರು ದಿನ ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ರಾತ್ರಿ ತೆರಳಲಿದ್ದಾರೆ. ಮೊದಲ ದಿನವೇ ಸಂಜೆ ಸಭೆ ನಡೆಸಲು ಉದ್ದೇಶಿಸಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸದಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಕರ್ನಾಟಕಕ್ಕೆ 14.75 ಟಿಎಂಸಿ ಅಡಿ ಹೆಚ್ಚುವರಿ ನೀರು ಹಂಚಿಕೆ ಮಾಡಿ, ತಮಿಳನಾಡಿಗೆ ನೀರನ್ನು ಕಡಿತಗೊಳಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಕರ್ನಾಟಕ ತಮಿಳುನಾಡಿಗೆ ಬಿಡುತ್ತಿದ್ದ 192 ಟಿಎಂಸಿ ಅಡಿ ನೀರನ್ನು ಕಡಿತಗೊಳಿಸಿ 177.75 ಟಿ.ಎಂಸಿ ಅಡಿ ನೀರನ್ನಷ್ಟೇ ಬಿಡಲು ಸುಪ್ರೀಂ ಆದೇಶಿಸಿದೆ. ಇದರಿಂದ ಕರ್ನಾಟಕ ಹೆಚ್ಚುವರಿ 14.25 ನೀರನ್ನು ಉಳಿಸಿಕೊಳ್ಳಬಹುದಾಗಿದೆ.












Click it and Unblock the Notifications