Bengaluru: ತಾಪಮಾನ ಹೆಚ್ಚಳದಿಂದ ಕಾವೇರಿ ನೀರಿನ ಅಭಾವ- ಯಾವ ಏರಿಯಾಗಳಲ್ಲಿ ತಿಳಿಯಿರಿ
ಬೇಸಿಗೆಯ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಮನವಿ ಮಾಡಲಾಗಿದೆ.
ಬೆಂಗಳೂರು, ಮಾರ್ಚ್ 17: ಬೇಸಿಗೆಯ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿಯಲ್ಲಿ ನೀರಿನ ಅಭಾವ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನೀರನ್ನು ಕುಡಿಯಲು ಮತ್ತು ಅಡುಗೆಗೆ ಮಾತ್ರ ಬಳಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಾರ್ವಜನಿಕರಿಗೆ ಮನವಿ ಮಾಡಿದೆ. ಕಾವೇರಿ ನೀರನ್ನು ಮಿತವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.
ಬೆಂಗಳೂರು ಪೂರ್ವದ ಕೆಲವು ಪ್ರದೇಶಗಳಲ್ಲಿ ಅಸಮರ್ಪಕ ನೀರು ಪೂರೈಕೆಯ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಪ್ರದೇಶಗಳಲ್ಲಿ ಹೆಚ್ಚು ಶುಲ್ಕ ವಿಧಿಸುವ ನೀರಿನ ಟ್ಯಾಂಕರ್‌ಗಳ ಮೇಲೆ ಜನರು ಅವಲಂಬಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರತಿ ದಿನ ಬೆಂಗಳೂರಿಗೆ 1,450 ಮಿಲಿಯನ್ ಲೀಟರ್ ಕಾವೇರಿ ಕುಡಿಯುವ ನೀರು ಪೂರೈಕೆಯಾಗುತ್ತಿದೆ ಎಂದು ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಶೌಚಾಲಯ, ಉದ್ಯಾನ ಹಾಗೂ ವಾಹನಗಳನ್ನು ಸ್ವಚ್ಛಗೊಳಿಸಲು ಕಾವೇರಿ ನೀರನ್ನು ಬಳಸದಂತೆ ನಿವಾಸಿಗಳಿಗೆ ಮನವಿ ಮಾಡಲಾಗಿದೆ. ಅಂತಹ ಉದ್ದೇಶಗಳಿಗಾಗಿ ಕೊಳವೆ ಬಾವಿ ನೀರು ಮತ್ತು ತ್ಯಾಜ್ಯ ನೀರಿನ ಸ್ಥಾವರಗಳಿಂದ ಸಂಸ್ಕರಿಸಿದ ನೀರನ್ನು ಬಳಸಬೇಕು ಎಂದೂ ಮಂಡಳಿ ಕೇಳಿಕೊಂಡಿದೆ.
'ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಮಂಡಳಿಯ ಅಧೀನದಲ್ಲಿ 68 ಲಾರಿ ಟ್ಯಾಂಕರ್‌ಗಳ ಸಹಾಯದಿಂದ ನಗರದಲ್ಲಿ ನೀರಿನ ಕೊರತೆ ಇರುವ ಪ್ರದೇಶಗಳಿಗೆ ನೀರು ಸರಬರಾಜು ಮಾಡಲಾಗುವುದು. ಅಲ್ಲದೆ, ಸುಮಾರು 10,710 ಸಾರ್ವಜನಿಕ ಕೊಳವೆ ಬಾವಿಗಳನ್ನು ಮಂಡಳಿಯಿಂದ ನಿರ್ವಹಣೆ ಮಾಡಲಾಗುತ್ತಿದ್ದು, ಹೆಚ್ಚುವರಿಯಾಗಿ ನೀರು ಸರಬರಾಜು ಮಾಡಲಾಗುತ್ತಿದೆ' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

35 ಉಪ ವಿಭಾಗಗಳಿಗೆ ನೀರು ಸರಬರಾಜಿನ ಮೇಲ್ವಿಚಾರಣೆ ಮಾಡಲು ಮಂಡಳಿಯ ಅಧಿಕಾರಿಗಳನ್ನು ನೇಮಿಸಲಾಗಿದೆ ಮತ್ತು ಉಪವಿಭಾಗಗಳಲ್ಲಿ ವ್ಯಾಪಕ ತಪಾಸಣೆ ನಡೆಸಲಾಗುತ್ತಿದೆ ಎಂದೂ ಪ್ರಕಟಣೆ ಹೇಳಿದೆ.
ಸಾಮಾನ್ಯವಾಗಿ ಬೇಸಿಗೆಯಲ್ಲಿ ಶೇ. 5 ರಷ್ಟು ಹೆಚ್ಚುವರಿ ನೀರಿನ ಬೇಡಿಕೆ ಬರಲಿದ್ದು, ನೀರು ಉಳಿಸದಿದ್ದಲ್ಲಿ ಸೌಕರ್ಯ ಕಲ್ಪಿಸುವುದು ಕಷ್ಟ ಎಂದು ಮಂಡಳಿಯ ಅಧಿಕಾರಿಯೊಬ್ಬರು 'ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಗೆ ತಿಳಿಸಿದ್ದಾರೆ. ಹೊಸದಾಗಿ ಸೇರ್ಪಡೆಯಾದ 110 ಗ್ರಾಮಗಳಿಗೆ ಇನ್ನೂ ನೀರಿನ ಸಂಪರ್ಕ ಕಲ್ಪಿಸಲಾಗಿಲ್ಲ. ಮಾರತಹಳ್ಳಿ, ಸರ್ಜಾಪುರ, ಕೆಆರ್ ಪುರಂ ಮತ್ತು ವರ್ತೂರು ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.
ಕಾವೇರಿ ನೀರಿನ ಅಭಾವದ ಕುರಿತು ಮಾತನಾಡಿರುವ ಕೆಆರ್ ಪುರಂನ ಫ್ಲಾಟ್ ಮಾಲೀಕ ಶ್ರೀ ಕುಮಾರ್ ಅವರು, ತಮ್ಮ ಅಪಾರ್ಟ್‌ಮೆಂಟ್ ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬಿತವಾಗಿದೆ. ಆದರೆ ಇಂಧನ ವೆಚ್ಚದಲ್ಲಿ ಹೆಚ್ಚಳವನ್ನು ಉಲ್ಲೇಖಿಸಿ ಟ್ಯಾಂಕರ್‌ಗಳ ಮಾಲಿಕರು ಹೆಚ್ಚಿನ ಬೆಲೆಗೆ ಬೇಡಿಕೆಯಿಟ್ಟಿದ್ದಾರೆ ಎಂದು ಹೇಳಿದ್ದಾರೆ.
5,000 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕರ್‌ಗೆ ರೂ 700 ಆಗುತ್ತದೆ. ಹೆಚ್ಚುವರಿ ಇಂಧನ ವೆಚ್ಚವನ್ನು ವಿಧಿಸಲಾಗುವುದು ಎಂದು ಸೇವಾ ಪೂರೈಕೆದಾರರು ತಿಳಿಸಿದ್ದಾರೆ.
ನಗರದಲ್ಲಿ ಗುರುವಾರ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಕೆಲವು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಬೆಂಗಳೂರು ನಗರವು ಭಾನುವಾರ ನೀರು ಪೂರೈಕೆಯಲ್ಲಿ ವ್ಯತ್ಯಯವನ್ನು ಎದುರಿಸಲಿದೆ. 100 ಕ್ಕೂ ಹೆಚ್ಚು ಪ್ರದೇಶಗಳು ಪರಿಣಾಮ ಬೀರಲಿವೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
BWSSB ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ನ (BMRCL) ಕೊನೇನ ಅಗ್ರಹಾರ - ನಾಗವಾರ ನಮ್ಮ ಮೆಟ್ರೋ ಮಾರ್ಗದ ಬಳಿ ಹಾಕಲಾದ ಕೆಲವು ಪೈಪ್‌ಗಳನ್ನು ನವೀಕರಿಸಲು ಮತ್ತು ಸ್ಥಳಾಂತರಿಸಲು ಕೆಲಸ ಮಾಡುತ್ತದೆ ಮತ್ತು ಹೊಸ ಪೈಪ್‌ಗಳನ್ನು ನೀರು ಸರಬರಾಜು ಮಾರ್ಗದ ಜಾಲಕ್ಕೆ ಜೋಡಿಸುತ್ತದೆ.












Click it and Unblock the Notifications