Bengaluru Water Supply Cut: ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ, ಎಲ್ಲೆಲ್ಲಿ
ಬೆಂಗಳೂರು, ನವೆಂಬರ್ 11: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ವತಿಯಿಂದ ವೃಷಭಾವತಿ 220 ಕೆವಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರಕ್ಕೆ ಪ್ರವಹಿಸುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ ನವೆಂಬರ್ 14ರಂದು ರಾಜಧಾನಿ ಬೆಂಗಳೂರು ನಗರದ ವಿವಿಧೆಡೆ ಕುಡಿಯುವ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವೃಷಭಾವತಿ 220 ಕೆವಿ ವಿದ್ಯುತ್ ಸ್ಥಾವರದಿಂದ ತಾತಗುಣಿ ವಿದ್ಯುತ್ ಸ್ಥಾವರಕ್ಕೆ ಪ್ರವಹಿಸುವ 220 ಕೆವಿ ವಿದ್ಯುತ್ ಮಾರ್ಗದಲ್ಲಿರುವ 220 ಕೆವಿ High Level Bus GOS ಹಾಗೂ ಇತರೆ ಪರಿಕರಗಳನ್ನು ತುರ್ತಾಗಿ ಬದಲಾಯಿಸಲಾಗುತ್ತದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ತಾತಗುಣಿ 220 ಕೆವಿ ವಿದ್ಯುತ್ ಸ್ಥಾವರವನ್ನು ಹಾಗೂ ಕಾವೇರಿ ನೀರು ಸರಬರಾಜು ಯೋಜನೆಯ ಎಲ್ಲಾ ಹಂತಗಳ ಜಲರೇಚಕ ಯಂತ್ರಗಾರಗಳನ್ನು ದಿನಾಂಕ14-11-2024 ರಂದು ಬೆಳಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 12:30 ಗಂಟೆಯವರೆಗೆ ಅಂದರೆ ಒಟ್ಟು 02 ಗಂಟೆಗಳ ಕಾಲ ಸ್ಥಗಿತಗೊಳಿಸಲಾಘುತ್ತದೆ. ಹೀಗಾಗಿ ಈ ವ್ಯಾಪ್ತಿಯಿಂದ ಪೂರೈಕೆ ಆಗುವ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯವಾಗಲಿದೆ.
ಸಾರ್ವಜನಿಕರು ಸಹಕರಿಸುವ ಅಗತ್ಯ ಜೊತೆಗೆ ಆಯಾ ಪ್ರದೇಶಗಳ ಜನರು ಅಗತ್ಯ ನೀರನ್ನು ಸಂಗ್ರಹಿಸಿಟ್ಟುಕೊಳ್ಳಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನವೆಂಬರ್ 12ರವರೆಗೆ ವಿದ್ಯುತ್ ಕಡಿದ ಪ್ರದೇಶಗಳ ವಿವರ
ಬೆಂಗೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವತಿಯಿಂದ ಕಳೆದ ಎರಡು ದಿನಗಳಿಂದ ತುರ್ತು ನಿರ್ವಹಣೆ ಕಾರಣ ವಿದ್ಯುತ್ ಕಡಿತಗೊಂಡಿತ್ತು. ನಾಳೆ ನವೆಂಬರ್ 12ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿದ್ಯುತ್ ಪೂರೈಕಾ ಕೇಂದ್ರ ವ್ಯಾಪ್ತಿಯಲ್ಲಿ, ಹುಣಸೆಹಳ್ಳಿ, ದಿಬ್ಬೂರಹಳ್ಳಿ, ಪಲಿಚೆರ್ಲು, ಶಿಡ್ಲಘಟ್ಟ ವಿದ್ಯುತ್ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಇದರೊಂದಿಗೆ ವಿಜಯಪುರ ಪಟ್ಟಣ, ಯಲುವಹಳ್ಳಿ, ಕೋಲಾರ ರಸ್ತೆ ಹಾಗೂ ಸುತ್ತಮುತ್ತಲಿನ, ಗುರಪ್ಪನಮಠ, ಮಿತ್ತನಹಳ್ಳಿ, ರಸ್ತೆಗಳಲ್ಲಿ ವಿದ್ಯುತ್ ಸರಬರಾಜು ಆಗುವುದಿಲ್ಲ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications